“ಓಲ್ಡ್‌ ಮಾಂಕ್‌’ ಮುಹೂರ್ತ ಸಂಭ್ರಮ

Team Udayavani, Feb 13, 2020, 7:02 AM IST

“ರಂಗನಾಯಕಿ’ ಚಿತ್ರದ ನಂತರ ನಟ ಶ್ರೀನಿ ಮತ್ತು ಅದಿತಿ ಪ್ರಭುದೇವ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ “ಓಲ್ಡ್‌ ಮಾಂಕ್‌’ ಚಿತ್ರ ಅದ್ಧೂರಿಯಾಗಿ ಮುಹೂರ್ತವನ್ನು ನೆರವೇರಿಸಿಕೊಂಡು ಚಿತ್ರೀಕರಣಕ್ಕೆ ತಯಾರಾಗಿದೆ. ನಟ ಧ್ರುವ ಸರ್ಜಾ “ಓಲ್ಡ್‌ ಮಾಂಕ್‌’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಇದೇ ವೇಳೆ ನಿರ್ಮಾಪಕ ಕೆ.ಪಿ ಶ್ರೀಕಾಂತ್‌, ವಿತರಕ ಕಾರ್ತಿಕ್‌ ಗೌಡ ಸೇರಿದಂತೆ ಚಿತ್ರರಂಗ ಮತ್ತು ವಿವಿಧ ಕ್ಷೇತ್ರಗಳ ಹಲವು ಗಣ್ಯರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇನ್ನು ಪಕ್ಕಾ ಔಟ್‌ ಆ್ಯಂಡ್‌ ಔಟ್‌ ರೊಮ್ಯಾಂಟಿಕ್‌ ಕಾಮಿಡಿ ಕಥಾಹಂದರ ಹೊಂದಿರುವ “ಓಲ್ಡ್‌ ಮಾಂಕ್‌’ ಚಿತ್ರದಲ್ಲಿ ಶ್ರೀನಿ ತೆರೆ ಮುಂದೆ ನಾಯಕನಾಗಿ, ತೆರೆಹಿಂದೆ ನಿರ್ದೇಶಕನಾಗಿ ಎರಡೂ ಜವಾಬ್ದಾರಿಯನ್ನೂ ತಾನೇ ನಿರ್ವಹಿಸುತ್ತಿದ್ದಾರೆ. ಅದಿತಿ ಪ್ರಭುದೇವ ಚಿತ್ರದಲ್ಲಿ ಟ್ರೆಡೀಷನಲ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಉಳಿದಂತೆ ಎಸ್‌. ನಾರಾಯಣ್‌, ಅರುಣಾ ಬಾಲರಾಜ್‌ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಕಲಾವಿದರು ಚಿತ್ರದ ಬೇರೆ ಬೇರೆ ಪಾತ್ರಗಳಿಗೆ ಬಣ್ಣ ಹಚ್ಚುತ್ತಿದ್ದಾರೆ.

“ಸಿದ್ದಿ ಎಂಟರ್‌ಟೈನ್ಮೆಂಟ್ಸ್‌’ ಬ್ಯಾನರ್‌ ಮೂಲಕ ನಿರ್ಮಾಣವಾಗುತ್ತಿರುವ “ಓಲ್ಡ್‌ ಮಾಂಕ್‌’ ಚಿತ್ರದ ಚಿತ್ರೀಕರಣವನ್ನು ಬೆಂಗಳೂರು, ಮೈಸೂರು ಸುತ್ತಮುತ್ತ ನಡೆಸಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಸೌರಭ್‌ ವೈಭವ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಶ್ರೀಶ ಕೂದುವಳ್ಳಿ ಛಾಯಾಗ್ರಹಣ, ದೀಪು ಎಸ್‌ ಕುಮಾರ್‌ ಸಂಕಲನವಿದೆ. ಚಿತ್ರತಂಡದ ಪ್ಲಾನ್‌ ಪ್ರಕಾರ ಎಲ್ಲವೂ ನಡೆದರೆ, ಇದೇ ಜೂನ್‌ ವೇಳೆಗೆ “ಓಲ್ಡ್‌ ಮಾಂಕ್‌’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದರ್ಶನ್‌ ಈಗ "ಗಂಡುಗಲಿ ಮದಕರಿನಾಯಕ' ಸಿನಿಮಾದಲ್ಲಿ ತೊಡಗಿದ್ದಾರೆ. ಅವರ ಅಭಿನಯದ "ಕುರುಕ್ಷೇತ್ರ' ಚಿತ್ರದ ಶತದಿನೋತ್ಸವ ಕೂಡ ಶಿವರಾತ್ರಿ ದಿನ ಅದ್ಧೂರಿಯಾಗಿ ನಡೆದಿದೆ....

  • "ಜೋಗಿ' ಚಿತ್ರದ ನಿರ್ಮಾಪಕ, ಅಶ್ವಿ‌ನಿ ರೆಕಾರ್ಡಿಂಗ್‌ ಕಂಪೆನಿಯ ರೂವಾರಿ ಅಶ್ವಿ‌ನಿ ರಾಮ್‌ ಪ್ರಸಾದ್‌ ಈಗ ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸುವ ಸಿದ್ಧತೆ...

  • ಇತ್ತೀಚೆಗಷ್ಟೇ "ರ್‍ಯಾಂಬೋ-2' ಚಿತ್ರದ "ಚುಟು ಚುಟು ಅಂತೈತಿ...' ಅನ್ನೋ ಉತ್ತರ ಕರ್ನಾಟಕ ಶೈಲಿಯ ಜವಾರಿ ಹಾಡು ಯು-ಟ್ಯೂಬ್‌ನಲ್ಲಿ 100 ಮಿಲಿಯನ್‌ ಹಿಟ್ಸ್ ಪಡೆದುಕೊಂಡು...

  • ಪ್ರತಿವರ್ಷದಂತೆ ಈ ವರ್ಷವೂ ನಟ ಶಿವರಾಜ ಕುಮಾರ್‌ ಅಯ್ಯಪ್ಪ ಸ್ವಾಮಿ ದರ್ಶನ ಕೈಗೊಳ್ಳಲಿದ್ದಾರೆ. ಶನಿವಾರ ಎಂ.ಎಸ್‌ ರಾಮಯ್ಯ ಆಸ್ಪತ್ರೆಯ ಹತ್ತಿರವಿರುವ ಅಯ್ಯಪ್ಪ...

  • ಈ ಬಾರಿ ನಡೆಯಲಿರುವ ಹನ್ನೆರಡನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ನಟ ಯಶ್‌ ಅವರು ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಪ್ರತಿ...

ಹೊಸ ಸೇರ್ಪಡೆ