ಟೀಸರ್ನಲ್ಲಿ ಡಾಲಿ ಜಮಾಲಿಗುಡ್ಡ ಸದ್ದು
Team Udayavani, Dec 6, 2022, 1:56 PM IST
ಇತ್ತೀಚೆಗಷ್ಟೇ “ಹೆಡ್ ಬುಷ್’ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದ ನಟ ಡಾಲಿ ಧನಂಜಯ್, ಈ ವರ್ಷಾಂತ್ಯಕ್ಕೆ “ಒನ್ಸ್ ಅಪಾನ್ ಏ ಟೈಮ್ ಇನ್ ಜಮಾಲಿಗುಡ್ಡ’ದ ಮೂಲಕ ಮತ್ತೂಮ್ಮೆ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಹೌದು, ಧನಂಜಯ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ “ಒನ್ಸ್ ಅಪಾನ್ ಏ ಟೈಮ್ ಇನ್ ಜಮಾಲಿಗುಡ್ಡ’ ಸಿನಿಮಾದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಂದಹಾಗೆ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ತಯಾರಾಗಿರುವ “ಒನ್ಸ್ ಅಪಾನ್ ಏ ಟೈಮ್ ಇನ್ ಜಮಾಲಿಗುಡ್ಡ’ ಇದೇ ಡಿಸೆಂಬರ್ 30ಕ್ಕೆ ತೆರೆಗೆ ಬರುತ್ತಿದೆ.
ಸದ್ಯ “ಜಮಾಲಿಗುಡ್ಡ’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗಷ್ಟೇ ಸಿನಿಮಾದ ಹಾಡು ಮತ್ತು ಟೀಸರ್ ಬಿಡುಗಡೆಗೊಳಿಸಿದೆ. “ಜಮಾಲಿಗುಡ್ಡ’ ಸಿನಿಮಾದ ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದು, ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ನಿಧಾನವಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. “ಜಮಾಲಿಗುಡ್ಡ’ ಟೀಸರ್ಗೂ ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಇತ್ತೀಚಿನ ವರ್ಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಆ್ಯಕ್ಷನ್ ಮತ್ತು ರೊಮ್ಯಾಂಟಿಕ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಡಾಲಿ ಧನಂಜಯ್, “ಜಮಾಲಿಗುಡ್ಡ’ ಸಿನಿಮಾದಲ್ಲಿ ಸಂಪೂರ್ಣ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈಗಾಗಲೇ ಸಿನಿಮಾದ ಪೋಸ್ಟರ್, ಹಾಡುಗಳು ಮತ್ತು ಟೀಸರ್ನಲ್ಲಿ ಧನಂಜಯ್ ಡಿಫರೆಂಟ್ ಲುಕ್ ರಿವೀಲ್ ಆಗಿದ್ದು ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಇನ್ನು ಧನಂಜಯ್ ಕೂಡ ತಮ್ಮ ಹೊಸಥರದ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ. “ಜಮಾಲಿಗುಡ್ಡ’ ಸಿನಿಮಾದಲ್ಲಿ ಧನಂಜಯ್ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಜೋಡಿಯಾಗಿದ್ದಾರೆ.
ಉಳಿದಂತೆ ಯಶ್ ಶೆಟ್ಟಿ, ಭಾವನಾ, ಬೇಬಿ ಪ್ರಾಣ್ಯರಾವ್, ಪ್ರಕಾಶ್ ಬೆಳವಾಡಿ, ನಂದ ಗೋಪಾಲ್ ಹೀಗೆ ದೊಡ್ಡ ಕಲಾವಿದರ ತಾರಾಗಣವೇ ಚಿತ್ರದಲ್ಲಿದೆ. “ನಿಹಾರಿಕ ಮೂವೀಸ್’ ಬ್ಯಾನರ್ನಲ್ಲಿ ಶ್ರೀಹರಿ ರೆಡ್ಡಿ ನಿರ್ಮಿಸುತ್ತಿರುವ “ಜಮಾಲಿಗುಡ್ಡ’ ಸಿನಿಮಾಕ್ಕೆ ಕುಶಾಲ್ ಗೌಡ ನಿರ್ದೇಶನವಿದೆ.
ಸದ್ಯ ಹಾಡುಗಳು ಮತ್ತು ಟೀಸರ್ ಮೂಲಕ ಸೌಂಡ್ ಮಾಡುತ್ತಿರುವ “ಜಮಾಲಿ ಗುಡ್ಡ’ ಥಿಯೇಟರ್ನಲ್ಲಿ ಹೇಗೆ ಕಮಾಲ್ ಮಾಡಲಿದೆ ಎಂಬುದು ಇದೇ ಡಿ. 30ಕ್ಕೆ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ