ಹೊಸಬರ ಜೊತೆ ಮಹೇಶ್ ಬಾಬು
"ಅಪರೂಪ' ಟೈಟಲ್ ಫಿಕ್ಸ್
Team Udayavani, Apr 3, 2019, 3:00 AM IST
ನಿರ್ದೇಶಕ ಮಹೇಶ್ ಬಾಬು ಅವರ ಹೊಸ ಚಿತ್ರ ಸದ್ದಿಲ್ಲದೇ ಆರಂಭವಾಗಿದೆ ಎನ್ನುವ ಸುದ್ದಿಯನ್ನು ಕೆಲ ಸಮಯದ ಹಿಂದೆ ಇದೇ ಬಾಲ್ಕನಿಯಲ್ಲಿ ನೋಡಿರುತ್ತೀರಿ. ಈಗ ಈ ಚಿತ್ರದ ಕಡೆಯಿಂದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ಈ ಚಿತ್ರಕ್ಕೆ ಈಗ ಟೈಟಲ್ ಫಿಕ್ಸ್ ಆಗಿದೆ.
ಹೌದು, ಮಹೇಶ್ ಬಾಬು ತಮ್ಮ ನಿರ್ದೇಶನದ ಹೊಸಚಿತ್ರಕ್ಕೆ “ಅಪರೂಪ’ ಎನ್ನುವ ಟೈಟಲ್ ಇಟ್ಟಿದ್ದಾರೆ. ಎಂದಿನಂತೆ ಈ ಚಿತ್ರದಲ್ಲೂ ಮಹೇಶ್ ಬಾಬು ಮತ್ತೆ ಒಂದಷ್ಟು ಹೊಸ ಪ್ರತಿಭೆಗಳನ್ನು ಚಿತ್ರರಂಗಕ್ಕೆ ಪರಿಚಯಿಸುವ ಸಿದ್ಧತೆಯಲ್ಲಿದ್ದಾರೆ.
ಈ ಚಿತ್ರದ ಮೂಲಕ ನಾಯಕನಾಗಿ ಸುಘೋಷ್ ಮತ್ತು ನಾಯಕಿಯಾಗಿ ಕೃತಿಕಾ ಬೆಳ್ಳಿತೆರೆಗೆ ಪದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಮುಕ್ಕಾಲು ಭಾಗ ಚಿತ್ರೀಕರಣ ಪೂರ್ಣಗೊಂಡಿದ್ದು, ಎಲ್ಲಾ ಅಂದುಕೊಂಡಂತೆ ನಡೆದರೆ ಇದೇ ಜುಲೈ ವೇಳೆಗೆ ಅಪರೂಪ ‘ ಚಿತ್ರ ತೆರೆಗೆ ಬರಬಹುದು ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ