ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ


Team Udayavani, Oct 25, 2021, 11:55 AM IST

meghana gaonkar

ಕಳೆದ ವರ್ಷ ಬಿಡುಗಡೆಯಾಗಿ ಸಿನಿಮಂದಿಯ ಗಮನ ಸೆಳೆದಿದ್ದ “ಶಿವಾಜಿ ಸುರತ್ಕಲ್’ ಚಿತ್ರದ ಮುಂದುವರಿದ ಭಾಗ “ಶಿವಾಜಿ ಸುರತ್ಕಲ್-2′ ಹೆಸರಿನಲ್ಲಿ ತೆರೆಗೆ ಬರುತ್ತಿರುವ ವಿಷಯ ನಿಮಗೆ ಗೊತ್ತಿರಬಹುದು.

“ಶಿವಾಜಿ ಸುರತ್ಕಲ್‌’ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ರಮೇಶ್‌ ಅರವಿಂದ್‌ “ಶಿವಾಜಿ ಸುರತ್ಕಲ್‌-2′ ಚಿತ್ರದಲ್ಲೂ ನಾಯಕನಾಗಿ ಕಾಣಿಸಿ ಕೊಳ್ಳುತ್ತಿದ್ದು, ರಮೇಶ್‌ ಅರವಿಂದ್‌ ಅವರೊಂದಿಗೆ ರಾಧಿಕಾ ನಾರಾಯಣ್‌, ರಾಘು ರಾಮನಕೊಪ್ಪ, ವಿದ್ಯಾಮೂರ್ತಿ ಮೊದಲಾದ ಕಲಾವಿದರು ಅವರವರ ಪಾತ್ರಗಳಲ್ಲೇ ಮುಂದುವರೆಯಲಿದ್ದಾರೆ.

ಇನ್ನು “ಶಿವಾಜಿ ಸುರತ್ಕಲ್‌-2′ ಚಿತ್ರದಲ್ಲಿ ಇನ್ನಷ್ಟು ಹೊಸ ಪಾತ್ರಗಳು ಸೇರ್ಪಡೆಯಾಗಿದ್ದು, ಅದರಲ್ಲಿ ನಟಿ ಮೇಘನಾ ಗಾಂವ್ಕರ್‌ ಪಾತ್ರ ಕೂಡ ಒಂದು. ಹೌದು, “ಶಿವಾಜಿ ಸುರತ್ಕಲ್‌-2′ ಚಿತ್ರದಲ್ಲಿ ನಟಿ ಮೇಘನಾ ಗಾಂವ್ಕರ್‌ ಡಿಸಿಪಿ ದೀಪಾ ಕಾಮತ್‌ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ದಾದಾ ಸಾಹೇಬ್‌ ಫಾಲ್ಕೆ ಜೊತೆ ಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ಡಬಲ್ ಸಂಭ್ರಮ

ಇಲ್ಲಿಯವರೆಗೆ ಬಹುತೇಕ ಗ್ಲಾಮರಸ್‌ ಪಾತ್ರಗಳಲ್ಲಿ ಕಾಣಿಸಿಕೊಂಡು ಸಿನಿಪ್ರಿಯರ ಗಮನ ಸೆಳೆದಿದ್ದ ಮೇಘನಾ ಗಾಂವ್ಕರ್‌, ಚಿತ್ರದಲ್ಲಿ ಮೊದಲ ಬಾರಿಗೆ ಟಫ್ ಕಾಪ್‌ ಆಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ. ಬೆಂಗಳೂರು ಸೆಂಟ್ರಲ್‌ ಕ್ರೈಂ ಬ್ರಾಂಚ್‌ (ಸಿಸಿಬಿ)ಯ ಡಿಸಿಪಿ ಪಾತ್ರಧಾರಿಯಾಗಿ ಚಿತ್ರದಲ್ಲಿ ಮೇಘನಾ ಗಾಂವ್ಕರ್‌ ಖಡಕ್‌ ಖಾಕಿ ತೊಡುತ್ತಿದ್ದಾರೆ.

“ಶಿವಾಜಿ ಸುರತ್ಕಲ್‌-2′ ಚಿತ್ರದಲ್ಲಿ ಮೇಘನಾ ಗಾಂವ್ಕರ್‌ ಪಾತ್ರದ ಬಗ್ಗೆ ಮಾಹಿತಿ ನೀಡಿರುವ ನಿರ್ದೇಶಕ ಆಕಾಶ್‌ ಶ್ರೀವತ್ಸ, “ಸಿನಿಮಾದಲ್ಲಿ ಮೇಘನಾ ಗಾಂವ್ಕರ್‌ ಡಿಸಿಪಿ ದೀಪಾ ಕಾಮತ್‌ ಎನ್ನುವ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದು ಶಿವಾಜಿ ಸುರತ್ಕಲ್‌ ಅವರಿಗೆ ಬೆನ್ನೆಲುಬಾಗಿ ನಿಲ್ಲುವ ಮೇಲಧಿಕಾರಿಯ ಪಾತ್ರವಾಗಿರುತ್ತದೆ. ಈಗಾಗಲೇ ಸಿನಿಮಾದ ಕಥೆ ಮತ್ತು ಕ್ಯಾರೆಕ್ಟರ್‌ ಕೇಳಿರುವ ಮೇಘನಾ ತುಂಬ ಇಷ್ಟಪಟ್ಟಿದ್ದು, ಆದಷ್ಟು ಬೇಗ ತಂಡ ಸೇರಿಕೊಳ್ಳಲಿದ್ದಾರೆ. ಇವರೊಂದಿಗೆ ಇನ್ನಷ್ಟು ಹೊಸ ತಾರಾಗಣ ಚಿತ್ರತಂಡ ಸೇರಿಕೊಳ್ಳಲಿದೆ.

ಈಗಾಗಲೇ ಸಿನಿಮಾದ ಪ್ರೀ-ಪ್ರೊಡಕ್ಷನ್ಸ್‌ ಕೆಲಸ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಮುಹೂರ್ತ ನೆರವೇರಿಸಿ ಚಿತ್ರೀಕರಣಕ್ಕೆ ಹೊರಡಲಿದ್ದೇವೆ’ ಎನ್ನುತ್ತಾರೆ.

“ಶಿವಾಜಿ ಸುರತ್ಕಲ್‌-2′ ರಮೇಶ್‌ ಅರವಿಂದ್‌ ಅಭಿನಯದ 103ನೇ ಚಿತ್ರವಾಗಲಿದ್ದು, ಚಿತ್ರಕ್ಕೆ ಆಕಾಶ್‌ ಶ್ರೀವತ್ಸ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ರೇಖಾ ಕೆ.ಎನ್‌ ಮತ್ತು ಅನುಪ್‌ ಗೌಡ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

mantri mall

ಆಸ್ತಿ ತೆರಿಗೆ ಬಾಕಿ: ಮಂತ್ರಿಮಾಲ್‌ಗೆ ಬೀಗ..!

ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್

ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್

ಚುನಾವಣೆ ವೆಚ್ಚಕ್ಕೆ ಅಭ್ಯರ್ಥಿಗೆ ಹಣ ಕೊಟ್ಟ ಮತದಾರರು

ಚುನಾವಣೆ ವೆಚ್ಚಕ್ಕೆ ಅಭ್ಯರ್ಥಿಗೆ ಹಣ ಕೊಟ್ಟ ಮತದಾರರು

vaccination pending

ಅವಧಿ ಮುಗಿದ್ರೂ ಲಸಿಕೆಗೆ ಬಾರದ 10 ಲಕ್ಷ ಜನ..!

ಶ್ರೀರಂಗಪಟ್ಟಣ: ಗೂಡ್ಸ್ ವಾಹನ ಚಾಲಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಗೂಡ್ಸ್ ವಾಹನ ಚಾಲಕನ ಬರ್ಬರ ಹತ್ಯೆ

9cm-bommai

ಬಿಜೆಪಿ ಗೆಲುವಿಗೆ ಯಾವುದೇ ಸಮಸ್ಯೆಯಿಲ್ಲ: ಸಿಎಂ ಬೊಮ್ಮಾಯಿ

food grains

ಬೇಳೆಕಾಳು, ಆಹಾರ ಧಾನ್ಯಗಳ ಬೆಲೆಯಲ್ಲೂ ಏರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

1-aaaaAaS

ಕಣ್ಣುಗಳಲ್ಲಿನ ಮಿಂಚು: ಅಪ್ಪು ‘ಗಂಧದಗುಡಿ’ ಟೀಸರ್ ಬಗ್ಗೆ ಯಶ್

ಡಿಸೆಂಬರ್ 10ರಂದು ತೆರೆಗೆ;ಗಾಂಧಿನಗರದ ಗಮನ ಸೆಳೆಯಲಿದೆ ‘ಕ್ಯಾನ್ಸೀಲಿಯಂ’ ಚಿತ್ರ…

ಡಿಸೆಂಬರ್ 10ರಂದು ತೆರೆಗೆ;ಗಾಂಧಿನಗರದ ಗಮನ ಸೆಳೆಯಲಿದೆ ‘ಕ್ಯಾನ್ಸೀಲಿಯಂ’ ಚಿತ್ರ…

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

MUST WATCH

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

ಹೊಸ ಸೇರ್ಪಡೆ

13election

ಚುನಾವಣಾ ಸೂಕ್ಷ್ಮ ವೀಕ್ಷಕರಿಗೆ ತರಬೇತಿ

ದಾಂಡೇಲಿ: ಕಟ್ಟುನಿಟ್ಟಿನ ಕ್ರಮಗಳಿದ್ದರೂ ಸಂಚಾರಿ ನಿಯಮಗಳ ಉಲ್ಲಂಘನೆ

ದಾಂಡೇಲಿ: ಕಟ್ಟುನಿಟ್ಟಿನ ಕ್ರಮಗಳಿದ್ದರೂ ಸಂಚಾರಿ ನಿಯಮಗಳ ಉಲ್ಲಂಘನೆ

12good-life

ಉತ್ತಮ ಸಮಾಜಕ್ಕೆ ಮತದಾನ ಪಾತ್ರ ಮಹತ್ವದ್ದು

ಕಳಚಿದ ಮಿರಾಶಿ ಮನೆತನದ ಹಿರಿಯ ಕೊಂಡಿ ಗೋಪಾಲ ಅರ್ಜುನ ಮಿರಾಶಿ

ಕಳಚಿದ ಮಿರಾಶಿ ಮನೆತನದ ಹಿರಿಯ ಕೊಂಡಿ ಗೋಪಾಲ ಅರ್ಜುನ ಮಿರಾಶಿ

mantri mall

ಆಸ್ತಿ ತೆರಿಗೆ ಬಾಕಿ: ಮಂತ್ರಿಮಾಲ್‌ಗೆ ಬೀಗ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.