
ಅಂತಾರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡ ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ
Team Udayavani, Jun 15, 2021, 2:21 PM IST

ಬೆಂಗಳೂರು : ರಂಗಭೂಮಿ ಕಲಾವಿದೆ, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ಅಂತಾರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ‘ವೇರ್ ಈಸ್ ಪಿಂಕಿ’ ಚಿತ್ರದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ನ್ಯೂಯಾರ್ಕ್‌ನ ಇಂಡಿಯನ್ ಫಿಲಂ ಫೆಸ್ಟಿವಲ್‌ನಲ್ಲಿ ‘ವೇರ್ ಈಸ್ ಪಿಂಕಿ’ (ಪಿಂಕಿ ಎಲ್ಲಿ) ಚಿತ್ರಕ್ಕೆ ಎರಡು ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ನಟಿ ವಿಭಾಗದಲ್ಲಿ ವಿಶೇಷ ಗಮನ ಸೆಳೆದಿದೆ.
ಈ ಕುರಿತು ಅಕ್ಷತಾ ಪಾಂಡವಪುರ ಸಂತಸ ವ್ಯಕ್ತಪಡಿಸಿದ್ದು, ”ಇದು ನನ್ನ ಮೊದಲ ಅಂತಾರಾಷ್ಟ್ರೀಯ ಪ್ರಶಸ್ತಿ ಆಗಿದ್ದು, ಇದರ ಸಂಪೂರ್ಣ ಕ್ರೆಡಿಟ್ ಅವಕಾಶ ಕೊಟ್ಟ ನಿರ್ದೇಶಕರಿಗೆ” ಎಂದಿದ್ದಾರೆ.
ನ್ಯೂಯಾರ್ಕ್ ಇಂಡಿಯನ್ ಫಿಲಂ ಫೆಸ್ಟಿವಲ್ 2021, ಇಂತಹ ಚಿತ್ರೋತ್ಸವಕ್ಕೆ ನಮ್ಮ ಕನ್ನಡ ಚಿತ್ರ ಆಯ್ಕೆ ಆಗೋದೇ ಒಂದು ಖುಷಿ, ಇನ್ನೂ ಅತ್ಯುತ್ತಮ ಚಿತ್ರ, ಅತ್ಯುತ್ತಮ ಚಿತ್ರಕಥೆ, ಅತ್ಯುತ್ತಮ ನಟಿ ಈ 3 ವರ್ಗದಲ್ಲಿ ನಾಮಿನೇಟ್ ಆಗಿದ್ದು ಡಬಲ್ ಖುಷಿ. ಈ ಪೈಕಿ ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದ್ದು ನಿಜಕ್ಕೂ ಹೆಮ್ಮೆಯ ವಿಚಾರ…’ ಎಂದು ಅಕ್ಷತಾ ಖುಷಿ ಹಂಚಿಕೊಂಡರು.
‘ವೇರ್ ಈಸ್ ಪಿಂಕಿ’ ಚಿತ್ರವನ್ನು ಪೃಥ್ವಿ ಕೋಣನೂರು ನಿರ್ದೇಶಿಸಿದ್ದು ಅಕ್ಷತಾ ಪಾಂಡವಪುರ ಮತ್ತು ದೀಪಕ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ನೈಜ ಘಟನೆಯನ್ನು ಆಧರಿಸಿ ಮಾಡಿರುವ ಚಿತ್ರವಾಗಿದ್ದು, 8 ತಿಂಗಳ ಮಗುವೊಂದು ಕಳೆದು ಹೋದಾಗ ಆ ಮಗುವಿನ ಸುತ್ತ ಬರುವ ಪಾತ್ರಗಳ ತಲ್ಲಣವನ್ನು ಸಿನಿಮಾ ಮಾಡಲಾಗಿದೆ. ಇದಕ್ಕೂ ಮುಂಚೆ ‘ಪಿಂಕಿ ಎಲ್ಲಿ’ ಸಿನಿಮಾ ಭಾರತದ ಕೋಲ್ಕತಾ, ಮುಂಬೈ (ಮಾಮಿ), ಕೇರಳ, ಜೈಪುರ್, ಪನೋರಮ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್‌ಗೆ ಆಯ್ಕೆಯಾಗಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
