ಪೊಲೀಸ್ ಸ್ಟೇಷನ್ ನೊಳಗೊಂದು ಕಹಾನಿ; ಮಾರ್ಚ್ 10ಕ್ಕೆ ‘ಮೇರಿ’ ರಿಲೀಸ್
Team Udayavani, Feb 26, 2023, 2:56 PM IST
“ಮೇರಿ’- ಹೀಗೊಂದು ಸಿನಿಮಾ ಸದ್ದಿಲ್ಲದೇ ಬಿಡುಗಡೆಯ ಹಂತಕ್ಕೆ ಬಂದಿದ್ದು, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರ ಫೆ.24 ರಂದು ತೆರೆಕಾಣಬೇಕಿತ್ತು. ಆದರೆ, ಈಗ ಚಿತ್ರ ಮಾರ್ಚ್ 10ರಂದು ತೆರೆಕಾಣುತ್ತಿದೆ. “ಆನ’ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ಮನೋಜ್ ಪಿ ನಡಲುಮನೆ ನಿರ್ದೇಶನದ ಎರಡನೇ ಸಿನಿಮಾವಿದು.
“ಮೇರಿ’ ಪಶ್ಚಿಮ ಘಟ್ಟದ ಗ್ರಾಮಾಂತರ ಠಾಣೆಯಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದ್ದು, ವಿಕಾಶ್ ಉತ್ತಯ್ಯ, ಅನೂಷ ಕೃಷ್ಣ, ಚೇತನ್ ವಿಕ್ಕಿ, ತೇಜಸ್ವಿನಿ ಶರ್ಮಾ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಸಂದೀಪ್ ನೀನಾಸಂ, ಭಾರ್ಗವ್ ವೆಂಕಟೇಶ್, ಸುಶಾಂತ್, ದೀಪಕ್ ಗೌಡ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ.
ನಿರ್ದೇಶಕ ಮನೋಜ್ ಪಿ ನಡುಲುಮನೆ ಮಾತನಾಡಿ “ಮೇರಿ’ ಒಂದು ತಂಡದ ಪರಿಶ್ರಮ. ಥ್ರಿಲ್ಲರ್ ಸಬ್ಜೆಕ್ ಒಳಗೊಂಡ ಸಿನಿಮಾ. ಪೊಲೀಸ್ ಠಾಣೆಯಲ್ಲಿ ನಡೆಯುವ ಘಟನೆ ಚಿತ್ರದಲ್ಲಿದೆ. ಚಿಕ್ಕಮಗಳೂರಿನ ಜಿಲ್ಲೆಯ ಕಾಡು ಮಧ್ಯದಲ್ಲಿರುವ ಒಂದು ಗ್ರಾಮದ ಪೊಲೀಸ್ ಠಾಣೆಗೆ ಹೊಸದಾಗಿ ನಿಯೋಜನೆಯಾದ ಎಸ್ಐ ಮುಂದೆ ಒಂದು ಹುಡುಗಿ ತನ್ನ ಮೇಲೆ ರೇಪ್ ಆಗಿದೆ ಎಂದು ಹೇಳಿದಾಗ ಆ ದಿನ ಏನೇನು ಘಟನೆ ನಡೆಯುತ್ತೆ ಅನ್ನೋದು ಈ ಸಿನಿಮಾದ ಎಳೆ’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ.
ನಟ ವಿಕಾಶ್ ಉತ್ತಯ್ಯ, ನಟಿಯರಾದ ತೇಜಸ್ವಿನಿ ಶರ್ಮಾ, ನಟಿ ಅನೂಷ ಕೃಷ್ಣ ಸೇರಿದಂತೆ ಅನೇಕರು ನಟಿಸಿದ್ದಾರೆ. ನಟಿ ತೇಜಸ್ವಿನಿ ಶರ್ಮಾ ಮಾತನಾಡಿ ನನ್ನ ಪಾತ್ರ ಸಿನಿಮಾ ರಿಲೀಸ್ ಆದ ಮೇಲೆ ಮಾತನಾಡುವ ಹಾಗಿದೆ. ನನ್ನ ಪಾತ್ರ ತುಂಬಾ ವಿಭಿನ್ನವಾಗಿದೆ ಎಂದು ಸಿನಿಮಾ ಬಗ್ಗೆ ಖುಷಿ ವ್ಯಕ್ತಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bank Of Bhagyalakshmi: ಬ್ಯಾಂಕ್ನತ್ತ ದೀಕ್ಷಿತ್ ಚಿತ್ತ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
Sandalwood: ರಿಷಿ ಖುಷಿ!: ಅಕೌಂಟ್ಗೆ ಮತ್ತೊಂದು ಚಿತ್ರ ತ್ತೊ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು