
ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ
Team Udayavani, Oct 23, 2021, 3:58 PM IST

ಬೆಂಗಳೂರು: ಸ್ಯಾಂಡಲ್‍ವುಡ್‍ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ “777 ಚಾರ್ಲಿ” ಚಿತ್ರ ಪಂಚ ಭಾಷೆಗಳಲ್ಲಿ ಡಿಸೆಂಬರ್ 31ರಂದು ತೆರೆಕಾಣುತ್ತಿದೆ. ಈಗಾಗಲೇ ಚಿತ್ರದ ಟೀಸರ್ ಭಾರಿ ಸದ್ದು ಮಾಡಿದ್ದು, ಸಿನಿ ರಸಿಕರಿಗೆ ಚಿತ್ರದ ಮೇಲೆ ಭಾರಿ ನಿರೀಕ್ಷೆ ಹುಟ್ಟಿಸಿದೆ.
ನಟ ರಕ್ಷಿತ್ ಶೆಟ್ಟಿ ಅವರು ಸಿನಿಮಾದ ಬಗ್ಗೆ ಸ್ವಾರಸ್ಯಕರ ಮಾಹಿತಿಗಳನ್ನು ಹೊರಹಾಕಿದ್ದು, “164 ದಿನಗಳ ಶೂಟಿಂಗ್‍ಗೆ ಪೂರ್ಣ ವಿರಾಮ ಇಡುತ್ತಿದ್ದೇವೆ. ಚಾರ್ಲಿ ಸಿನಿಮಾದ ಅದ್ಬುತ ಪಯಣವನ್ನು ಕುಂಬಳಕಾಯಿ ಒಡೆಯುವುದರ ಮೂಲಕ ಮುಗಿಸಿದ್ದೇವೆ. ಡಿಸೆಂಬರ್ 31ರಂದು ಚಿತ್ರ ಮಂದಿರದಲ್ಲಿ ಭೇಟಿಯಾಗೋಣ” ಎಂದು ಕುಂಬಳಕಾಯಿ ಕಾರ್ಯಕ್ರಮದ ಕೆಲವು ಸಿಹಿ ಕ್ಷಣಗಳ ಫೋಟೋಗಳನ್ನು ಇನ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.
ಈ ಚಿತ್ರದ ಟಾರ್ಚರ್ ಹಾಡು ಇತ್ತೀಚೆಗಷ್ಟೆ ಐದು ಭಾಷೆಗಳಲ್ಲಿ ಬಿಡುಗಡೆಗೊಂಡಿದ್ದು, ಐದು ಭಾಷೆಗಳಲ್ಲಿಯೂ ಪ್ರಸಿದ್ದ ಹಿನ್ನೆಲೆ ಗಾಯಕರು ಹಾಡಿದ್ದಾರೆ.
ಇದನ್ನೂ ಓದಿ: ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ
ಕನ್ನಡದಲ್ಲಿ ವಿಜಯ್ ಪ್ರಕಾಶ್ ಹಾಡಿದ್ದರೆ, ಮಲಯಾಳಂನಲ್ಲಿ ಜೆಸ್ಸಿ ಗಿಫ್ಟ್, ತಮಿಳಿನಲ್ಲಿ ಗಾನ ಬಾಲಚಂದರ್, ತೆಲುಗಿನಲ್ಲಿ ರಾಮ್ ಮಿರಿಯಾಲ ಮತ್ತು ಹಿಂದಿಯಲ್ಲಿ ಸ್ವರೂಪ್ ಖಾನ್ ಧ್ವನಿ ನೀಡಿದ್ದಾರೆ.
ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದು, ರಕ್ಷಿತ್ ಶೆಟ್ಟಿಯ ಜೊತೆಗೆ ಲ್ಯಾಬ್ರಡಾರ್ ನಾಯಿ ಪೂರ್ಣ ಪ್ರಮಾಣದ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಚಿತ್ರವನ್ನು ಯುವ ನಿರ್ದೇಶಕ ಕಿರಣ್ ರಾಜ್ ನಿರ್ದೇಶಿಸಿದ್ದಾರೆ. ರಾಜ್ ಬಿ, ಶೆಟ್ಟಿ, ಡ್ಯಾನಿಶ್ ಸೇಠ್, ಬಾಬಿ ಸಿಂಹ, ಬೇಬಿ ಶಾರ್ವರಿ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರ ದಾರಿ ತಪ್ಪಿದ ಶ್ವಾನ ಚಾರ್ಲಿ ಮತ್ತು ಅವನ ಸಹಚರ ಧರ್ಮ (ರಕ್ಷಿತ್ ಶೆಟ್ಟಿ ಪಾತ್ರ) ಸುತ್ತ ಕಥೆಯನ್ನು ಹೆಣೆಯುತ್ತದೆ. ಚಿತ್ರದ ನಾಯಕ ರಕ್ಷಿತ್ ಶೆಟ್ಟಿ ಜತೆಗೆ ಶ್ವಾನ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
