ಕಾಣೆ ಸುದ್ದಿಗೆ ಪೂಜಾ ಗರಂ


Team Udayavani, Aug 21, 2017, 10:27 AM IST

pooja-gandhi.jpg

ನಟಿ ಪೂಜಾಗಾಂಧಿ ಕಾಣೆಯಾಗಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಆದರೆ, ಪೂಜಾಗಾಂಧಿ ನಿಜಕ್ಕೂ ಕಾಣೆಯಾಗಿದ್ದರಾ? ಈ ಪ್ರಶ್ನೆಗೆ ಸ್ವತಃ ಪೂಜಾಗಾಂಧಿ ಅವರೇ ಉತ್ತರವಾಗಿದ್ದಾರೆ. ಅವರೇ ಹೇಳುವಂತೆ, “ನಾನು ಎಲ್ಲೂ ಹೋಗಿಲ್ಲ. ಪೂನಾಗೆ ಹೋಗಿದ್ದೆ. ಪೂನಾದಿಂದ ಸುಮಾರು ಹತ್ತು ಕಿಲೋಮೀಟರ್‌ ದೂರ ಇರುವಂತಹ ಆನಂದ ಪ್ರಿಯ ರೀಟ್ರೀಸ್‌ ಎಂಬ ಸ್ಥಳದಲ್ಲಿ ಯೋಗ ಶಿಕ್ಷಣಕ್ಕೆ ಹೋಗಿದ್ದೆ.

ಅಲ್ಲಿ ನಮ್ಮ ಗುರೂಜೀ ಪರಮಹಂಸ ಯೋಗಾನಂದ ಇದ್ದಾರೆ. ನಾನು ಆಗಾಗ ಅಲ್ಲಿಗೆ ಹೋಗುತ್ತಿರುತ್ತೇನೆ. ಇತ್ತೀಚೆಗೂ ನಾನು ಅಲ್ಲಿಗೆ ಹೋಗಿದ್ದೆ. ಆದರೆ, ಯಾರೋ, ನಾನು ಕಾಣೆಯಾಗಿದ್ದೇನೆ ಅಂತೆಲ್ಲಾ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಅದನ್ನು ಕೇಳಿ ನನಗೆ ನಗು ಬಂತು. ಯಾಕೆಂದರೆ, ಕೇವಲ ಎರಡು ಮೂರು ಗಂಟೆ ನನ್ನ ಫೋನ್‌ ಕಾಲ್‌ ಸಿಗಲಿಲ್ಲ ಅಂದಾಕ್ಷಣ, ಹೀಗೆಲ್ಲ ಸುದ್ದಿ ಹರಡಿದರೆ ಹೇಗೆ? ನನ್ನ ಫೋನ್‌ ಅಲ್ಲಿ ನಾಟ್‌ ರೀಚಬಲ್‌ ಆಗಿತ್ತು.

ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ಯಾರಿಗೂ ನಾನು ಮಾತನಾಡಲು ಸಿಕ್ಕಿಲ್ಲ. ಈಗ ಬೆಂಗಳೂರಿಗೆ ಬಂದಿದ್ದೇನೆ. ಒಂದೆರೆಡು ದಿನ ಫೋನ್‌ಗೆ ಸಿಗದೇ ಇದ್ದರೆ, ಹೀಗೆಲ್ಲ ಆಗುತ್ತೆ ಅಂತ ಗೊತ್ತಿರಲಿಲ್ಲ. ಒಂದು ವೇಳೆ ಕಾಣೆಯಾದವರನ್ನು ಪತ್ತೆ ಹಚ್ಚೋಕೆ ಪೊಲೀಸರು 24 ಗಂಟೆ ಸಮಯ ತೆಗೆದುಕೊಳ್ಳುತ್ತಾರೆ. ಆದರೆ, ಒಂದೆರೆಡು ಗಂಟೆ ಫೋನ್‌ ನಾಟ್‌ ರೀಚಬಲ್‌ ಆಗಿದ್ದಾಕ್ಷಣ, ಕಾಣೆಯಾಗಿದ್ದಾರೆ ಅನ್ನೋದು ಹೇಗೆ? ವಿನಾಕಾರಣ ಸುದ್ದಿ ಹಬ್ಬಿಸುವ ಮುನ್ನ, ಸ್ವಲ್ಪ ಯೋಚಿಸಬೇಕು’ ಎನ್ನುತ್ತಾರೆ ಪೂಜಾಗಾಂಧಿ.

ಪೂಜಾಗಾಂಧಿ ಅಭಿನಯಿಸುತ್ತಿರುವ “ಉತಾಹಿ’ ಶೇ. 50 ರಷ್ಟು ಚಿತ್ರೀಕರಣವಾಗಿದೆ. ಇಷ್ಟರಲ್ಲೇ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗುತ್ತಿದೆ. “ಉತಾಹಿ’ ಕನ್ನಡ, ತಮಿಳು, ತೆಲುಗು, ಮಲಯಾಳಿ, ಮರಾಠಿ ಭಾಷೆಯಲ್ಲಿ ತಯಾರಾಗುತ್ತಿದೆ. ಉಳಿದಂತೆ, ಶ್ರೀನಿವಾಸ್‌ರಾಜ್‌ ನಿರ್ದೇಶನದ “3′ ಸಿನಿಮಾ ಕೂಡ ರೆಡಿಯಾಗುತ್ತಿದೆ. ಅತ್ತ, ಪೂಜಾಗಾಂಧಿ ಅವರ ಬ್ಯಾನರ್‌ನಲ್ಲಿ ನಿರ್ಮಾಣಗೊಳ್ಳಲಿರುವ “ಬ್ಲ್ಯಾಕ್‌ ವರ್ಸಸ್‌ ವೈಟ್‌’ ಚಿತ್ರಕ್ಕೂ ತಯಾರಿ ನಡೆಯುತ್ತಿದೆ.

ಟಾಪ್ ನ್ಯೂಸ್

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.