ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌


Team Udayavani, Nov 30, 2021, 3:32 PM IST

oreo kannada movie

“ಓರಿಯೋ’ ಎಂಬ ಹೆಸರಿನ ಜನಪ್ರಿಯ ಬ್ರ್ಯಾಂಡ್‌ನ‌ ಬಿಸ್ಕೆಟ್‌ ಹೆಸರನ್ನು ನೀವು ಕೇಳಿರುತ್ತೀರಿ. ಈಗ ಇದೇ “ಓರಿಯೋ’ ಎಂಬ ಹೆಸರಿನಲ್ಲಿ ಸಿನಿಮಾವೊಂದು ತೆರೆಗೆ ಬರಲು ಸಿದ್ಧವಾಗುತ್ತಿದೆ. ಅಂದಹಾಗೆ, ಈ ಸಿನಿಮಾದ ಹೆಸರು “ಓರಿಯೋ’ ಅಂತಿದ್ದರೂ, ಈ ಸಿನಿಮಾಕ್ಕೂ “ಓರಿಯೋ’ ಬಿಸ್ಕೆಟ್‌ಗೂ ಯಾವುದೇ ಸಂಬಂಧವಿಲ್ಲ. ಸಿನಿಮಾದ ಸಬ್ಜೆಕ್ಟ್ ಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಚಿತ್ರತಂಡ, ತಮ್ಮ ಚಿತ್ರಕ್ಕೆ ಇಂಥದ್ದೊಂದು ಟೈಟಲ್‌ ಇಟ್ಟಿದೆಯಂತೆ!

ಕಂಠೀರವ ಸ್ಟುಡಿಯೋದಲ್ಲಿ ನಡೆದ “ಓರಿಯೋ’ ಚಿತ್ರದ ಮುಹೂರ್ತ ಸಮಾರಂಭದಲ್ಲಿ ದಿವಂಗತ ನಟ ಪುನೀತ್‌ ರಾಜಕುಮಾರ್‌ ಅವರ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಚಿತ್ರತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿತು.

ಇನ್ನು “ಓರಿಯೋ’ ಚಿತ್ರದ ಟೈಟಲ್‌ಗೆ “ದಿ ಬ್ಲ್ಯಾಕ್‌ ಅಂಡ್‌ ವೈಟ್‌’ ಎಂಬ ಟ್ಯಾಗ್‌ಲೈನ್‌ ಇದ್ದು, ಲವ್‌, ಆ್ಯಕ್ಷನ್‌, ಹಾರರ್‌ ಮತ್ತು ಸಸ್ಪೆನ್ಸ್‌ ಕಥೆಯನ್ನು ಚಿತ್ರದಲ್ಲಿ ಹೇಳಲಾಗುತ್ತಿದೆಯಂತೆ. ಈ ಹಿಂದೆ “ಪ್ರೀತಿಯ ಲೋಕ’ ಮತ್ತು “ಲವ್‌ ಇಸ್‌ ಪಾಯಿಸಸ್‌’ ಚಿತ್ರಗಳನ್ನು ನಿರ್ದೇಶಿಸಿದ್ದ ನಂದನ ಪ್ರಭು, “ಓರಿಯೋ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ನವ ಪ್ರತಿಭೆ ನಿತಿನ್‌ ಗೌಡ “ಓರಿಯೋ’ ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ. ಉಳಿದಂತೆ ಸುಚಿತ್‌, ಶುಭಿ, ಲತಾ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ:ಪಣಜಿ: ಸಾಮ್ರಾಟ್ ಸ್ಟೂಡೆಂಟ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ ಉತ್ತರ ಕನ್ನಡದ ವಿದ್ಯಾರ್ಥಿನಿ

ಮುಹೂರ್ತದ ಬಳಿಕ ಚಿತ್ರದ ಕಥಾಹಂದರದ ಬಗ್ಗೆ ಮಾತನಾಡಿದ ನಿರ್ದೇಶಕ ನಂದನ ಪ್ರಭು, “ಐದು ಪ್ರಮುಖ ಪಾತ್ರಗಳ ಸುತ್ತ ಇಡೀ ಸಿನಿಮಾದ ಕಥೆ ನಡೆಯುತ್ತದೆ. ಸುಮಾರು ಐದಾರು ವರ್ಷಗಳ ಕಾಲ ಕಥೆಯ ಮೇಲೆ ವರ್ಕ್‌ ಮಾಡಿ ಈ ಸಿನಿಮಾ ಮಾಡುತ್ತಿದ್ದೇವೆ. “ಓರಿಯೋ’ ಪದಕ್ಕೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥವಿದೆ. ನಮ್ಮ ಸಿನಿಮಾದಲ್ಲೂ ಅದಕ್ಕೆ ಬೇರೆಯದೇ ಒಂದು ವಿಶೇಷ ಅರ್ಥವಿದೆ. ಅಷ್ಟೇ ಅಲ್ಲದೇ, ಇಡೀ ವಿಶ್ವಕ್ಕೆ ಅನ್ವಯವಾಗುವಂಥ ಒಂದು ಮೆಸೇಜ್‌ ಕೂಡ ಸಿನಿಮಾದಲ್ಲಿದೆ. ಅದನ್ನು ಸಿನಿಮಾದಲ್ಲೇ ನೋಡಬೇಕು’ ಎಂದರು.

ಟ್ಯಾಕ್ಸಿ ಡ್ರೈವರ್‌ ಆಗಿರುವ ಮೂವರು ಹುಡುಗರು ನಿಗೂಢ ಕಾಡೊಂದಕ್ಕೆ ಹೋದಾಗ ಅಲ್ಲಿ ನಡೆಯುವ ನಿಗೂಢ ಘಟನೆಗಳ ಸುತ್ತ ಇಡೀ ಸಿನಿಮಾ ನಡೆಯುತ್ತದೆ. ನಾಲ್ಕು ಭಾಷೆಗಳಲ್ಲಿ ಸಿನಿಮಾ ಬರುತ್ತಿದೆ ಎಂದು ಮಾಹಿತಿ ನೀಡಿತು ಚಿತ್ರತಂಡ. ಚಿತ್ರದ ಕಲಾವಿದರಾದ ನಿತಿನ್‌ ಗೌಡ, ಸುಚಿತ್‌, ಶುಭಿ, ಲತಾ ಚಿತ್ರದಲ್ಲಿ ತಮ್ಮ ಪಾತ್ರ ಮತ್ತು ಮಾಡಿಕೊಂಡಿರುವ ತಯಾರಿಗಳ ಬಗ್ಗೆ ಮಾತನಾಡಿದರು. “ಶಿವಾಂಜನೇಯ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ವಿಜಯಶ್ರೀ ಆರ್‌. ಎಂ, ವೈಶಾಲಿ ವೈ. ಜೆ, ಕೃಷ್ಣಪ್ಪ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಸಾಯಿಕಿರಣ್‌ ಸಂಗೀತ ಸಂಯೋಜಿಸುತ್ತಿದ್ದಾರೆ.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.