ಉಪ್ಪಿಗೆ ನಿಶ್ವಿಕಾ-ರುಕ್ಮಿಣಿ ಜೋಡಿ
ಶಶಾಂಕ್ ನಿರ್ಮಾಣ, ನಿರ್ದೇಶನದ ಚಿತ್ರ
Team Udayavani, Aug 17, 2019, 3:00 AM IST
ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಅನೌನ್ಸ್ ಆಗಿದ್ದ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಶಶಾಂಕ್ ಕಾಂಬಿನೇಶನ್‌ನ ಹೊಸಚಿತ್ರ ಅಂತೂ ಸೆಟ್ಟೇರಿದೆ. “ಶಶಾಂಕ್ ಸಿನಿಮಾಸ್’ ಬ್ಯಾನರ್‌ನಲ್ಲಿ ನಿರ್ದೇಶಕ ಶಶಾಂಕ್ ಅವರೆ ನಿರ್ದೇಶಿಸಿ, ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಇತ್ತೀಚೆಗೆ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಶ್ರೀಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತವನ್ನು ನೆರವೇರಿಸಿ ಚಿತ್ರೀಕರಣಕ್ಕೆ ಚಾಲನೆ ನೀಡಲಾಯಿತು.
ಇನ್ನು ಈ ಚಿತ್ರದಲ್ಲಿ ನಾಯಕ ಉಪೇಂದ್ರ ಅವರಿಗೆ ನಿಶ್ವಿಕಾ ನಾಯ್ಡು ಮತ್ತು ರುಕ್ಮಿಣಿ (ಬೀರಬಲ್) ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಸುಜ್ಞಾನ್ ಛಾಯಾಗ್ರಹಣ ಮತ್ತು ಅರ್ಜುನ್ ಜನ್ಯಾ ಸಂಗೀತ ಸಂಯೋಜನೆ ಇದೆ. ಸದ್ಯ “ಪ್ರೊಡಕ್ಷನ್ ನಂ-2′ ಎಂದು ವರ್ಕಿಂಗ್ ಟೈಟಲ್ ಇಡಲಾಗಿದ್ದು, ಚಿತ್ರ ಪೂರ್ಣ ಶೀರ್ಷಿಕೆ, ಚಿತ್ರದ ಇತರೆ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.
ಈ ಚಿತ್ರದ ಟೈಟಲ್ ಮತ್ತು ಫಸ್ಟ್‌ಲುಕ್ ಸೆಪ್ಟೆಂಬರ್ 18ರಂದು ಉಪೇಂದ್ರ ಅವರ ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದ್ದು, ಸೆಪ್ಟೆಂಬರ್ ಕೊನೆ ವಾರದಿಂದ ಚಿತ್ರದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444