ತೆರೆಯತ್ತ ನಮ್ ಗಣಿ
ಬಿ.ಕಾಂ ಪಾಸಾದವರ ಕಥೆ
Team Udayavani, Nov 6, 2019, 5:01 AM IST
ಅಭಿಷೇಕ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸಿ ಮತ್ತು ನಿರ್ದೇಶಿಸಿರುವ ಹೊಸಚಿತ್ರ “ನಮ್ ಗಣಿ ಬಿ.ಕಾಂ ಪಾಸ್’ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಸದ್ಯ ಸೋಶಿಯಲ್ ಮೀಡಿಯಾಗಳಲ್ಲಿ “ಗಣಿ’ಯ ಟ್ರೇಲರ್ಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಇದೇ ಖುಷಿಯಲ್ಲಿರುವ ಚಿತ್ರತಂಡ, ಇದೇ ನ. 15ರಂದು “ನಮ್ ಗಣಿ ಬಿ.ಕಾಂ ಪಾಸ್’ ಚಿತ್ರವನ್ನು ತೆರೆಗೆ ತರುವ ಪ್ಲಾನ್ ಹಾಕಿಕೊಂಡಿದೆ.
ಬಿ. ಕಾಂ ಪದವಿ ಮುಗಿಸಿ ಮೂರು ವರ್ಷವಾದರೂ, ಕೆಲಸ ಸಿಗದ ಗಣಿ (ಗಣೇಶ್) ತನ್ನ ಸ್ನೇಹಿತರ ಜೊತೆ ಸೇರಿ ಒಂದು ಉದ್ಯಮ ಶುರು ಮಾಡಲು ಹೊರಟಾಗ ಅದರಿಂದ ಏನೇನು ತೊಂದರೆ ಅನುಭವಿಸುತ್ತಾನೆ. ಕೊನೆಗೆ ಆ ಉದ್ಯಮದಲ್ಲಿ ತಾನು ಅಂಕೊಂಡಂತೆ ಯಶಸ್ವಿಯಾಗುತ್ತಾನಾ, ಇಲ್ಲವಾ ಅನ್ನೋದರ ಸುತ್ತ ಚಿತ್ರದ ಕಥೆ ನಡೆಯಲಿದೆಯಂತೆ. ಇನ್ನು ಚಿತ್ರದಲ್ಲಿ ಅಭಿಷೇಕ್ ಶೆಟ್ಟಿ ಅವರಿಗೆ ನಾಯಕಿಯಾಗಿ ಐಶಾನಿ ಶೆಟ್ಟಿ ಜೋಡಿಯಾಗಿದ್ದಾರೆ. ಉಳಿದಂತೆ ಸುಚೇಂದ್ರ ಪ್ರಸಾದ್, ಶಂಕರ್ ಅಶ್ವಥ್ ಮೊದಲಾದ ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಬೃಂದಾವನ್ ಎಂಟರ್ಪ್ರೈಸಸ್’ ಬ್ಯಾನರ್ನಲ್ಲಿ ನಾಗೇಶ್ ಕುಮಾರ್ ಯು.ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಒಟ್ಟಾರೆ ಲವ್ ಕಂ ಕಾಮಿಡಿ, ಥ್ರಿಲ್ಲರ್ ಶೈಲಿಯಲ್ಲಿ ತೆರೆಗೆ ಬರುತ್ತಿರುವ “ನಮ್ ಗಣಿ ಬಿ.ಕಾಂ ಪಾಸ್’ ಚಿತ್ರದ ಟೈಟಲ್ ಮತ್ತು ಟ್ರೇಲರ್ ಒಂದಷ್ಟು ಭರವಸೆ ಮೂಡಿಸಲು ಯಶಸ್ವಿಯಾಗಿದ್ದು, ಗಣಿ ಕಥೆ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಇನ್ನೇನು ಕೆಲ ದಿನಗಳಲ್ಲೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ