ಹೊಸಬರ “5 ಅಡಿ 7 ಅಂಗುಲ’ ತೆರೆಗೆ ಸಿದ್ಧ

Team Udayavani, Jan 29, 2020, 7:00 AM IST

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “5 ಅಡಿ 7 ಅಂಗುಲ’ ಚಿತ್ರ ತೆರೆಗೆ ಬರೋದಕ್ಕೆ ತಯಾರಾಗಿದೆ. ಸದ್ಯ ಬಹುತೇಕ ತನ್ನ ಕೆಲಸಗಳನ್ನು ಪೂರ್ಣಗೊಳಿಸಿ ಫ‌ಸ್ಟ್‌ ಕಾಪಿಯೊಂದಿಗೆ ಹೊರಬಂದಿರುವ “5 ಅಡಿ 7 ಅಂಗುಲ’ ಚಿತ್ರವನ್ನು ಇತ್ತೀಚೆಗೆ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ “ಯು/ಎ’ ಸರ್ಟಿಫಿಕೆಟ್‌ ನೀಡಿ, ಬಿಡುಗಡೆಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ.

“ಬಿಯಾನ್‌ ಡ್ರೀಮ್ಸ್‌ ಕ್ರಿಯೇಷನ್ಸ್‌’ ಬ್ಯಾನರ್‌ನಲ್ಲಿ ನಂದಳಿಕೆ ನಿತ್ಯಾನಂದ ಪ್ರಭು ಕಥೆ ಬರೆದು ನಿರ್ದೇಶಿಸಿರುವ ಚೊಚ್ಚಲ ಚಿತ್ರ “5 ಅಡಿ 7 ಅಂಗುಲ’ಕ್ಕೆ ರುದ್ರಮುನಿ ಬೆಳೆಗೆರೆ ಛಾಯಾಗ್ರಹಣ, ಬಿ.ಎಸ್‌ ಕೆಂಪರಾಜು ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ರಘುತಾಣೆ, ಆರ್‌.ಎಸ್‌.ಗಣೇಶ್‌ ಸಂಗೀತ ಸಂಯೋಜಿಸಿದ್ದಾರೆ.

ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ “5 ಅಡಿ 7 ಅಂಗುಲ’ ಚಿತ್ರವನ್ನು ಬೆಂಗಳೂರು, ನೆಲಮಂಗಲ, ತಡಿಯಾಂಡಮೌಳ್‌, ಶುಂಟಿಕೊಪ್ಪ, ಮಡಿಕೇರಿ ಮುಂತಾದ ಕಡೆಗಳಲ್ಲಿ ಚಿತ್ರೀಕರಿಸಲಾಗಿದೆ. ನವ ಪ್ರತಿಭೆಗಳಾದ ರಾಸಿಕ್‌ಕುಮಾರ್‌, ಭುವನ್‌, ಅದಿತಿ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.

ಉಳಿದಂತೆ ವೀಣಾ ಸುಂದರ್‌, ಸತ್ಯನಾಥ್‌, ಪ್ರಣವ ಮೂರ್ತಿ, ಚಕ್ರವರ್ತಿ, ಮಹದೇವ್‌, ಪವನ್‌ ಕುಮಾರ್‌, ಸಂತೋಷ್‌, ವೆಂಕಟ್‌, ಶ್ರೀಶ ಭಾರದ್ವಾಜ್‌, ನವೀನ್‌, ಕಿಶೋರ್‌, ಕುಶಾಲ್‌ ರಾಜ್‌, ಮದನ್‌ ರಾಜ್‌, ಮಾಸ್ಟರ್‌ ನಾಗೇಂದ್ರ ಪ್ರಸಾದ್‌ ಮುಂತಾದವರು ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿ ಕೊಂಡಿದ್ದಾರೆ. ಸದ್ಯ ನಿಧಾನವಾಗಿ ಚಿತ್ರದ ಪ್ರಚಾರ ಕಾರ್ಯಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಚಿತ್ರತಂಡ, ಫೆಬ್ರವರಿ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದರ್ಶನ್‌ ಈಗ "ಗಂಡುಗಲಿ ಮದಕರಿನಾಯಕ' ಸಿನಿಮಾದಲ್ಲಿ ತೊಡಗಿದ್ದಾರೆ. ಅವರ ಅಭಿನಯದ "ಕುರುಕ್ಷೇತ್ರ' ಚಿತ್ರದ ಶತದಿನೋತ್ಸವ ಕೂಡ ಶಿವರಾತ್ರಿ ದಿನ ಅದ್ಧೂರಿಯಾಗಿ ನಡೆದಿದೆ....

  • "ಜೋಗಿ' ಚಿತ್ರದ ನಿರ್ಮಾಪಕ, ಅಶ್ವಿ‌ನಿ ರೆಕಾರ್ಡಿಂಗ್‌ ಕಂಪೆನಿಯ ರೂವಾರಿ ಅಶ್ವಿ‌ನಿ ರಾಮ್‌ ಪ್ರಸಾದ್‌ ಈಗ ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸುವ ಸಿದ್ಧತೆ...

  • ಇತ್ತೀಚೆಗಷ್ಟೇ "ರ್‍ಯಾಂಬೋ-2' ಚಿತ್ರದ "ಚುಟು ಚುಟು ಅಂತೈತಿ...' ಅನ್ನೋ ಉತ್ತರ ಕರ್ನಾಟಕ ಶೈಲಿಯ ಜವಾರಿ ಹಾಡು ಯು-ಟ್ಯೂಬ್‌ನಲ್ಲಿ 100 ಮಿಲಿಯನ್‌ ಹಿಟ್ಸ್ ಪಡೆದುಕೊಂಡು...

  • ಪ್ರತಿವರ್ಷದಂತೆ ಈ ವರ್ಷವೂ ನಟ ಶಿವರಾಜ ಕುಮಾರ್‌ ಅಯ್ಯಪ್ಪ ಸ್ವಾಮಿ ದರ್ಶನ ಕೈಗೊಳ್ಳಲಿದ್ದಾರೆ. ಶನಿವಾರ ಎಂ.ಎಸ್‌ ರಾಮಯ್ಯ ಆಸ್ಪತ್ರೆಯ ಹತ್ತಿರವಿರುವ ಅಯ್ಯಪ್ಪ...

  • ಈ ಬಾರಿ ನಡೆಯಲಿರುವ ಹನ್ನೆರಡನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ನಟ ಯಶ್‌ ಅವರು ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಪ್ರತಿ...

ಹೊಸ ಸೇರ್ಪಡೆ