ಎಲ್ಲರೂ ಕಂಡ ಪ್ರಕಾರ
Team Udayavani, Nov 8, 2017, 4:40 PM IST
ಗಾಂಧಿನಗರಕ್ಕೆ ಎಂದಿನಂತೆ ಮತ್ತೊಂದು ಹೊಸಬರ ತಂಡದ ಆಗಮನವಾಗಿದೆ. ಹೊಸಬರೆಲ್ಲ ಸೇರಿ “ನನ್ನ ಪ್ರಕಾರ’ ಎಂಬ ಸಿನಿಮಾಗೆ ಕೈ ಹಾಕಿದ್ದಾರೆ. ಈ ಚಿತ್ರದ ಮೂಲಕ ವಿನಯ್ ಬಾಲಾಜಿ ನಿರ್ದೇಶಕರಾಗುತ್ತಿದ್ದಾರೆ.
ವಿಶೇಷವೆಂದರೆ, ಮದುವೆಯ ನಂತರ ಪ್ರಿಯಾಮಣಿ ನಟಿಸುತ್ತಿರುವ ಮೊದಲ ಚಿತ್ರ ಇದು. ಪ್ರಿಯಾಮಣಿ ಅಲ್ಲದೆ, ಕಿಶೋರ್, ಮಯೂರಿ ಮತ್ತು “ಕಾಲ್ಕೇಜಿ ಪ್ರೀತಿ’ ಚಿತ್ರದ ನಾಯಕ ನಿಹಾನ್ ಇಲ್ಲಿ ಮುಖ್ಯಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿರಂಜನ್ ದೇಶಪಾಂಡೆ ಇಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ.
ಇನ್ನು, ಜಿ.ವಿ.ಕೆ. ಕಂಬೈನ್ಸ್ ಮೂಲಕ “ನನ್ನ ಪ್ರಕಾರ’ ಸಿನಿಮಾ ತಯಾರಾಗುತ್ತಿದೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವುದಕ್ಕೆ ನಿರ್ದೇಶಕ ಯೋಗರಾಜ್ ಭಟ್ ಬಂದಿದ್ದರು. ಜೊತೆಗೆ ಸಚಿವ ಎಚ್.ಎಂ. ರೇವಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ