ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಚಿತ್ರ

Team Udayavani, Dec 11, 2019, 4:53 PM IST

ಪರಿಪೂರ್ಣವಾದ ಕೌಟುಂಬಿಕ ಕಥಾ ಹಂದರ ಹೊಂದಿರೋ ಚಿತ್ರವೆಂಬ ವಿಚಾರ ಈಗಾಗಲೇ ಜಾಹೀರಾಗಿದೆ. ಟ್ರೇಲರ್, ಟೀಸರ್ ಮತ್ತು ಹಾಡುಗಳ ಮೂಲಕ ಒಡೆಯನ ಅದ್ದೂರಿತನದ ಮಜಲುಗಳು ಸಹ ಅನಾವರಣಗೊಂಡಿವೆ. ಸಂದೇಶ್ ನಾಗರಾಜ್ ಅರ್ಪಿಸಿ, ಎನ್ ಸಂದೇಶ್ ಅವರು ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ನಿರ್ಮಾಣ ಮಾಡಿರುವ ಚಿತ್ರವಿದು. ಇದರಲ್ಲಿ ದರ್ಶನ್ ತುಂಬಿದ ಮನೆಯ ಒಡೆಯನಾಗಿ, ಬಂಧಗಳಿಗೆ ಬೆಲೆ ಕೊಡುವ ನಾಯಕನಾಗಿ ಪಕ್ಕಾ ಫ್ಯಾಮಿಲಿ ಮ್ಯಾನ್ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಭರ್ಜರಿ ಆಕ್ಷನ್ ಸನ್ನಿವೇಶಗಳೂ ಈ ಸಿನಿಮಾದಲ್ಲಿ ಹೇರಳವಾಗಿದೆ. ಅದುವೇ ಈ ಚಿತ್ರದ ಪ್ರಧಾನ ಆಕರ್ಷಣೆ ಅನ್ನೋದು ಚಿತ್ರತಂಡದ ಭರವಸೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿಜ ಜೀವನದಲ್ಲಿಯೂ ಸ್ನೇಹಕ್ಕೆ, ಪ್ರೀತಿಗೆ ತುಂಬಾನೇ ಬೆಲೆ ಕೊಡುವಂಥಾ ವ್ಯಕ್ತಿತ್ವ ಹೊಂದಿರುವವರು. ಅವರನ್ನು ಫ್ಯಾಮಿಲಿ ಸಬ್ಜೆಕ್ಟಿನ ಚಿತ್ರಗಳಲ್ಲಿಯೇ ಕಾಣ ಬಯಸುವ ದೊಡ್ಡ ಪ್ರೇಕ್ಷಕ ವರ್ಗವೇ ಕನ್ನಡದಲ್ಲಿದೆ. ಆಗಾಗ ಆ ವರ್ಗದ ಪ್ರೇಕ್ಷಕರನ್ನು ತಣಿಸುವಂಥಾ ಸಿನಿಮಾಗಳಲ್ಲಿ ದರ್ಶನ್ ನಟಿಸುತ್ತಾರೆ. ಆದರೆ ಒಡೆಯ ಪೂರ್ತಿಯಾಗಿ ಫ್ಯಾಮಿಲಿ ಪ್ಯಾಕೇಜಿನಂಥಾ ಚಿತ್ರ. ತನ್ನನ್ನು ನಂಬಿದವರಿಗಾಗಿ ಏನು ಮಾಡಲೂ ಸಿದ್ಧವಿರುವ ಈ ಒಡೆಯ, ಎದುರಾಳಿಗಳು ಯಾರೇ ಇದ್ದರೂ ಎದೆ ಅದುರಿಸುವಂತೆ ಅಬ್ಬರಿಸಲೂ ಹಿಂದೆ ಮುಂದೆ ನೋಡುವವನಲ್ಲ. ಒಡೆಯ ಗಜೇಂದ್ರನ ಈ ಗುಣವೇ ಸದರಿ ಸಿನಿಮಾವನ್ನು ಪಕ್ಕಾ ಆಕ್ಷನ್ ಚಿತ್ರವಾಗಿಯೂ ಗಮನ ಸೆಳೆಯುವಂತೆ ಮಾಡಿದೆ.

ದರ್ಶನ್ ಅಭಿಮಾನಿಗಳು ಸದಾ ಅವರನ್ನು ಆಕ್ಷನ್ ಪಾತ್ರಗಳಲ್ಲಿಯೇ ನೋಡಲು ಬಯಸುತ್ತಾರೆ. ಅಂಥವರೆಲ್ಲರನ್ನೂ ತಣಿಸುವಂಥಾ ಹೈ ವೋಲ್ಟೇಜ್ ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿವೆ. ಅದರ ಝಲಕ್‌ಗಳು ಈಗಾಗಲೇ ಟ್ರೇಲರ್, ಟೀಸರ್‌ಗಳಲ್ಲಿ ಕಾಣಿಸಿವೆ. ಒಟ್ಟಾರೆಯಾಗಿ ಒಡೆಯನನ್ನು ನಿರ್ದೇಶಕ ಎಂ ಡಿ ಶ್ರೀಧರ್ ಇಲ್ಲಿನ ನೇಟಿವಿಟಿಗೆ ಒಗ್ಗಿಸಿಕೊಂಡು ರೂಪಿಸಿದ್ದಾರೆ. ಈ ಹಿಂದೆ ದರ್ಶನ್ ಅವರ ಫಸ್ಟ್ ಲುಕ್ ಅಭಿಮಾನಿಗಳು ಹುಚ್ಚೇಳುವಂತೆ ಮಾಡಿತ್ತು. ಅದನ್ನೇ ಮೀರಿಸುವಂಥಾ ಚೆಂದದ ಲುಕ್ಕುಗಳಲ್ಲಿ ದರ್ಶನ್ ಇಲ್ಲಿ ಒಡೆಯನಾಗಿ ಕಂಗೊಳಿಸಿದ್ದಾರೆ. ಇದೆಲ್ಲವೂ ಈ ವಾರವೇ ಪ್ರೇಕ್ಷಕರೆಲ್ಲರ ಮುಂದೆ ಅನಾವರಣಗೊಳ್ಳಲಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ನಟ ಕಿಚ್ಚ ಸುದೀಪ್‌ ಅಭಿನಯಕ್ಕೆ ಈಗ ಮತ್ತೊಂದು ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. 2020ನೇ ಸಾಲಿನ "ದಾದಾ ಸಾಹೇಬ್‌ ಫಾಲ್ಕೆ ಇಂಟರ್‌ ನ್ಯಾಷನಲ್‌...

  • ಕನ್ನಡ ಚಿತ್ರರಂಗಕ್ಕೂ ಮುಂಬೈಗೂ ಒಂದು ನಂಟಿದೆ ಎಂದರೆ ತಪ್ಪಲ್ಲ. ಅದಕ್ಕೆ ಕಾರಣ ಮುಂಬೈನಿಂದ ಕನ್ನಡ ಚಿತ್ರಗಳಿಗೆ ನಾಯಕಿಯರಾಗಿ ಸಾಕಷ್ಟು ನಟಿಯರು ಬಂದಿದ್ದಾರೆ....

  • "ಟಾಮ್‌ ಆ್ಯಂಡ್‌ ಜೆರ್ರಿ' ಬಗ್ಗೆ ಬಹುತೇಕರಿಗೆ ಗೊತ್ತೇ ಇದೆ. ಟಿ.ವಿ ಯಲ್ಲಿ ಅತ್ಯಂತ ಜನಪ್ರಿಯವಾಗಿರುವ, ಅದರಲ್ಲೂ ಮಕ್ಕಳಿಗೆ ಅಚ್ಚುಮೆಚ್ಚಿನ ಶೋ ಎಂದೇ ಜನಪ್ರಿಯವಾಗಿರುವ...

  • ಕನ್ನಡದಲ್ಲಿ ಸುಮಾರು 35 ಕ್ಕೂ ಹೆಚ್ಚು ಚಿತ್ರಗಳಲ್ಲಿ ನೆಗೆಟಿವ್‌ ಶೇಡ್‌ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದ ವರ್ಧನ್‌, "ಹಫ್ತಾ' ಮೂಲಕ ನಾಯಕರಾಗಿ ಎಂಟ್ರಿ ಯಾ ಗಿದ್ದರು....

  • ನಟ ದುನಿಯಾ ವಿಜಯ್‌ ಸೋಮವಾರ ತಮ್ಮ ಹುಟ್ಟುಹಬ್ಬವನ್ನು ಕುಟುಂಬ ವರ್ಗ ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡರು. "ಸಲಗ' ಎಂದು ಬರೆದಿದ್ದ ಕೇಕ್‌ ಕತ್ತರಿಸುತ್ತಿದ್ದಂತೆ...

ಹೊಸ ಸೇರ್ಪಡೆ