ಭ್ರಮೆಯ ಸುತ್ತ ಹೊಸಬರ ಚಿತ್ತ…

ಬಿಡುಗಡೆಗೆ ರೆಡಿಯಾದ ಕಪೋ ಕಲ್ಪಿತಂ ಚಿತ್ರ

Team Udayavani, Oct 13, 2021, 1:30 PM IST

ಬಿಡುಗಡೆಗೆ ರೆಡಿಯಾದ ಕಪೋ ಕಲ್ಪಿತಂ ಚಿತ್ರ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈಗ “ಕಪೋ ಕಲ್ಪಿತಂ’ ಚಿತ್ರದ ಮೂಲಕ ನವ ನಿರ್ದೇಶಕಿಯೊಬ್ಬರು ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ ಅವರೇ ಸುಮಿತ್ರಾ ಗೌಡ.

ಈ ಹಿಂದೆ “ಜಿಷ್ಣು’ ಸಿನಿಮಾದಲ್ಲಿ ನಾಯಕಿಯಾಗಿ ಮತ್ತು ಸಹ ನಿರ್ದೇಶಕಿಯಾಗಿ ಕೆಲಸ ಮಾಡಿದ ಅನುಭವವಿರುವ ಸುಮಿತ್ರಾ ಗೌಡ “ಕಪೋ ಕಲ್ಪಿತಂ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌-ಕಟ್‌ ಹೇಳುವುದರ ಜೊತೆಗೆ ತೆರೆಮೇಲೆ ನಾಯಕಿಯಾಗಿಯೂ ಕಾಣಿಸಿಕೊಂಡಿದ್ದಾರೆ. ಸದ್ಯ ಸುಮಿತ್ರಾ ಗೌಡ ಚೊಚ್ಚಲ ನಿರ್ದೇಶನದ “ಕಪೋ ಕಲ್ಪಿತಂ’ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಕೂಡ ಚಿತ್ರದ ಬಿಡುಗಡೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಇದೇ ವೇಳೆ ಚಿತ್ರದ ಬಗ್ಗೆ ಮಾಹಿತಿ ನೀಡಲು ಮಾಧ್ಯಮಗಳ ಮುಂದೆ ಬಂದಿದ್ದ “ಕಪೋ ಕಲ್ಪಿತಂ’ ಚಿತ್ರತಂಡ, ಚಿತ್ರದ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿತು. ಚಿತ್ರದ ಬಗ್ಗೆ ಮೊದಲಿಗೆ ಮಾತನಾಡಿದ ನಾಯಕಿ ಕಂ ನಿರ್ದೇಶಕಿ ಸುಮಿತ್ರಾ ಗೌಡ, “ಇದೊಂದು ಹಾರರ್‌ ಶೈಲಿಯ ಸಿನಿಮಾವಾಗಿದ್ದು, ಮನುಷ್ಯನ ಭ್ರಮೆ ಹೇಗೆಲ್ಲ ಕೆಲಸ ಮಾಡುತ್ತದೆ ಅನ್ನೋದರ ಸುತ್ತ ಸಿನಿಮಾ ನಡೆಯುತ್ತದೆ. ಯುವಕರ ತಂಡವೊಂದು ನಿರ್ಜನ ಪ್ರದೇಶದಲ್ಲಿರುವ ಮನೆಗೆ ಹೋಗುತ್ತದೆ. ಅಲ್ಲಿ ಅವರಿಗಾಗುವ ವಿಚಿತ್ರ ಅನುಭವಗಳು, ಅದರಿಂದ ಅವರು ಹೇಗೆ ಹೊರಗೆ ಬರುತ್ತಾರೆ ಎನ್ನುವುದು ಸಿನಿಮಾದ ಕಥೆಯ ಎಳೆ.

ಇದನ್ನೂ ಓದಿ;- ಚಿಂತಾಮಣಿ: ನೀರಿನಲ್ಲಿ ಮುಳುಗಿ ಹುಡುಗ ಸಾವು

ಇದರಲ್ಲಿ ನಾನು ಜರ್ನಲಿಸ್ಟ್‌ ಪಾತ್ರ ಮಾಡಿದ್ದೇನೆ. ಈಗಾಗಲೇ ಸಿನಿಮಾದ ಕೆಲಸಗಳು ಪೂರ್ಣಗೊಂಡಿದ್ದು ನವೆಂಬರ್‌ ವೇಳೆಗೆ ರಿಲೀಸ್‌ ಮಾಡುವ ಯೋಚನೆಯಿದೆ’ ಎಂದು ಚಿತ್ರದ ಕಥಾಹಂದರ ಮತ್ತು ಪಾತ್ರ ಪರಿಚಯ ಮಾಡಿಕೊಟ್ಟರು. ಸಂಪೂರ್ಣ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ “ಕಪೋ ಕಲ್ಪಿತ’ ಚಿತ್ರದಲ್ಲಿ ಪ್ರೀತಂ ಮಕ್ಕಿಹಾಲಿ, ಸಂದೀಪ್‌ ಮಲಾನಿ, ಶಿವರಾಜ್‌ ಕರ್ಕೇರ, ಗೌರೀಶ್‌ ಅಕ್ಕಿ, ರಾಜೇಶ್‌ ಕಣ್ಣೂರ್‌, ವಿನೀತ್‌, ವಿಶಾಲ್, ಅಮೋಘ್, ಚೈತ್ರಾ, ದೀಕ್ಷಿತ್‌ ಗೌಡ ಮುಂತಾದವರು ಚಿತ್ರದ ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಸವ್ಯಸಾಚಿ ಕ್ರಿಯೇಶನ್ಸ್‌’ ಮತ್ತು “ಅಕ್ಷರ ಪೊ›ಡಕ್ಷನ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ರಮೇಶ್‌ ಚಿಕ್ಕೇಗೌಡ, ಕವಿತಾ ಕನ್ನಿಕಾ ಪೂಜಾರಿ, ಗಣಿದೇವ್‌ ಕಾರ್ಕಳ ಬಂಡವಾಳ ಹೂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ‌

ಈಗಾಗಲೇ “ಕಪೋ ಕಲ್ಪಿತಂ’ ಟೀಸರ್‌ ಬಿಡುಗಡೆ ಮಾಡಿರುವ ಚಿತ್ರತಂಡ, ಸದ್ಯ ಚಿತ್ರದ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. ಒಟ್ಟಾರೆ ಹೊಸಬರ “ಕಪೋ ಕಲ್ಪಿತಂ’ ಥಿಯೇಟರ್‌ನಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷಕರನ್ನು ಬೆಚ್ಚಿ ಬೀಳಿಸುತ್ತದೆ ಅನ್ನೋದು ಶೀಘ್ರದಲ್ಲಿಯೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.