‘ಯು/ಐ’ ಮೇಕಿಂಗ್ ಗ್ಲಿಂಪ್ಸ್ ನಲ್ಲಿ ಉಪ್ಪಿ ಸ್ಟೈಲ್
Team Udayavani, Jan 3, 2023, 3:08 PM IST
ಸೆಟ್ಟೇರಿದಾಗಿನಿಂದಲೂ ಸ್ಯಾಂಡಲ್ವುಡ್ ಅಂಗಳದಲ್ಲಿ ಒಂದಷ್ಟು ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ರಿಯಲ್ ಸ್ಟಾರ್ ಉಪೇಂದ್ರ ನಟನೆ ಮತ್ತು ನಿರ್ದೇಶನದ “ಯು/ಐ’ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಇನ್ನು ಉಪೇಂದ್ರ ಅವರ ಸಿನಿಮಾ ಎಂದ ಕೂಡಲೇ ಸಿನಿಪ್ರಿಯರು ಮತ್ತು ಉಪ್ಪಿ ಫ್ಯಾನ್ಸ್ ಚಿತ್ತ ಸಹಜವಾಗಿಯೇ “ಯು/ಐ’ ಸಿನಿಮಾದ ಮೇಲೆ ಹೆಚ್ಚಾಗಿಯೇ ಇದ್ದು, ಆ ಕುತೂಹಲವನ್ನು ಕೊಂಚ ಮಟ್ಟಿಗೆ ತಣಿಸುವಂತೆ, ಚಿತ್ರತಂಡ “ಯು/ಐ’ ಸಿನಿಮಾದ ಗ್ಲಿಂಪ್ಸ್ ಬಿಡುಗಡೆ ಮಾಡಿದೆ.
ಹೊಸ ವರ್ಷದ ಆರಂಭದಲ್ಲಿಯೇ “ಯು/ಐ’ ಸಿನಿಮಾದ ಮೇಕಿಂಗ್ ಗ್ಲಿಂಪ್ಸ್ ಅನ್ನು ಚಿತ್ರತಂಡ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. “ಯು/ಐ’ ಸಿನಿಮಾದ ಅದ್ಧೂರಿ ಮೇಕಿಂಗ್ನ ಒಂದಷ್ಟು ಝಲಕ್ ಗಮನ ಸೆಳೆಯುವಂತಿದ್ದು, ಗ್ಲಿಂಪ್ಸ್ ನಲ್ಲಿ ಉಪ್ಪಿ ತಮ್ಮ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯವನ್ನು ಕೋರಿದ್ದಾರೆ.
ಅತ್ಯಾಧುನಿಕ ಕ್ಯಾಮರಾಗಳ ಬಳಕೆ, ವಿಭಿನ್ನ ಸೆಟ್ಗಳು ಗ್ಲಿಂಪ್ಸ್ನಲ್ಲಿ ಹೈಲೈಟ್ ಆಗುವಂತಿದ್ದು, ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಮತ್ತಷ್ಟು ಕುತೂಹಲ ಹೆಚ್ಚಾಗುವಂತೆ ಮಾಡಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಈ ವರ್ಷದ ಮಧ್ಯ ಭಾಗದಲ್ಲಿ ಉಪ್ಪಿಯ ಹೊಸ ಅವತಾರ “ಯು/ಐ’ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಮತ್ತೂಂದೆಡೆ ಉಪೇಂದ್ರ ಅಭಿನಯದ “ಕಬ್ಜ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೂಡ ಭರದಿಂದ ನಡೆಯುತ್ತಿದೆ. “ಕಬ್ಜ’ ಸಿನಿಮಾ ಕೂಡ ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು, ಮಲೆಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ “ಕಬ್ಜ’ ಸಿನಿಮಾದ ಟೀಸರ್ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು, ಆರ್. ಚಂದ್ರು ಈ ಸಿನಿಮಾವನ್ನು ನಿರ್ಮಿಸಿ, ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…