“ಗ್ರಾಮಾಯಣ’ ಚಿತ್ರದ ನಿರ್ಮಾಪಕ ಎನ್.ಎಲ್.ಎನ್. ಮೂರ್ತಿ ಇನ್ನಿಲ್ಲ
Team Udayavani, Jul 4, 2020, 7:53 AM IST
ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ಕುಮಾರ್ ನಟಿಸುತ್ತಿರುವ “ಗ್ರಾಮಾಯಣ’ ಚಿತ್ರದ ನಿರ್ಮಾಪಕ ಎನ್.ಎಲ್.ಎನ್. ಮೂರ್ತಿ (39) ಶುಕ್ರವಾರ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಮೃತರ ತಾಯಿ ಸಹ ಗುರುವಾರವಷ್ಟೇ ನಿಧನರಾಗಿದ್ದು, ಮೃತ ಮೂರ್ತಿ, ಪತ್ನಿ ಆರ್. ಲತಾ, ಮಗ ಮತ್ತು ಮಗಳನ್ನು ಅಗಲಿದ್ದಾರೆ. ಶನಿವಾರ ಬನಶಂಕರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರಂಗಭೂಮಿಯಲ್ಲೂ ಸಕ್ರಿಯರಾಗಿದ್ದ ಮೂರ್ತಿ ಸಿನಿಮಾ ರಂಗದ ಮೇಲಿನ ಆಸಕ್ತಿಯಿಂದಾಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದರು. ಹಾಗೂ “ಗ್ರಾಮಾಯಣ’ ಚಿತ್ರದ ಚಿತ್ರೀಕರಣ ಆರಂಭಿಸುವ ತಯಾರಿಯನ್ನೂ ಮಾಡಿಕೊಂಡಿದ್ದರು.
ಅಲ್ಲದೇ “ಇತ್ಯರ್ಥ’ ಚಿತ್ರಕ್ಕೂ ಮೂರ್ತಿ ಬಂಡವಾಳ ಹೂಡಿದ್ದರು. ಈ ಚಿತ್ರವನ್ನು ಎ.ಜಿ. ಶೇಷಾದ್ರಿ ನಿರ್ದೇಶನ ಮಾಡಿದ್ದು, ಚಿತ್ರ ಬಿಡುಗಡೆಯಾಗುವ ಹಂತದಲ್ಲಿತ್ತು. ಇನ್ನು ಮೂರ್ತಿ ನಿಧನಕ್ಕೆ ನಟ ವಿನಯ್ ರಾಜ್ ಕುಮಾರ್ ಸಂತಾಪ ಸೂಚಿಸಿದ್ದು, ಒಳ್ಳೇಯ ಚಿತ್ರ ನಿರ್ಮಾಣದ ಕನಸು ಕಂಡಿದ್ದ ಮೂರ್ತಿಯವರ ಅಕಾಲಿಕ ಸಾವು ದುಃಖತಂದಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್