“ರ್ಯಾಂಬೋ 2′ ಹಾಡಿಗೆ “ಬಿಟ್ಟೋಗ್ಬೇಡ’ ಅಂದ್ರು ಮೆಹಬೂಬ್ ಸಾಬ್
Team Udayavani, Apr 3, 2018, 2:51 PM IST
ಶರಣ್ ಅಭಿನಯದ “ರ್ಯಾಂಬೋ 2′ ಚಿತ್ರವು ಬಿಡುಗಡೆಗೆ ಸಜ್ಜಾಗಿದ್ದು, ಈಗಾಗಲೇ ಚಿತ್ರದ “ಧಮ್ ಮಾರೋ ಧಮ್’, “ಯವ್ವ- ಯವ್ವ’ ಹಾಗೂ “ಚುಟು ಚುಟು ಅಂತೈತಿ’ ಹಾಡುಗಳು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ನಡುವೆ ಚಿತ್ರತಂಡ ಗಾಯಕ ಮೆಹಬೂಬ್ ಸಾಬ್ ಗಾಯನದ “ಬಿಟ್ಟೋಗ್ಬೇಡ’ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿದ್ದು, ಐದು ಲಕ್ಷಕ್ಕೂ ಹೆಚ್ಚು ಜನ ಈ ಹಾಡನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ.
ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿದ್ಧವಾಗಿರೋ ಈ ಹಾಡಿಗೆ ಸಂತೋಷ್ ನಾಯ್ಕ್ ಮತ್ತು ಗೌಸ್ ಪೀರ್ ಸಾಹಿತ್ಯ ಬರೆದಿದ್ದಾರೆ. ಇನ್ನು ಶರಣ್ ತಮ್ಮ ಲಡ್ಡು ಸಿನಿಮಾ ಬ್ಯಾನರ್ನಡಿ ಈ ಚಿತ್ರವು ಬಿಡುಗಡೆಯಾಗುತ್ತಿದ್ದು, ಚಿತ್ರದ ನಿರ್ಮಾಣದಲ್ಲಿ ಅಟ್ಲಾಂಟ ನಾಗೇಂದ್ರ ಹಾಗೂ ಚಿತ್ರಕ್ಕೆ ಕೆಲಸ ಮಾಡುವ ತಂತ್ರಜ್ಞರು ಕೈ ಜೋಡಿಸಿದ್ದಾರೆ.
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಛಾಯಾಗ್ರಾಹಕ ಸುಧಾಕರ್ ರಾಜ್, ಸಂಕಲನಕಾರ ಕೆ.ಎಂ. ಪ್ರಕಾಶ್, ಕಲಾ ನಿರ್ದೇಶಕ ಮೋಹನ್ ಬಿ ಕೆರೆ, ಕ್ರಿಯೇಟಿವ್ ಹೆಡ್ ತರುಣ್ ಸುಧೀರ್ ಇವರೆಲ್ಲಾ ವರ್ಕಿಂಗ್ ಪಾಟ್ನರ್ಗಳಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರದಿಂದ ಬಂದ ಲಾಭದಲ್ಲಿ ಎಲ್ಲರಿಗೂ ಶೇರ್ ಸಿಗಲಿದೆಯಂತೆ. ಈ ಹಿಂದೆ “ದಿಲ್ವಾಲ’ ಚಿತ್ರ ಮಾಡಿದ್ದ ಅನಿಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಶರಣ್ಗೆ ನಾಯಕಿಯಾಗಿ ಆಶಿಕಾ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್