“ಪೈಲ್ವಾನ್‌’ ಲುಕ್: ಪತಿ-ಪತ್ನಿ ಪ್ರೋತ್ಸಾಹದ ಮಾತು

Team Udayavani, Nov 18, 2018, 4:02 PM IST

sudeep-priya.jpg

ಆರಡಿ ಕಟೌಟ್ ಕಿಚ್ಚ ಸುದೀಪ್‌ ಅಭಿನಯದ ಬಹು ನಿರೀಕ್ಷಿತ “ಪೈಲ್ವಾನ್‌’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್ ನಲ್ಲಿ ಸುದೀಪ್ ಲುಕ್ ಕಂಡು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇತ್ತ ಸುದೀಪ್ ಪತ್ನಿ ಪ್ರಿಯಾ ರಾಧಾಕೃಷ್ಣ ಅವರು ಕೂಡ ಕಿಚ್ಚನ ಲುಕ್‍ಗೆ ಬೆರಗಾಗಿದ್ದಾರೆ. ಹೌದು! ಸುದೀಪ್ “ಪೈಲ್ವಾನ್’ ಚಿತ್ರಕ್ಕಾಗಿ ದೇಹದಂಡಿಸಿದ್ದು, ಸುದೀಪ್ ಕಟ್ಟುಮಸ್ತಾದ ದೇಹಕ್ಕೆ ಪತ್ನಿ ಪ್ರಿಯಾ ಕೂಡ ಫಿದಾ ಆಗಿದ್ದಾರೆ.

ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಿಯಾ ಅವರು, ಸುದೀಪ್ ಅವರನ್ನು “ಈ ಲುಕ್‍ನಲ್ಲಿ ನೋಡುತ್ತೆನೆಂದು ನಾನು ಊಹೆ ಕೂಡ ಮಾಡಿಕೊಂಡಿರಲಿಲ್ಲ. ಅವರ ಶ್ರದ್ಧೆ, ಆತ್ಮಸ್ಥೈರ್ಯ, ಅವರಲ್ಲಿರುವ ಶಕ್ತಿ ಇಂದು ಪೈಲ್ವಾನ್‍ ನಲ್ಲಿ ನಾವು ಕಾಣುತ್ತಿದ್ದೇವೆ. ಪೈಲ್ವಾನ್ ಅವರ ಪರಿಶ್ರಮದ ಫಲ’ ಎಂದು ಪ್ರಿಯಾ ಟ್ವೀಟ್ ಮಾಡಿದ್ದಾರೆ. ಇನ್ನು ಪ್ರಿಯಾ ಅವರ ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ಸುದೀಪ್, “ನಿನ್ನ ಪರಿಶ್ರಮ ಮತ್ತು ಶ್ರದ್ಧೆಯ ಮುಂದೆ ಇವೆಲ್ಲಾ ಏನೂ ಇಲ್ಲ. ನನ್ನನ್ನು ಉತ್ತೇಜಿಸಿದ್ದಕ್ಕಾಗಿ ಧನ್ಯವಾದಗಳು’ ಎಂದು ಟ್ವೀಟ್ ಮಾಡಿದ್ದಾರೆ.

ಅಂದಹಾಗೆ “ಪೈಲ್ವಾನ್’ ಚಿತ್ರತಂಡ ಸುದೀಪ ಅವರಿಗೆ “ಬಾದ್‍ಷಾ’ ಎಂಬ ಹೊಸ ಬಿರುದನ್ನು ನೀಡಿದೆ. 30 ರಿಂದ 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಆರ್‌.ಆರ್‌.ಆರ್‌. ಮೋಷನ್‌ ಪಿಕ್ಚರ್ ಬ್ಯಾನರ್‌ನಡಿ ಸ್ವಪ್ನ ಕೃಷ್ಣ ಮತ್ತು ಕೃಷ್ಣ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನಿರ್ದೇಶನದ ಜೊತೆಗೆ ಕಥೆ ಹಾಗೂ ಚಿತ್ರಕಥೆಯನ್ನು ಕೃಷ್ಣ ರಚಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನಿರ್ದೇಶನ ಮಾಡಿದರೆ, ಕರುಣಾಕರನ್‌ ಅವರು ಛಾಯಾಗ್ರಹಣ ಮಾಡಿದ್ದಾರೆ. ಚಿತ್ರವು ಕನ್ನಡ ಸೇರಿದಂತೆ 7 ಭಾಷೆಗಳಲ್ಲಿ ತೆರೆ ಕಾಣಲಿದೆಯಂತೆ.

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.