ಫಾರ್ ರಿಜಿಸ್ಟ್ರೇಶನ್; ದಿಯಾ ಹೀರೋ; ಲವ್ ಮಾಕ್ಟೇಲ್ ಹೀರೋಯಿನ್!
Team Udayavani, Apr 7, 2022, 12:14 PM IST
2020ರ ಸೂಪರ್ ಹಿಟ್ ಚಿತ್ರಗಳಾದ “ದಿಯಾ’ ಹಾಗೂ “ಲವ್ ಮಾಕ್ಟೇಲ್’ ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೂಂದು ಚಿತ್ರ “ಫಾರ್ ರಿಜಿಸ್ಟ್ರೇಶನ್’.
ವರ್ಷದ ಮೊದಲ ಹಬ್ಬ ಯುಗಾದಿಯಂದು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಒಂದು ಮಿಲಿಯನ್ಗೂ ಅಧಿಕ ಲೈಕ್ಸ್ ದೊರಕಿದೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಈ ಚಿತ್ರದಲ್ಲಿ ಪೃಥ್ವಿ, ಆಶು ಪಾತ್ರದಲ್ಲಿ ಹಾಗೂ ಮಿಲನಾ ಅವರು ಅನ್ವಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ:2.7 ಮಿಲಿಯನ್ ವೀಕ್ಷಣೆ ಪಡೆದ ಕೆಜಿಎಫ್ 2 ಚಿತ್ರದ ‘ಗಗನ ನೀ..’ ಹಾಡು
ನಿಶ್ಚಲ್ ಫಿಲಂಸ್ ಮೂಲಕ ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ.
ಆರ್.ಕೆ.ಹರೀಶ್ ಸಂಗೀತ ನಿರ್ದೇಶನ, ಅಭಿಷೇಕ್ ಕಳತ್ತಿ ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ನಿರಂಜನ್ ರಾಧಾಕೃಷ್ಣ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ