ಲಂಡನ್ ಕೆಫೆಯಲ್ಲಿ ಮೇಘಾ ಶೆಟ್ಟಿ
Team Udayavani, Dec 7, 2022, 2:52 PM IST
ಇತ್ತೀಚೆಗಷ್ಟೇ “ತ್ರಿಬಲ್ ರೈಡಿಂಗ್’ ಸಿನಿಮಾದಲ್ಲಿ ಪ್ರೇಕ್ಷಕರ ಮುಂದೆ ಬಂದಿದ್ದ ನಟಿ ಮೇಘಾ ಶೆಟ್ಟಿ ಈಗ ಆಪರೇಷನ್ ಲಂಡನ್ ಕೆಫೆ’ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಹೌದು, ಮೇಘಾ ಶೆಟ್ಟಿ ಸದ್ಯ “ಆಪರೇಷನ್ ಲಂಡನ್ ಕೆಫೆ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈಗಾಗಲೇ ಸದ್ದಿಲ್ಲದೆ ಈ ಸಿನಿಮಾದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಈಗ ಅಂತಿಮ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗುತ್ತಿದೆ.
ಇನ್ನು “ಆಪರೇಷನ್ ಲಂಡನ್ ಕೆಫೆ’ ಸಿನಿಮಾದಲ್ಲಿ ಮೇಘಾ ಶೆಟ್ಟಿ ಬಜಾರಿ ಹಳ್ಳಿ ಹುಡುಗಿಯ ಪಾತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕವೀಶ್ ಶೆಟ್ಟಿ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಮರಾಠಿಯ ಶಿವಾನಿ ಸುರ್ವೆ, ವಿರಾಟ್ ಮಡಕೆ ಮುಂತಾದ ಕಲಾವಿದರು ಈ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಈ ಸಿನಿಮಾ ಕನ್ನಡದ ಜೊತೆಗೆ ಮರಾಠಿ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿದ್ದು, ಸಡಗರ ರಾಘವೇಂದ್ರ ಈ ಸಿನಿಮಾಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಉಡುಪಿ, ಚಿಕ್ಕಮಗಳೂರು, ಭಟ್ಕಳ, ಕಳಸ ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.
“ಇಂಡಿಯನ್ ಫಿಲಂ ಫ್ಯಾಕ್ಟರಿ’ ಮತ್ತು “ದೀಪಕ್ ರಾಣೆ ಫಿಲಂಸ್’ ಲಾಂಛನದಲ್ಲಿ ವಿಜಯ್ ಕುಮಾರ್ ಶೆಟ್ಟಿ, ಹವರಾಲ್ ದೀಪಕ್ ರಾಣೆ, ರಮೇಶ್ ಕೊಠಾರಿ ಮತ್ತು ವಿಜಯ್ ಪ್ರಕಾಶ್ “ಆಪರೇಷನ್ ಲಂಡನ್ ಕೆಫೆ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಮಣಿಪಾಲ: ಅಪಾರ್ಟ್ ಮೆಂಟ್ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು
ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?
ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ
ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ
ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ