ಮಯೂರಿ ಹೊಸ ಸಿಗ್ನೇಚರ್‌


Team Udayavani, Apr 15, 2018, 11:19 AM IST

Mayuri.jpg

ನಟಿ ಮಯೂರಿ ಕೈಯಲ್ಲಿ ಐದು ಸಿನಿಮಾಗಳಿರುವ ಮೂಲಕ ಸಿಕ್ಕಾಪಟ್ಟೆ ಬಿಝಿಯಾಗಿದ್ದಾರೆಂಬ ವಿಷಯವನ್ನು ಕೆಲ ದಿನಗಳ ಹಿಂದಷ್ಟೇ ನೀವು ಇದೇ ಬಾಲ್ಕನಿಯಲ್ಲಿ ಓದಿದ್ದೀರಿ. ಈಗ ಅದಕ್ಕೆ ಮತ್ತೂಂದು ಚಿತ್ರ ಸೇರ್ಪಡೆಯಾಗಿದೆ. ಅದು “ಸಿಗ್ನೇಚರ್‌’. ಹೌದು, “ಸಿಗ್ನೇಚರ್‌’ ಎಂಬ ಹೊಸ ಸಿನಿಮಾವನ್ನು ಮಯೂರಿ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಗುರು ಮದ್ಲೇಸರ ನಿರ್ದೇಶಕರಾಗುತ್ತಿದ್ದಾರೆ.

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕರಾಗಿ ಅನುಭವ ಪಡೆದಿದ್ದ ಗುರು ಅವರು “ಸಿಗ್ನೇಚರ್‌’ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಚಿತ್ರವನ್ನು ಪೂರ್ಣಿಮಾ ಭಾಸ್ಕರ್‌ ಪೂಜಾರಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ರಂಜಿತ್‌ ಎಂಬ ಹೊಸ ಮುಖ ನಾಯಕರಾಗಿ ನಟಿಸುತ್ತಿದ್ದು, ಸುಧಾರಾಣಿ ಇಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. 

ಚಿತ್ರದ ಕಥೆ ಲವ್‌ಸ್ಟೋರಿಯ ಜೊತೆಗೆ ಗಂಭೀರ ವಿಷಯವೊಂದನ್ನು ಕೂಡಾ ಹೊಂದಿದೆಯಂತೆ. ಜಿಲ್ಲಾಧಿಕಾರಿ ಹಾಗೂ ಮಾಜಿ ಮುಖ್ಯಮಂತ್ರಿಯೊಬ್ಬರ ನಡುವಿನ ಜಿದ್ದಾಜಿದ್ದಿ ಸೇರಿದಂತೆ ಅನೇಕ ಅಂಶಗಳು ಚಿತ್ರದಲ್ಲಿ ಪ್ರಮುಖವಾಗಿವೆಯಂತೆ. ಚಿತ್ರದಲ್ಲಿ ನಿರ್ಮಾಪಕರ ಮಗಳು ಬೇಬಿ ಮಾನ್ಯಾ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇನ್ನು, ಮಯೂರಿ ಇಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಮಗಳಾಗಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರ ತುಂಬಾ ಭಿನ್ನವಾಗಿದೆ ಎಂಬುದು ನಿರ್ದೇಶಕರ ಮಾತು.

ಚಿತ್ರಕ್ಕೆ ವಿ.ಮನೋಹರ್‌ ಅವರ ಸಂಗೀತ, ಜೀವನ್‌ ಗೌಡ ಛಾಯಾಗ್ರಹಣ, ವಿಶ್ವ ಸಂಕಲನವಿದೆ. ಉಡುಪಿ, ಮಲ್ಪೆ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದ್ದು, ಎರಡನೇ ಹಂತದ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ನಡೆಯಲಿದೆಯಂತೆ. ಅಂದಹಾಗೆ, ಈಗಾಗಲೇ ಮಯೂರಿ ಕೈಯಲ್ಲಿ “8 ಎಂಎಂ’, “ನನ್ನ ಪ್ರಕಾರ’, “ಆಟಕ್ಕುಂಟು ಲೆಕ್ಕಕ್ಕಿಲ್ಲ’, “ರುಸ್ತುಂ’ ಹಾಗೂ “ಮೌನಂ’ ಚಿತ್ರಗಳಿದ್ದು, ಈಗ “ಸಿಗ್ನೇಚರ್‌’ ಸೇರ್ಪಡೆಯಾಗಿದೆ. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.