ಬೆಂಗಳೂರಲ್ಲಿ ಮಲಯಾಳಂ ಚಿತ್ರೋತ್ಸವ!

Team Udayavani, Aug 10, 2017, 2:43 PM IST

Malayalam-Festival-1.jpg

ಒಂದೆರೆಡು ತಿಂಗಳಗಳ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿ ಬಂಗಾಲಿ ಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು. ಈಗ ಇನ್ನೊಂದು ಭಾಷೆಯ ಜನಪ್ರಿಯ ಚಿತ್ರಗಳನ್ನು ಅಕಾಡೆಮಿ, ಬೆಂಗಳೂರಿಗರಿಗೆ ತೋರಿಸುವುದಕ್ಕೆ ಸಜ್ಜಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಅಕಾಡೆಮಿಯು ಮಲಯಾಳಂ ಚಿತ್ರೋತ್ಸವವನ್ನು ಆಯೋಜಿಸಿದ್ದು, ಈ ಚಿತ್ರೋತ್ಸವದಲ್ಲಿ ಒಟ್ಟು ಎಂಟು ಚಿತ್ರಗಳು ಪ್ರದರ್ಶನವಾಗಲಿವೆ.

ಈ ಚಿತ್ರೋತ್ಸವ ನಾಳೆ (ಆಗಸ್ಟ್‌ 11) ಪ್ರಾರಂಭವಾಗಲಿದೆ. ಚಿತ್ರೋವವನ್ನು ಉದ್ಘಾಟಿಸಲಿಕ್ಕೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಬರಲಿದ್ದಾರೆ. ಜೊತೆಗೆ ವಾರ್ತಾ ಇಲಾಖೆಯ ನಿರ್ದೇಶಕ ಡಾ.ಪಿ.ಎಸ್‌. ಹರ್ಷ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.
ಗೋವಿಂದು ಹಾಜರಿದ್ದರೆ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಪಿ. ಶೇಷಾದ್ರಿ ಅವರು ಈ ಚಿತ್ರೋತ್ಸವದ ಬಗ್ಗೆ ಮಾತನಾಡಲಿದ್ದಾರೆ. 

ಇನ್ನು ಮಲಯಾಳಂ ನಿರ್ದೇಶಕರಾದ ದಿಲೀಶ್‌ ಪೋತನ್‌, ವಿಧು ವಿನ್ಸೆಂಟ್‌, ನಟರಾದ ವಿನಯ್‌ ಫೋರ್ಟ್‌ ಮುಂತಾದವರು ಅಂದು ಭಾಗವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ನಂತರ ಉದ್ಘಾ ಟನಾ ಚಿತ್ರವಾಗಿ “ಮ್ಯಾನ್‌ ಹೋಲ್‌’ ಪ್ರದರ್ಶನವಾಗಲಿದೆ. ನಂತರ ಎರಡು ದಿನಗಳ ಕಾಲ ಫ‌ಹಾದ್‌ ಫಾಸಿಲ್‌ ಅಭಿನಯದ “ಮಹೇಶಂಟೆ ಪ್ರತೀಕಾರಂ’, “ಆರಡಿ’, “ಕಿಸ್ಮತ್‌’, “ಗಾಡ್‌ ಸೇ’, “ಕಮ್ಮಾಟಿ ಪಾದಂ’ ಮುಂತಾದ ಚಿತ್ರಗಳು ಪ್ರದರ್ಶನವಾಗಲಿದೆ.

ಆಗಸ್ಟ್‌ 11-13ರವರೆಗೂ ಬೆಂಗಳೂರಿನಲ್ಲಿ ಬಂಗಾಲಿ ಚಿತ್ರೋತ್ಸವವು ನಡೆದರೆ, ಅದಕ್ಕೆ ಪ್ರತಿಯಾಗಿ ತಿರುವನಂತಪುರದಲ್ಲಿ ಆಗಸ್ಟ್‌ 26ರಿಂದ 28ರವರೆಗೂ ಮೂರು ದಿನಗಳ ಕಾಲ ಕನ್ನಡ ಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಇತ್ತೀಚಿನ ಕೆಲವು ಜನಪ್ರಿಯ ಚಿತ್ರಗಳಾದ “ಯೂ ಟರ್ನ್’, “ತಿಥಿ’, “ಕಿರಿಕ್‌ ಪಾರ್ಟಿ’, “ಹರಿಕಥಾ ಪ್ರಸಂಗ’, “ಮಾರಿಕೊಂಡವರು’, “ನಾನು ಅವನಲ್ಲ ಅವಳು’ ಮತ್ತು “ರಾಮ ರಾಮಾ ರೇ’ ಚಿತ್ರಗಳು ಪ್ರದರ್ಶನವಾಗಲಿವೆ. 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.