ಕಾರ್ಕಿ ತಂಡದಲ್ಲಿ ಪಾವನಾ

ಬೋಲ್ಡ್‌ ಹುಡುಗಿ ಪಾತ್ರ

Team Udayavani, Apr 30, 2019, 3:00 AM IST

Karky

“ಬೊಂಬೆಗಳ ಲವ್‌’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಸಿನಿಪ್ರಿಯರ ಗಮನ ಸೆಳೆದಿದ್ದ ನವನಟಿ ಪಾವನಾ, ನಿಧಾನವಾಗಿ ಚಿತ್ರರಂಗದಲ್ಲಿ ಒಂದರ ಹಿಂದೊಂದು ಚಿತ್ರದಲ್ಲಿ ಬ್ಯುಸಿಯಾಗುತ್ತಿದ್ದಾರೆ.

“ಬೊಂಬೆಗಳ ಲವ್‌’ ಚಿತ್ರದ ನಂತರ, “ಮೈಸೂರು ಡೈರೀಸ್‌’, “ರುದ್ರಿ’, “ಪ್ರಭುತ್ವ’ ಹೀಗೆ ಕೆಲವು ಚಿತ್ರಗಳಲ್ಲಿ ಬಣ್ಣ ಹಚ್ಚಿರುವ ಪಾವನಾ, ಸದ್ಯ ರೋಜರ್‌ ನಾರಾಯಣ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ “ಕಾರ್ಕಿ’ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಅಂದಹಾಗೆ, “ಕಾರ್ಕಿ’ ಚಿತ್ರದಲ್ಲಿ ಒಟ್ಟು ಮೂವರು ನಾಯಕಿಯರಿದ್ದು, ಅದರಲ್ಲಿ ಒಂದು ಪಾತ್ರವನ್ನು ಪಾವನಾ ನಿರ್ವಹಿಸುತ್ತಿದ್ದಾರೆ. ಚಿತ್ರರಂಗದಲ್ಲಿ ತಮಗೆ ಸಿಗುತ್ತಿರುವ ಅವಕಾಶಗಳ ಬಗ್ಗೆ ಮಾತನಾಡುವ ಪಾವನಾ, “ಬೊಂಬೆಗಳ ಲವ್‌’ ಚಿತ್ರದ ಬಳಿಕ ಸಾಕಷ್ಟು ಉತ್ತಮ ಅವಕಾಶಗಳು ಚಿತ್ರರಂಗದಿಂದ ಬರುತ್ತಿವೆ.

ಅದರಲ್ಲಿ ನನಗೆ ಇಷ್ಟವಾದಂತ, ನಾನು ಮಾಡಬಲ್ಲೆ ಎಂಬ ಪಾತ್ರಗಳನ್ನು ಮಾತ್ರ ಒಪ್ಪಿಕೊಳ್ಳುತ್ತಿದ್ದೇನೆ. ಸದ್ಯ ಈಗಾಗಲೇ ಮೂರ್‍ನಾಕ್ಕು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದು, ಆ ಎಲ್ಲಾ ಚಿತ್ರಗಳು ಬಿಡುಗಡೆಯ ಹಂತದಲ್ಲಿವೆ.

ಈ ವರ್ಷದ ಕೊನೆಗೆ ನಾನು ಅಭಿನಯಿಸಿರುವ ಕೆಲವು ಚಿತ್ರಗಳು ಬಿಡುಗಡೆಯಾಗಲಿವೆ’ ಎನ್ನುತ್ತಾರೆ.  ಇನ್ನು “ಕಾರ್ಕಿ’ ಚಿತ್ರದಲ್ಲಿ ಪಾವನಾ, ಪೂರ್ವಿ ಎನ್ನುವ ಹೆಸರಿನ ಬೋಲ್ಡ್‌ ಗರ್ಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

“ಕಾರ್ಕಿ’ ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ಮೂವರ ಪಾತ್ರಗಳಿಗೂ ಅದರದ್ದೇಯಾದ ಪ್ರಾಮುಖ್ಯತೆ ಇದೆ. ಹಾಗಾಗಿ ಈ ಪಾತ್ರವನ್ನು ಒಪ್ಪಿಕೊಂಡೆ. ಬೋಲ್ಡ್‌ ಗರ್ಲ್ ಅಂದ ಕೂಡಲೇ ನಾನು ತೊಡುವ ಬಟ್ಟೆಯಲ್ಲಿ ಅಂತಲ್ಲ.

ಸ್ವಭಾವದಲ್ಲಿ ಬೋಲ್ಡ್‌ ಎನ್ನಬಹುದು. ತುಂಬಾ ಪ್ರಾಕ್ಟಿಕಲ್‌ ಆಗಿ ಯೋಚಿಸುವ ಹುಡುಗಿ ಏನೇನು ಮಾಡುತ್ತಾಳೆ ಅನ್ನೋದು ನನ್ನ ಪಾತ್ರ’ ಎಂದು ಪಾತ್ರದ ಬಗ್ಗೆ ವಿವರಣೆ ಕೊಡುತ್ತಾರೆ.

ಸದ್ಯ ಕನ್ನಡದ ಭರವಸೆಯ ನಾಯಕ ನಟಿಯರ ಸಾಲಿನಲ್ಲಿ ಗುರುತಿಸಿಕೊಳ್ಳುತ್ತಿರುವ ಪಾವನಾಗೆ “ಕಾರ್ಕಿ’ ಚಿತ್ರದ, ಹೊಸ ಪಾತ್ರ ಸಿನಿಕೆರಿಯರ್‌ನಲ್ಲಿ ಎಷ್ಟರ ಮಟ್ಟಿಗೆ ಮೈಲೇಜ್‌ ತಂದುಕೊಡುತ್ತದೆ ಎಂಬುದು ಚಿತ್ರ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.