ಬೋಲ್ಡ್ ಲುಕ್ ನಲ್ಲಿ ನಿಶ್ವಿಕಾ ನಾಯ್ಡು: ‘ದಿಲ್ ಪಸಂದ್’ ನಲ್ಲಿ ರೊಮ್ಯಾಂಟಿಕ್ ಜೋಡಿ
Team Udayavani, Nov 25, 2021, 9:27 AM IST
ಸಿನಿಮಾಗಳ ಮೇಲೆ ಸಿನಿಮಾ ಮಾಡುತ್ತಾ ಬಿಝಿಯಾಗುತ್ತಿರುವ ನಿಶ್ವಿ ಕಾ ನಾಯ್ಡು ಈಗ ಸಖತ್ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾದಿಂದ ಸಿನಿಮಾಕ್ಕೆ ಹೊಸ ಪಾತ್ರಗಳ ತಲಾಶ್ನಲ್ಲಿರುವ ನಿಶ್ವಿಕಾ, ಈಗ “ದಿಲ್ ಪಸಂದ್’ ಸಿನಿಮಾದಲ್ಲಿ ಸಖತ್ ಬೋಲ್ಡ್ ಅಂಡ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಶಿವತೇಜಸ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಿಸುತ್ತಿದ್ದಾರೆ. ನಿಶ್ವಿಕಾ ನಾಯ್ಡು ಹಾಗೂ ಮೇಘಾ ಶೆಟ್ಟಿ ದಿಲ್ ಪಸಂದ್ನ ನಾಯಕಿಯರು. ಸಾಧುಕೋಕಿಲ, ರಂಗಾಯಣ ರಘು, ತಬಲ ನಾಣಿ, ಅರುಣಾ ಬಾಲರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ:“ಕತ್ರೀನಾ ಕೆನ್ನೆಯಂಥಾ ರಸ್ತೆ ಮಾಡ್ತೀವಿ” ಎಂದ ಸಚಿವ
ಈಗಾಗಲೇ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕಾಯವಾಗಿದೆ. ಡಿಸೆಂಬರ್ ಮೊದಲವಾರದಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ.
ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮರ ಸಾಹಸ ನಿರ್ದೇಶನ ಚಿತ್ರಕ್ಕಿದೆ.