ತೆಲುಗು, ತಮಿಳು, ಹಿಂದಿಯತ್ತ ನನ್ನ ಪ್ರಕಾರ
Team Udayavani, Sep 4, 2019, 2:34 PM IST
ಕಿಶೋರ್, ಪ್ರಿಯಾಮಣಿ ಮುಖ್ಯಭೂಮಿಕೆಯಲ್ಲಿರುವ “ನನ್ನ ಪ್ರಕಾರ’ ಚಿತ್ರ ಎರಡು ವಾರಗಳ ಹಿಂದೆ ಬಿಡುಗಡೆಯಾಗಿರೋದು ನಿಮಗೆ ಗೊತ್ತಿರಬಹುದು. ಚಿತ್ರ ನೋಡಿದ ಪ್ರೇಕ್ಷಕರಿಂದ, ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಒಂದು ಸಸ್ಪೆನ್ಸ್-ಥ್ರಿಲ್ಲರ್ ಚಿತ್ರವಾಗಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಈಗ ಚಿತ್ರ ಪರಭಾಷಾ ಚಿತ್ರ ಪ್ರೇಮಿಗಳ ಗಮನವನ್ನು ಸೆಳೆದಿದೆ. “ನನ್ನ ಪ್ರಕಾರ’ ಚಿತ್ರ ತೆಲುಗು ಹಾಗೂ ತಮಿಳಿಗೆ ಡಬ್ ಆಗುತ್ತಿದೆ. ಈಗಾಗಲೇ ಡಬ್ಬಿಂಗ್ ರೈಟ್ಸ್ ಮಾರಾಟವಾಗಿದ್ದು, ಹಿಂದಿಗೆ ರೀಮೇಕ್ ಆಗುವ ಸಾಧ್ಯತೆ ಇದೆ.
ಈಗಾಗಲೇ ಹಿಂದಿ ರೀಮೇಕ್ ಕುರಿತು ಬಹುತೇಕ ಅಂತಿಮವಾಗಿದೆ. “ನನ್ನ ಪ್ರಕಾರ’ ಚಿತ್ರ 25 ದಿನಗಳನ್ನು ಪೂರೈಸುತ್ತಿದ್ದಂತೆ ಚಿತ್ರವನ್ನು ವಿದೇಶದಲ್ಲಿ ಬಿಡುಗಡೆ ಮಾಡುವ ಯೋಚನೆ ಕೂಡಾ ಚಿತ್ರತಂಡಕ್ಕಿದೆ. ಜೊತೆಗೆ ಬಿ.ಸಿ.ಸೆಂಟರ್ಗಳಲ್ಲೂ ಚಿತ್ರ ಈ ವಾರದಿಂದ ಪ್ರದರ್ಶನ ಗೊಳ್ಳಲಿದೆ. ಈ ಎಲ್ಲಾ ಕಾರಣಗಳಿಂದಾಗಿ ಚಿತ್ರತಂಡ ಖುಷಿಯಾಗಿದೆ.
ಈ ಚಿತ್ರವನ್ನು ವಿನಯ್ ಬಾಲಾಜಿ ನಿರ್ದೇಶಿಸಿದ್ದು, ಗುರುರಾಜ್ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಪ್ರಿಯಾಮಣಿ, ಕಿಶೋರ್, ಮಯೂರಿ, ನಿರಂಜನ್ ದೇಶಪಾಂಡೆ ಸೇರಿದಂತೆ ಅನೇಕರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ