ಅಕ್ಟೋಬರ್‌ 11ಕ್ಕೆ “ಎಲ್ಲಿದ್ದೆ ಇಲ್ಲಿ ತನಕ’

ಟ್ರೇಲರ್‌ಗೆ ದರ್ಶನ್‌ ಸಾಥ್‌

Team Udayavani, Sep 22, 2019, 3:03 AM IST

ನಟ ಸೃಜನ್‌ ಲೋಕೇಶ್‌ ಅಭಿನಯದ ಮುಂಬರುವ ಚಿತ್ರ “ಎಲ್ಲಿದ್ದೆ ಇಲ್ಲಿ ತನಕ ತನಕ’ ತೆರೆಗೆ ಬರೋದಕ್ಕೆ ಸಿದ್ಧವಾಗಿದೆ. ಚಿತ್ರವನ್ನು ಇದೇ ಅಕ್ಟೋಬರ್‌ 11ರಂದು ತೆರೆಗೆ ತರಲು ಪ್ಲಾನ್‌ ಮಾಡಿಕೊಂಡಿರುವ ಚಿತ್ರತಂಡ, ಸದ್ಯ ಚಿತ್ರದ ಅಂತಿಮ ಹಂತದ ಪ್ರಮೋಶನ್‌ ಕಾರ್ಯಗಳಲ್ಲಿ ನಿರತವಾಗಿದೆ. ಚಿತ್ರದ ಪ್ರಮೋಶನ್‌ ಭಾಗವಾಗಿ ಇತ್ತೀಚೆಗಷ್ಟೆ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಿಡುಗಡೆ ಮಾಡಿದ್ದ ಚಿತ್ರತಂಡ, ಇದೀಗ ಚಿತ್ರದ ಮೊದಲ ಟ್ರೇಲರ್‌ ಅನ್ನು ಬಿಡುಗಡೆಗೊಳಿಸಿದೆ.

ಇನ್ನು ಮೊದಲಿನಿಂದಲೂ ಸೃಜನ್‌ ಲೋಕೇಶ್‌ಗೆ ಸ್ನೇಹಿತನಾಗಿ ಚಿತ್ರರಂಗದಲ್ಲಿ ಸಾಥ್‌ ನೀಡುತ್ತ ಬಂದಿರುವ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, “ಎಲ್ಲಿದ್ದೆ ಇಲ್ಲಿ ತನಕ ತನಕ’ ಚಿತ್ರದ ಮೊದಲ ಟ್ರೇಲರ್‌ ಅನ್ನು ಬಿಡುಗಡೆಗೊಳಿಸಿದ್ದಾರೆ. ಇದೇ ವೇಳೆ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವ ದರ್ಶನ್‌, “ಚಿತ್ರ ಅದ್ಧೂರಿಯಾಗಿ ಮೂಡಿ ಬಂದಿದೆ ಎಂದು ಮೇಕಿಂಗ್‌ನಲ್ಲೆ ಗೊತ್ತಾಗುತ್ತದೆ. ಟ್ರೇಲರ್‌ ಭರವಸೆ ಮೂಡಿಸುವಂತಿದ್ದು, ಚಿತ್ರ ಯಶಸ್ವಿಯಾಗಲಿ’ ಎಂದು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

“ಲೋಕೇಶ್‌ ಪ್ರೊಡಕ್ಷನ್ಸ್‌’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ “ಎಲ್ಲಿದ್ದೆ ಇಲ್ಲಿ ತನಕ ತನಕ’ ಚಿತ್ರಕ್ಕೆ ತೇಜಸ್ವಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಸೃಜನ್‌ ಲೋಕೇಶ್‌ಗೆ ನಾಯಕಿಯಾಗಿ ಹರಿಪ್ರಿಯಾ ಜೋಡಿಯಾಗಿದ್ದಾರೆ. ಉಳಿದಂತೆ ತಾರಾ, ಸಾಧು ಕೋಕಿಲಾ, ಸಿಹಿಕಹಿ ಚಂದ್ರು, ತರಂಗ ವಿಶ್ವ ಮೊದಲಾದ ಕಲಾವಿದರ ತಾರಾಗಣ ಚಿತ್ರದಲ್ಲಿದೆ. ಕಾಮಿಡಿ, ಸೆಂಟಿಮೆಂಟ್‌ ಜೊತೆಗೆ ಕೌಟುಂಬಿಕ ಕಥಾಹಂದರ ಹೊಂದಿರುವ “ಎಲ್ಲಿದ್ದೆ ಇಲ್ಲಿ ತನಕ ತನಕ’ ಚಿತ್ರ ಪ್ರೇಕ್ಷಕ ಪ್ರಭುಗಳಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಅಕ್ಟೋಬರ್‌ ಎರಡನೇ ವಾರ ಗೊತ್ತಾಗಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ