ಗಂಡುಗಲಿ ಮದಕರಿ ನಾಯಕ ಚಿತ್ರಕ್ಕೆ ಡಿ.6ರಂದು ಮುಹೂರ್ತ

Team Udayavani, Dec 2, 2019, 10:15 AM IST

film-tdy-1

ದರ್ಶನ್‌ ಅಭಿನಯದ ಬಹು ನಿರೀಕ್ಷೆಯ ಐತಿಹಾಸಿಕ ಚಿತ್ರ ಗಂಡುಗಲಿ ಮದಕರಿ ನಾಯಕಚಿತ್ರದ ಚಾಲನೆಗೆ ಇದೀಗ ದಿನಗಣೆ ಶುರುವಾಗಿದೆ.

ಹೌದು, ಸಾಹಿತಿ ಬಿ.ಎಲ್‌.ವೇಣು ಅವರ ಐತಿಹಾಸಿಕ ಕಾದಂಬರಿ ಆಧಾರಿತ ಗಂಡುಗಲಿ ಮದಕರಿ ನಾಯಕಚಿತ್ರದ ಸಂಭಾಷಣೆ ಕೆಲಸ ಮುಗಿದಿದ್ದು, .29 ರಂದು ಬಿ.ಎಲ್‌.ವೇಣು ಅವರು ತಾವು ಬರೆದ ಸಂಭಾಷಣೆಯನ್ನು ಚಿತ್ರತಂಡಕ್ಕೆ ಒಪ್ಪಿಸಿದ್ದಾರೆ. ಇತ್ತೀಚೆಗೆ ನಟ ದರ್ಶನ್‌, ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರಿಗೆ ಡೈಲಾಗ್‌ ರೀಡಿಂಗ್‌ ನೀಡಿದ ವೇಣು ಅವರು, ಅಂತಿಮವಾಗಿ ಸಂಭಾಷಣೆಯನ್ನು ಒಪ್ಪಿಸಿದ್ದಾರೆ. ಡಿಸೆಂಬರ್‌ 6 ರಂದು ಚಿತ್ರಕ್ಕೆ ಮುಹೂರ್ತ ನೆರವೇರಲಿದೆ.

ಮೇಕೆದಾಟು ಬಳಿಯಲ್ಲಿ ಅದ್ಧೂರಿ ಸೆಟ್‌ ಹಾಕುವ ಮೂಲಕ ಅಲ್ಲಿ ಕೆಲ ದೃಶ್ಯಗಳನ್ನು ಚಿತ್ರೀಕರಿಸಲು ಚಿತ್ರತಂಡ ತಯಾರು ಮಾಡಿಕೊಂಡಿದೆ. ಹಾಗಾಗಿ, ಮೇಕೆದಾಟು ಬಳಿ ಮುಹೂರ್ತ ನಡೆಸಲು ಚಿತ್ರತಂಡ ತೀರ್ಮಾನಿಸಿದೆ. ಮೇಕದಾಟು ಬಳಿ ಗುರುಕುಲ ಸೆಟ್‌ ವೊಂದನ್ನು ನಿರ್ಮಾಣ ಮಾಡಲಾಗುತ್ತಿದೆ. ಯಾಕೆಂದರೆ, ಚಿತ್ರದಲ್ಲಿ ಹೀರೋ ಶಸ್ತ್ರಾಸ್ತ್ರ ವಿದ್ಯೆಯನ್ನು ಆ ಗುರುಕುಲದಲ್ಲಿ ಕಲಿಯುವ ಸನ್ನಿವೇಶಗಳಿವೆ.

ಸುಮಾರು ಮೂರ್‍ನಾಲ್ಕು ದಿನಗಳ ಕಾಲ ಅಲ್ಲಿ ಚಿತ್ರೀಕರಿಸಿದ ಬಳಿಕ ಬೇರೆಡೆ ಚಿತ್ರೀಕರಣ ನಡೆಸಲು ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ. ಇನ್ನು, ಡಿ.2 ರಂದು (ಇಂದು) “ಗಂಡುಗಲಿ ಮದಕರಿ ನಾಯಕಚಿತ್ರದ ನಾಯಕ ದರ್ಶನ್‌ ಸೇರಿದಂತೆ ನಿರ್ದೇಶಕ ರಾಜೇಂದ್ರ ಸಿಂಗ್‌ಬಾಬು, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ದೊಡ್ಡಣ್ಣ, ಶ್ರೀನಿವಾಸಮೂರ್ತಿ ಅವರು ಚಿತ್ರದುರ್ಗಕ್ಕೆ ಭೇಟಿ ನೀಡಿ, ಚಿತ್ರದುರ್ಗದಲ್ಲಿರುವ ಏಕನಾಥೇಶ್ವರಿ, ಹುಚ್ಚೆಂಗಮ್ಮ, ಬರಗೇರಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಚಿತ್ರತಂಡ ಮದಕರಿ ನಾಯಕ ಪ್ರತಿಮೆಗೂ ಮಾಲಾರ್ಪಣೆ ಮಾಡಲಿದೆ. ಈ ಸಂದರ್ಭದಲ್ಲಿ ಚಿತ್ರ ಸಂಭಾಷಣೆಗಾರ ಬಿ.ಎಲ್‌.ವೇಣು

ಕೂಡ ಚಿತ್ರತಂಡದ ಜೊತೆಗೂಡಲಿದ್ದಾರೆ. ಹಲವು ಬಾರಿ ಸ್ಕ್ರಿಪ್ಟ್ ತಿದ್ದುಪಡಿ ಮಾಡಿದ ಬಳಿಕ ಅಂತಿಮವಾಗಿ ಸಂಭಾಷಣೆ ಪಕ್ಕಾ ಆಗಿದೆ. ಅಂದಹಾಗೆ, ಬಿ.ಎಲ್‌.ವೇಣು ಅವರು ಈ ಹಿಂದೆ ವಿಷ್ಣುವರ್ಧನ್‌ಅವರಿಗೆ ರೀಡಿಂಗ್‌ ಕೊಡುತ್ತಿದ್ದರು. ಅದರ ಹೊರತಾಗಿ ಯಾವ ಹೀರೋಗೂ ರೀಡಿಂಗ್‌ ಕೊಟ್ಟಿರಲಿಲ್ಲ. ಈಗ ದರ್ಶನ್‌ ಅವರಿಗೆ ಗಂಡುಗಲಿ ಮದಕರಿ ನಾಯಕಚಿತ್ರದ ಸಂಭಾಷಣೆ ರೀಡಿಂಗ್‌ ಕೊಟ್ಟಿದ್ದು, ದರ್ಶನ್‌ ಕೂಡ ತಾಳ್ಮೆಯಿಂದಲೇ, ಶ್ರದ್ಧೆಯಿಂದ ಎರಡು ಸಲ ರೀಡಿಂಗ್‌ ಪಡೆದು ಖುಷಿಯಾಗಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಚಿತ್ರತಂಡ ಸಂತಸದಲ್ಲಿದೆ. ಇದು ಐತಿಹಾಸಿಕ ಸಿನಿಮಾ ಆಗಿರುವುದರಿಂದ ತುಂಬಾನೇ ಎಚ್ಚರವಹಿಸಿ, ಏನೆಲ್ಲಾ ಚಿತ್ರಕ್ಕೆ ಬೇಕು, ಎಷ್ಟೆಲ್ಲಾ ಅವಧಿ ಇರಬೇಕು. ಯಾವುದು ಬೇಕು, ಬೇಡ ಎಂಬ ಬಗ್ಗೆ ಯೋಚಿಸಿ, ಚಿತ್ರೀಕರಣಕ್ಕೆ ಹೊರಡಲು ಸಜ್ಜಾಗಿದೆ.

ದರ್ಶನ್‌ ಈಗಾಗಲೇ ಸಂಗೊಳ್ಳಿ ರಾಯಣ್ಣ‘, “ಕುರುಕ್ಷೇತ್ರಚಿತ್ರಗಳ ಮೂಲಕ ಜನಮನಗೆದ್ದಿದ್ದರು. ಈಗ ಮಹತ್ವಾಕಾಂಕ್ಷೆಯ ಗಂಡುಗಲಿ ಮದಕರಿ ನಾಯಕಚಿತ್ರಕ್ಕಾಗಿ ಸಾಕಷ್ಟು ತಯಾರಿಯನ್ನೂ ಪಡೆದುಕೊಂಡಿದ್ದಾರೆ. ಇಲ್ಲಿ ಮದಕರಿನಾಯಕನ ಖಡಕ್‌ಡೈಲಾಗ್‌, ಆ ಮೀಸೆ ಮತ್ತು ಎದುರಾಳಿಗಳ ವಿರುದ್ಧಹೋರಾಡುವ ಧೈರ್ಯ ಹೈಲೈಟ್‌ ಆಗಿದೆ. ಅದೇನೆ ಇರಲಿ, ಕನ್ನಡ ಚಿತ್ರರಂಗದಲ್ಲಿ ಮತ್ತೂಂದು ಬಹು ನಿರೀಕ್ಷೆಯ ಚಿತ್ರವಿದು. ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಈ ಚಿತ್ರ ದೊಡ್ಡ ಚಾಲೆಂಜ್‌. ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರು ಈಗಾಗಲೇ ಚಿತ್ರಕ್ಕೆ ಎಲ್ಲಾ ತಯಾರಿಮಾಡಿಕೊಂಡಿದ್ದು, ಡಿ.6 ರಂದು ಮುಹೂರ್ತ ನೆರವೇರಿಸಿ ಚಿತ್ರೀಕರಣಕ್ಕೆ ಚಾಲನೆ ಕೊಡಲಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.