ಗಣೇಶ್‌ 99ಗೆ ಭಾವನಾ ನಾಯಕಿ


Team Udayavani, Dec 10, 2018, 5:25 PM IST

cinema-99.jpg

ನಟ ಗಣೇಶ್‌ “99′ ಎಂಬ ಸಿನಿಮಾದಲ್ಲಿ ನಟಿಸಲಿದ್ದಾರೆಂಬ ಸುದ್ದಿ ನಿಮಗೆ ಗೊತ್ತೇ ಇದೆ. ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರವನ್ನು ರಾಮು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಡಿ.07 ರಂದು ನಡೆದಿದೆ. ಗಣೇಶ್‌ಗೆ ನಾಯಕಿ ಯಾರಾಗುತ್ತಾರೆಂಬ ಕುತೂಹಲ ಅನೇಕರಲ್ಲಿತ್ತು. ಈಗ
ಆ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಭಾವನಾ “99′ ಸಿನಿಮಾದಲ್ಲಿ ಗಣೇಶ್‌ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. 

ಯಾವ ಭಾವನಾ ಎಂದರೆ “ಜಾಕಿ’ ಭಾವನಾ ಎನ್ನಬೇಕು. “ಜಾಕಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಮಲಯಾಳಿ ಬೆಡಗಿ ಭಾವನಾ ಆ ನಂತರ ಕನ್ನಡದಲ್ಲಿ ಬಿಝಿ ನಟಿಯಾಗಿದ್ದು, ಕನ್ನಡ ಹುಡುಗ ನವೀನ್‌ ಅವರ ಕೈ ಹಿಡಿದಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಮದುವೆ ನಂತರ ಭಾವನಾ ನಟಿಸುತ್ತಾರಾ ಎಂಬ ಕುತೂಹಲ ಅನೇಕರಲ್ಲಿತ್ತು. 

ಹೀಗಿರುವಾಗಲೇ ಪ್ರಜ್ವಲ್‌ ದೇವರಾಜ್‌ ನಾಯಕರಾಗಿರುವ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರಕ್ಕೆ ಭಾವನಾ ನಾಯಕಿ ಎಂಬ ಸುದ್ದಿ ಬಂತು. ಈಗ ಭಾವನಾ “99′ ಸಿನಿಮಾಕ್ಕೆ ನಾಯಕಿತಯಾಗಿದ್ದಾರೆ. ಗಣೇಶ್‌ ಹಾಗೂ ಭಾವನಾ ಈಗಾಗಲೇ “ರೋಮಿಯೋ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಆ ಚಿತ್ರ ಒಂದು ಮಟ್ಟಕ್ಕೆ ಯಶಸ್ಸು ಕೂಡ ಕಂಡಿತ್ತು. ಈಗ ಆ ಜೋಡಿ ಮತ್ತೂಮ್ಮೆ ಒಂದಾಗಿದೆ. 

ಅಂದಹಾಗೆ, ಇದು ತಮಿಳಿನ “96′ ಚಿತ್ರದ ರೀಮೇಕ್‌ ಆಗಿದ್ದು, ಅಲ್ಲಿನ 96 ಅನ್ನು ಇಲ್ಲಿ 99 ಮಾಡಲಾಗಿದೆ. ವಿಜಯ್‌ ಸೇತುಪತಿ ಹಾಗೂ ತ್ರಿಶಾ ನಟಿಸಿರುವ ತಮಿಳು ಚಿತ್ರ “96′ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿತ್ತು. ಹೊಸ ಬಗೆಯ ಕಥೆಯೊಂದಿಗೆ ಈ ಚಿತ್ರ ಗಮನ ಸೆಳೆಯುವ ಮೂಲಕ ಪ್ರೇಕ್ಷಕರನ್ನು ರಂಜಿಸಿತ್ತು. ಸಿನಿಮಾ ಹಿಟ್‌ಲಿಸ್ಟ್‌ ಸೇರುತ್ತಿದ್ದಂತೆ ಕನ್ನಡದ ರೀಮೇಕ್‌ ರೈಟ್ಸ್‌ ಅನ್ನು ನಿರ್ಮಾಪಕ ರಾಮು ಪಡೆದಿದ್ದಾರೆ. ಅದರಂತೆ ಈಗ ಗಣೇಶ್‌ ಅವರಿಗೆ ಸಿನಿಮಾ ಮಾಡುತ್ತಿದ್ದಾರೆ.

ಮೂಲ ಚಿತ್ರದ ಕಥೆಯನ್ನು ಉಳಿಸಿಕೊಂಡು ಉಳಿದಂತೆ ಇಲ್ಲಿನ ನೇಟಿವಿಟಿಗೆ ತಕ್ಕಂತೆ ಸಾಕಷ್ಟು ಬದಲಾವಣೆ ಮಾಡಿಕೊಳ್ಳಲಾಗಿದೆ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತ, ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣವಿದೆ. ಗಣೇಶ್‌ ಹಾಗೂ ಭಾವನಾ ಅವರ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಎರಡನೇ ಸಿನಿಮಾ “99′ ಆದರೆ, ನಿರ್ದೇಶಕ ಪ್ರೀತಂ ಗುಬ್ಬಿ ಹಾಗೂ ಗಣೇಶ್‌ ಕಾಂಬಿನೇಶನ್‌ನಲ್ಲಿ ತಯಾರಾಗುತ್ತಿರುವ ಮೂರನೇ ಸಿನಿಮಾವಿದು. ಈಗಾಗಲೇ “ಮಳೆಯಲಿ ಜೊತೆಯಲಿ’ ಹಾಗೂ “ದಿಲ್‌ ರಂಗೀಲಾ’ ಚಿತ್ರಗಳನ್ನು ಇವರಿಬ್ಬರು ಮಾಡಿದ್ದಾರೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.