ಕೆಜಿಎಫ್ -2 ಟೀಸರ್ ನಲ್ಲಿ ಪ್ರಚೋದನಾತ್ಮಕ ದೃಶ್ಯ: ಯಶ್ ಗೆ ನೋಟಿಸ್ ನೀಡಿದ ಆರೋಗ್ಯ ಇಲಾಖೆ
Team Udayavani, Jan 13, 2021, 11:00 AM IST
ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಟೀಸರ್ ಬಿಡುಗಡೆಯಾಗಿ ದಾಖಲೆಗಳನ್ನೆಲ್ಲಾ ಪುಡಿಗಟ್ಟಿದೆ. ಟೀಸರ್ ಹಿಟ್ ಆದ ಸಂಭ್ರಮದಲ್ಲಿರುವ ನಟ ಯಶ್ ಗೆ ರಾಜ್ಯ ಆರೋಗ್ಯ ಇಲಾಖೆ ಶಾಕ್ ನೀಡಿದೆ.
ಕೆಜಿಎಫ್ -2 ಟೀಸರ್ ನಲ್ಲಿ ಸಿಗರೇಟ್ ಸೇವನೆ ಪ್ರಚೋದಿಸುವ ದೃಶ್ಯವಿರುವ ಹಿನ್ನೆಲೆಯಲ್ಲಿ ನಟ ಯಶ್ ಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ನಿಮ್ಮನ್ನು ಈ ದೃಶ್ಯಗಳ ಮೂಲಕವು ಅಭಿಮಾನಿಗಳು ಅನುಸರಿಸುತ್ತಾರೆ. ಈ ಮೂಲಕ ಕ್ಯಾನ್ಸರ್ ಮುಂತಾದ ಕಾಯಿಲೆಗಳಿಗೆ ಯುವ ಜನರು ಒಳಗಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಇದನ್ನೂ ಓದಿ:ಕನ್ನಡ ಹುಡುಗಿಯ ಪರಭಾಷಾ ಪಯಣ : ತೆಲುಗಿನತ್ತ ಶ್ರೀಲೀಲಾ
ಈ ಎಲ್ಲಾ ಕಾರಣಗಳಿಂದ ತುರ್ತಾಗಿ ಇಂತಹ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಿಂದ ತೆರವುಗೊಳಿಸಬೇಕು ಎಂದು ಇಲಾಖೆ ರಾಕಿಭಾಯ್ ಗೆ ನೋಟಿಸ್ ನೀಡಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444