ಈ ವಾರದಿಂದ ಮತ್ತೆ ಹೊಸ ಸಿನಿಮಾಗಳು ರಿಲೀಸ್‌

ಎರಡನೇ ಲಾಕ್‌ಡೌನ್‌ ಬಳಿಕ ಬಿಡುಗಡೆಯಾಗುತ್ತಿರುವ ಮೊದಲಚಿತ್ರ ಕಲಿವೀರ

Team Udayavani, Aug 3, 2021, 8:35 AM IST

kaliveera

ಬೆಂಗಳೂರು: ಕೋವಿಡ್‌ ಎರಡನೇ ಅಲೆಯಿಂದಾಗಿ ಇದೇ ಏಪ್ರಿಲ್‌ ತಿಂಗಳಲ್ಲಿ ಲಾಕ್‌ ಡೌನ್‌ ಘೋಷಣೆಯಾಗಿದ್ದರಿಂದ, ರಾಜ್ಯದ ಎಲ್ಲ ಥಿಯೇಟರ್‌ಗಳು ಸಂಪೂರ್ಣವಾಗಿ ಬಂದ್‌ ಆಗಿದ್ದವು. ಅದಾದ ಬಳಿಕ ಸುಮಾರು ಮೂರು ತಿಂಗಳ ನಂತರ ಜುಲೈ19ರಿಂದ ಮತ್ತೆ ಥಿಯೇಟರ್‌ಗಳಲ್ಲಿ 50% ರಷ್ಟು ಪ್ರೇಕ್ಷಕರ ಪ್ರವೇಶದೊಂದಿಗೆ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಸರ್ಕಾರ ಅವಕಾಶ ಕಲ್ಪಿಸಿತ್ತು.

ಆದರೆ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ಸಿಕ್ಕಿದ್ದರೂ, ಕಳೆದ ಎರಡು ವಾರಗಳಿಂದ ಯಾವುದೇ ಸಿನಿಮಾಗಳು ಬಿಡುಗಡೆ ಆಗದಿದ್ದರಿಂದ, ರಾಜ್ಯದ ಬಹುತೇಕ ಥಿಯೇಟರ್‌ಗಳಲ್ಲಿ ಒಂದು ರೀತಿಯ ಅಘೋಷಿತ ಲಾಕ್‌ಡೌನ್‌ ಇನ್ನೂ ಮುಂದುವರೆದಂತಿದೆ.

ಇನ್ನು ಆಗಸ್ಟ್‌ ಮತ್ತು ಸೆಪ್ಟೆಂಬರ್‌ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಒಂದಷ್ಟು ಬಿಗ್‌ ಬಜೆಟ್‌ ಮತ್ತು ಬಿಗ್‌ ಸ್ಟಾರ್‌ ಸಿನಿಮಾಗಳು ತಮ್ಮ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡುತ್ತಿರುವುದರಿಂದ, ಚಿತ್ರರಂಗದಲ್ಲಿ ಮತ್ತೆ ಒಂದಷ್ಟು ನಿರೀಕ್ಷೆ ಸಣ್ಣಗೆ ಗರಿಗೆದರುತ್ತಿದೆ.

ಹೀಗಾಗಿ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್‌ ಆದರೆ ಮತ್ತೆ ತಮ್ಮ ಸಿನಿಮಾಗಳ ರಿಲೀಸ್‌ಗೆ ಥಿಯೇಟರ್‌ ಕೊರತೆ ಎದುರಾಗಬಹುದು ಎಂಬ ಲೆಕ್ಕಚಾರದಿಂದ ಒಂದಷ್ಟು ಹೊಸಬರ ಸಿನಿಮಾಗಳು ಈ ನಡುವೆಯೇ ತೆರೆಗೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿವೆ.

ಎರಡನೇ ಲಾಕ್‌ಡೌನ್‌ ಬಳಿಕ ಈ ವಾರ (ಆಗಸ್ಟ್‌ 6) “ಕಲಿವೀರ’ ಚಿತ್ರ ಬಿಡುಗಡೆಯಾಗುತ್ತಿದೆ. ಸುಮಾರು ನಾಲ್ಕು ತಿಂಗಳ ನಂತರ ಥಿಯೇಟರ್‌ನಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಸುಮಾರು 50ಕ್ಕೂ ಹೆಚ್ಚುಕೇಂದ್ರಗಳಲ್ಲಿ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಪ್ಲಾನ್‌ ಹಾಕಿ ಕೊಂಡಿದೆ.

ಉತ್ತರಕರ್ನಾಟಕ ಮೂಲದ ಏಕಲವ್ಯ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದು ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಥಾಹಂದರ ಹೊಂದಿರುವಈ ಚಿತ್ರದಲ್ಲಿ ಪಾವನಗೌಡ, ಚಿರಶ್ರೀ ಅಂಚನ್‌ ನಾಯಕಿಯಾಗಿ ಅಭಿನಯಿಸಿದ್ದಾರೆ. .ಒಟ್ಟಾರೆ ಹೊಸಬರ “ಕಲಿವೀರ’ ಥಿಯೇಟರ್‌ನಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗುತ್ತಾನೆ ಅನ್ನೋದು ಇದೇ ವಾರಾಂತ್ಯದಲ್ಲಿ ಗೊತ್ತಾಗಲಿದೆ.

ಉಲಾ ಪಲ್ಟಾ ಆಗುತ್ತಾ ಲೆಕ್ಕಾಚಾರ?

ಆಗಸ್ಟ್‌ ಮೊದಲ ವಾರದಿಂದ ರಾಜ್ಯದಲ್ಲಿ ಥಿಯೇಟರ್‌ಗಳಲ್ಲಿ 100%ರಷ್ಟು ಪ್ರೇಕ್ಷಕರ ಪ್ರವೇಶಾವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಚಿತ್ರರಂಗದ ಬಹುತೇಕ ನಿರ್ಮಾಪಕರು ಮತ್ತು ಪ್ರದರ್ಶಕರಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಮಾಣ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿರುವುದರಿಂದ, ಕೋವಿಡ್‌ ಮೂರನೇ ಅಲೆಯ ಆತಂಕದಿಂದ ಸರ್ಕಾರ ಥಿಯೇಟರ್‌ಗಳಲ್ಲಿ 100%ರಷ್ಟು ಪ್ರೇಕ್ಷಕರ ಪ್ರವೇಶಾವಕಾಶ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಹೀಗಾಗಿ ಇನ್ನೂ ಎರಡು – ಮೂರು ವಾರ ಈಗಿರುವಂತೆಯೇ 50% ರಷ್ಟು ಪ್ರೇಕ್ಷಕರ ಪ್ರವೇಶದೊಂದಿಗೆ ನಿರ್ಬಂಧಿತ ಪ್ರವೇಶ ಮುಂದುವರೆಯಲಿದೆ ಎನ್ನಲಾಗುತ್ತಿದೆ. ಹೀಗಾಗಿ ಆಗಸ್ಟ್‌ ಮೊದಲ ವಾರ, ಎರಡನೇ ವಾರ ತಮ್ಮ ಬಿಡುಗಡೆ ಅನೌನ್ಸ್‌ ಮಾಡುವ ಯೋಚನೆಯಲ್ಲಿದ್ದ ಅನೇಕ ನಿರ್ಮಾಪಕರು ಇನ್ನೂಕೆಲವು ದಿನಕಾದು ನೋಡುವ ನಿರ್ಧಾರಕ್ಕೆ ಬಂದಿದ್ದಾರೆ. ಇದರ ಜೊತೆಗೆ ಮತ್ತೂಂದು ಬಿಗ್‌ ಸ್ಟಾರ್‌ ಚಿತ್ರ “ಕೋಟಿಗೊಬ್ಬ-3′ ಸುದೀಪ್‌ ಬರ್ತ್‌ಡೇ ಪ್ರಯುಕ್ತ ಸೆ.2ಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.