ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ : ಮಾಡೆಲ್ ಸೋನಿಯಾ ಸೇರಿ ಮೂವರ ಬಂಧನ
Team Udayavani, Aug 30, 2021, 3:08 PM IST
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಇಂದು (ಆ.30) ಮಾಡೆಲ್ ಸೋನಿಯಾ ಅಗರ್ವಾಲ್ ಹಾಗೂ ಡಿಜೆ ವಚನ್ ಚಿನ್ನಪ್ಪ ಮತ್ತು ಉದ್ಯಮಿ ಭರತ್ ನನ್ನು ವಶಕ್ಕೆ ಪಡೆದಿದ್ದಾರೆ.
ಸೋಮವಾರ ಮುಂಜಾನೆ ಸೋನಿಯಾ, ವಚನ್ ಚಿನ್ನಪ್ಪ, ಉದ್ಯಮಿ ಭರತ್ ಮುಂತಾದವರ ಮನೆಯ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ.
ಡ್ರಗ್ ಪೆಡ್ಲರ್ ಥಾಮಸ್ ಈ ಹಿಂದೆ ನೀಡಿದ್ದ ಮಾಹಿತಿಯನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ರಾಜಾಜಿನಗರ, ಪದ್ಮನಾಭನಗರ, ಬೆನ್ಸೆನ್ ಟೌನ್ ಮುಂತಾದ ಕಡೆ ಇರುವ ಸೆಲೆಬ್ರಿಟಿಗಳ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಮಾದಕ ವಸ್ತುಗಳು ಪತ್ತೆ ಆಗಿದೆ ಎಂದು ತಿಳಿದು ಬಂದಿದೆ.
ತಮ್ಮ ಫ್ಲ್ಯಾಟ್ನಲ್ಲಿ ಉದ್ಯಮಿ ಭರತ್ ಡ್ರಗ್ಸ್ ಪಾರ್ಟಿ ಆಯೋಜಿಸುತ್ತಿದ್ದರು ಎನ್ನಲಾಗಿದೆ. ಸೆಲೆಬ್ರಿಟಿಗಳ ಜೊತೆಗೂ ಅವರು ಸಂಪರ್ಕ ಹೊಂದಿದ್ದರು. ಕಾರ್ಯಚರಣೆ ಬಳಿಕ ಅವರನ್ನು ಗೋವಿಂದಪುರ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಡ್ರಗ್ಸ್ ಪೆಡ್ಲರ್ ಥಾಮಸ್ ಜೊತೆ ಸಂಪರ್ಕದಲ್ಲಿದ್ದರು ಎಂಬ ಹಿನ್ನೆಲೆಯಲ್ಲಿ ಈ ದಾಳಿ ಮಾಡಲಾಗಿದೆ. ಡಿಜೆ ವಚನ್ ಚಿನ್ನಪ್ಪ ಮನೆಯಲ್ಲಿ 50 ಗ್ರಾಂ ಗಾಂಜಾ ಪತ್ತೆ ಆಗಿದ್ದು, ಅವರನ್ನೂ ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ