‘19.20.21’ ಇದು ಮಂಸೋರೆ ಹೊಸ ಸಿನಿಮಾ
Team Udayavani, Jan 20, 2022, 11:20 AM IST
ನಿರ್ದೇಶಕ ಮಂಸೋರೆ “ಆ್ಯಕ್ಟ್ 1978′ ಚಿತ್ರದ ಬಳಿಕ “ಅಬ್ಬಕ್ಕ’ ಸಿನಿಮಾ ಮಾಡುತ್ತಾರೆಂದು ಸುದ್ದಿಯಾಗಿತ್ತು. ಆದರೆ, ಈಗ ಮಂಸೋರೆ ಸದ್ಯಕ್ಕೆ “ಅಬ್ಬಕ್ಕ’ ಸಿನಿಮಾ ಮಾಡುತ್ತಿಲ್ಲ. ಬದಲಾಗಿ ಹೊಸ ಸಿನಿಮಾವೊಂದನ್ನು ಅನೌನ್ಸ್ ಮಾಡಿದ್ದಾರೆ.
ಅದು “19.20.21′. ಹೀಗೊಂದು ಸಿನಿಮಾವನ್ನು ಮಂಸೋರೆ ಅನೌನ್ಸ್ ಮಾಡಿದ್ದಾರೆ. ಈ ಟೈಟಲ್ನ ಹಿಂದೆ ಒಂದು ದೀರ್ಘವಾದ ಕಥೆ ಇದೆಯಂತೆ. ತಮ್ಮ ಹೊಸ ಸಿನಿಮಾ ಬಗ್ಗೆ ಹೇಳಿಕೊಂಡಿರುವ ಮಂಸೋರೆ, “ಇದು ಕನಸಲ್ಲ, ಕತೆಯಲ್ಲ, ಸತ್ಯ ಘಟನೆ ಆಧಾರಿತ. ಬಹಳ ಹಿಂದೆಯೇ ಸಿನಿಮಾ ಮಾಡಬೇಕು ಅಂದುಕೊಂಡಿದ್ದ ಒಂದು ಘಟನೆಯು ದೃಶ್ಯರೂಪ ಪಡೆದುಕೊಳ್ಳಲು ಈಗ ಕಾಲ ಕೂಡಿಬಂದಿದೆ. ಈ ವರ್ಷವೇ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಆಶಯದೊಂದಿಗೆ, ಅತಿ ಶೀಘ್ರದಲ್ಲೇ ಚಿತ್ರೀಕರಣಕ್ಕೆ ಹೋಗುವ ಸಿದ್ಧತೆಯಲ್ಲಿದ್ದೇವೆ. ಹತ್ತೂಂಬತ್ತು, ಇಪ್ಪತ್ತು, ಇಪ್ಪತ್ತೂಂದು… ಎಲ್ಲರ ಬದುಕಿಗೆ ಬಹಳ ಮುಖ್ಯವಾದ ಸಂಖ್ಯೆಗಳು. ಅದು ಏನು? ಹೇಗೆ? ಎಂಬುವ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳುವ ಕುತೂಹಲಕ್ಕೆ ಉತ್ತರ ತೆರೆಮೇಲೆ ಸಿಗಲಿದೆ. ಸಿನಿಮಾದ ಪಾತ್ರವರ್ಗ ಮತ್ತು ತಾಂತ್ರಿಕ ವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ’ ಎಂದಿದ್ದಾರೆ.
ಇದನ್ನೂ ಓದಿ:ವಿಜಯ್ ಬರ್ತ್ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ
ಇನ್ನು, “ಅಬ್ಬಕ್ಕ’ ಚಿತ್ರದ ಬಗ್ಗೆ ಮಾತನಾಡುವ ಮಂಸೋರೆ, “ಅಬ್ಬಕ್ಕ ಸಿನಿಮಾ ಮಾಡುವ ಯೋಜನೆಯನ್ನು ಕೊರೊನಾ ಕಾಲದ ಅನಿಶ್ಚಿತತೆಗಳ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಿದ್ದೇವೆ. ಮುಂದೆ ಸಮಯ ಕೈಗೂಡಿ ಬಂದಾಗ ಖಂಡಿತ “ಅಬ್ಬಕ್ಕ’ ತೆರೆ ಮೇಲೆ ತರುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ’ ಎನ್ನುವುದು ಮಂಸೋರೆ ಮಾತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ