
ಲಿರಿಕಲ್ ವಿಡಿಯೋನಲ್ಲಿ ‘ಪರಂವ’
Team Udayavani, May 29, 2023, 2:06 PM IST

ತಂದೆ – ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ ಪರಂವಃ. ಇತ್ತೀಚೆಗೆ ಈ ಚಿತ್ರದ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದ್ದು, ನಟ ಧನಂಜಯ್ ಹಾಡು ಬಿಡುಗಡೆ ಮಾಡಿ ಶುಭಕೋರಿದ್ದಾರೆ.
ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ “ಭೂರಮೆಲಿ ಮತ್ಯಾರು..’ ಎಂಬ ತಂದೆ – ಮಗನ ಭಾವನಾತ್ಮಕ ಪಯಣಕ್ಕೆ ಮುನ್ನುಡಿಯಾಗಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಅಪರಾಜಿತ್ ಹಾಗೂ ಜೋಸ್ ಜೋಸ್ಸೆ ಸಂಗೀತ ನೀಡಿದ್ದಾರೆ. ರಾಜೇಶ್ ಕೃಷ್ಣನ್ ಹಾಡಿದ್ದಾರೆ.
ಚಿತ್ರದ ನಾಯಕ ವೀರಗಾಸೆ ಕಲಾವಿದ. ಅವರ ಕುಟಂಬವೇ ವೀರಗಾಸೆ ಕುಟುಂಬ. ನಾಯಕನಿಗೆ ತಂದೆಯಂದರೆ ಪ್ರಾಣ. ತಂದೆಗೆ ಮಗನೇ ಜೀವ. ಇಂತಹ ವಿಭಿನ್ನ ಕಥಾಹಂದರ ಹೊಂದಿರುವ ಪರಂವಃ ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಮುಕ್ತಾಯವಾಗಿದೆ. ಜುಲೈನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ಸಂತೋಷ್ ಕೈದಾಳ ತಿಳಿಸಿದ್ದಾರೆ.
ಇದನ್ನೂ ಓದಿ:ಡಿವೈಡರ್’ಗೆ ಹೊಡದು ಗೂಡ್ಸ್ ಗಾಡಿಗೆ ಢಿಕ್ಕಿಯಾದ ಕಾರು: 7 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು!
ಪೀಪಲ್ ವಲ್ಡ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಎ.ಎಸ್ ಶೆಟ್ಟಿ ಛಾಯಾಗ್ರಹಣ, ಅಪರಾಜಿತ್ – ಜೋಸ್ ಜೋಸ್ಸೆ ಸಂಗೀತ ನಿರ್ದೇಶನ, ಪೂರ್ಣಚಂದ್ರ ತೇಜಸ್ವಿ ಹಿನ್ನೆಲೆ ಸಂಗೀತ ಹಾಗೂ ವೆಂಕಿ ಯು ಡಿ ವಿ – ವಿಕಾಸ್ ಚಂದ್ರ ಅವರ ಸಂಕಲನ ಈ ಚಿತ್ರಕ್ಕಿದೆ.
ಪ್ರೇಮ್ ಸಿಡ್ಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು, ನಾಜರ್, ಶೃತಿ, ಮುಕುಂದ್, ಅವಿನಾಶ್, ಶಬರೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ