PEPE; ಜೇನು ಕುರುಬ ಹಾಡಲ್ಲಿ ಪೆಪೆ; ರಗಡ್ ಲುಕ್ನಲ್ಲಿ ವಿನಯ್ ಮಿಂಚು
Team Udayavani, Aug 11, 2024, 4:30 PM IST
ವಿನಯ್ ರಾಜ್ ಕುಮಾರ್ ನಟಿಸಿರುವ ಪೆಪೆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಟೈಟಲ್ ಹಾಗೂ ಟೀಸರ್ ಮೂಲಕ ಗಮನ ಸೆಳೆದಿರುವ ಈ ಚಿತ್ರ ಈಗ ಸೆನ್ಸಾರ್ ಪಾಸಾಗಿದ್ದು, ಸೆನ್ಸಾರ್ನಿಂದ ಎ ಪ್ರಮಾಣ ಪತ್ರ ಪಡೆದಿದೆ.
ಈಗ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜೇನು ಕುರುಬ ಬುಡಗಟ್ಟು ಜನಾಂಗದ ಆಚಾರ ವಿಚಾರ ತೆರೆದಿಡುವ ಗೀತೆಗೆ ಗಿರಿಜನ ಸಮಗ್ರ ಅಭಿವೃದ್ದಿ ಕಲಾ ಸಂಸ್ಥೆ ಹಾಗೂ ಜೆ.ಜಿ.ಕುಮಾರ ಧ್ವನಿಯಾಗಿದ್ದು, ಪೂರ್ಣಚಂದ್ರ ತೇಜಸ್ವಿ ಟ್ಯೂನ್ ಹಾಕಿದ್ದಾರೆ. ಇನ್ನೂ ಚಿತ್ರತಂಡ ಖುದ್ದು ಹೇಳಿಕೊಂಡಂತೆ ಇಡೀ ಚಿತ್ರದ ಸೌಂಡ್ ಡಿಸೈನ್ ಬೇರೆ ರೀತಿ ಇದೆ.
ಕ್ಲಾಸ್ ಸಿನಿಮಾಗಳ ಮೂಲಕ ಕನ್ನಡ ಸಿನಿಪ್ರೇಮಿಗಳನ್ನು ರಂಜಿಸಿದ್ದ ವಿನಯ್ ರಾಜ್ ಕುಮಾರ್ ಪೆಪೆಗಾಗಿ ಮಾಸ್ ಅವತಾರ ತಾಳಿದ್ದಾರೆ. ಯುವ ನಿರ್ದೇಶಕ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದಲ್ಲಿ ವಿನಯ್ ರಗಡ್ ಲುಕ್ ಅಬ್ಬರಿಸಿದ್ದಾರೆ. ಹಳ್ಳಿ ಬ್ಯಾಕ್ಡ್ರಾಪ್ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿಲ್ಲ.
ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್ ನಟಿಸಿದ್ದಾರೆ. “ಪೆಪೆ’ ಚಿತ್ರಕ್ಕೆ ಅಭಿಷೇಕ್ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ. ಡಾ.ರವಿವರ್ಮ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ.
ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ “ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್ ಸಿನಿ ವೆಂಚರ್, ದೀಪ ಫಿಲಂಸ್ ಬ್ಯಾನರ್ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.