“ಸಲಗ’ ಚಿತ್ರಕ್ಕೆ ಅದ್ಧೂರಿ ಮುಹೂರ್ತ
ವಿಜಿಗೆ ಎರಡು ಸಾವಿರ ನೋಟು ಕೊಟ್ಟು ಶುಭಹಾರೈಸಿದ ಕಿಚ್ಚ
Team Udayavani, Jun 8, 2019, 3:00 AM IST
ದುನಿಯಾ ವಿಜಯ್ ನಟನೆ ಹಾಗೂ ಚೊಚ್ಚಲ ನಿರ್ದೇಶನದ “ಸಲಗ’ ಚಿತ್ರದ ಮುಹೂರ್ತ ಗುರುವಾರ ನಗರದ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ನಡೆಯಿತು. ನಟ ಸುದೀಪ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ, ಚಿತ್ರತಂಡಕ್ಕೆ ಶುಭಕೋರಿದರು.
ಜೊತೆಗೆ ಎರಡು ಸಾವಿರ ರೂಪಾಯಿಯ ಮೇಲೆ “ಒಳ್ಳೆಯದಾಗಲಿ’ ಎಂದು ಬರೆದು ವಿಜಿ ಕೈಗಿತ್ತ, ಸುದೀಪ್, “ಇದನ್ನು ನಿಮ್ಮ ಬಳಿ ಇಟ್ಟುಕೊಳ್ಳಿ, ಒಳ್ಳೆಯದಾಗುತ್ತದೆ’ ಎಂದು ಗೆಳೆಯನಿಗೆ ಶುಭಕೋರಿದರು.
ಚಿತ್ರದ ಮುಹೂರ್ತಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿ, ಚಿತ್ರತಂಡಕ್ಕೆ ಶುಭಕೋರಿದರು.
ಕೆ.ಪಿ.ಶ್ರೀಕಾಂತ್ ಈ ಚಿತ್ರದ ನಿರ್ಮಾಪಕರು. ಸಂಜನಾ ಆನಂದ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದಂತೆ ಧನಂಜಯ್, ಸುಧೀರ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ