Kannada Cinema; ಓಟಿಟಿಯಲ್ಲಿ ಬಿಡುಗಡೆಯಾಯ್ತು ಪಾವನಾ ಅಭಿನಯದ ‘ರುದ್ರಿ’
Team Udayavani, Nov 13, 2023, 12:40 PM IST
ಸದಾ ಒಂದರ ಹಿಂದೊಂದು ಕಮರ್ಷಿಯಲ್ ಸಿನಿಮಾಗಳು, ಸ್ಟಾರ್ ನಟರ ಜೊತೆ ಅಭಿನಯಿಸುವ ಅವಕಾಶಗಳು ಸಿಕ್ಕರೆ ಮಾತ್ರ ಹೀರೋಯಿನ್ಗಳು ಹೆಚ್ಚು ಕಾಲ ಚಿತ್ರರಂಗದಲ್ಲಿರಲು ಸಾಧ್ಯ ಅನ್ನೋದು ಚಿತ್ರರಂಗದಲ್ಲಿರುವ ಕೆಲವರ ಮಾತು. ಆದರೆ ಈ ಮಾತಿಗೆ ವಿರುದ್ಧ ಎನ್ನುವಂತೆ, ಕೆಲವು ನಟಿಯರು ತಮ್ಮ ವಿಭಿನ್ನ ಸಿನಿಮಾಗಳು, ಅಪರೂಪದ ಪಾತ್ರಗಳ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ತಮ್ಮದೇಯಾದ ಛಾಪು ಮೂಡಿಸಲು ಯಶಸ್ವಿಯಾಗಿರುತ್ತಾರೆ. ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೆರೆದುಕೊಂಡು, ಚಿತ್ರರಂಗದಲ್ಲಿ ಸಕ್ರಿಯವಾಗಿರುತ್ತಾರೆ. ಅಂತಹ ನಟಿಯರ ಪೈಕಿ ಪಾವನಾ ಗೌಡ ಕೂಡ ಒಬ್ಬರು. ಸದ್ಯ ಪಾವನಾ ನಟಿಸಿರುವ ಚಿತ್ರವೊಂದು ಓಟಿಟಿಯಲ್ಲಿ ಬಿಡುಗಡೆಯಾಗಿದೆ. ಅದು “ರುದ್ರಿ’.
ನಮ್ಮ ಫ್ಲಿಕ್ಸ್ ಓಟಿಟಿಯಲ್ಲಿ ಚಿತ್ರ ತೆರೆಕಂಡಿದೆ.ಬಡಿಗೇರ ದೇವೇಂದ್ರ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದೆ. ಈಗಾಗಲೇ ಠಾಗೋರ್ ಅಂತಾರಾಷ್ಟ್ರೀಯ ಚಿತ್ರೋತ್ಸವ ಸೇರಿದಂತೆ ದೇಶ ವಿದೇಶಗಳ ಚಿತ್ರೋತ್ಸವದಲ್ಲಿ ರುದ್ರಿ ಭಾಗಿಯಾಗಿದೆ. ಅಲ್ಲಿ ಪ್ರದರ್ಶನ ಕಂಡಿದೆ.
ಹಲವಾರು ಪ್ರಶಸ್ತಿಗಳನ್ನೂ ಬಾಚಿಕೊಂಡಿದೆ. ರುದ್ರಿ ಸಿನಿಮಾ 90ರ ದಶಕದ ಕಥೆ. ಆ ಕಾಲದಲ್ಲಿ ಇನ್ನೂ ಮಹಿಳೆಯರಿಗೆ ತಮ್ಮ ಮೇಲಿನ ದೌರ್ಜನ್ಯವನ್ನು ಹೇಳಿಕೊಳ್ಳುವಂತಹ ಧೈರ್ಯವಿರಲಿಲ್ಲ. ಅಂತಹ ಮಹಿಳೆಯೊಬ್ಬರ ಶೋಷಣೆಯ ಕಥೆಯನ್ನು ರುದ್ರಿ ಮೂಲಕ ಹೇಳಲು ಹೊರಟಿದ್ದಾರೆ ನಿರ್ದೇಶಕರು.
ಸಿ.ಆರ್.ಮಂಜುನಾಥ್ ಅವರ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಸಾಧುಕೋಕಿಲಾ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಅನನ್ಯ ಭಟ್ ಅವರು ಹಾಡಿಗೆ ಧ್ವನಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ