ಚತುರನ ಜೊತೆ ಪೂಜಾ
Team Udayavani, Jan 30, 2018, 11:09 AM IST
ದೊಡ್ಡ ಗ್ಯಾಪ್ನ ನಂತರ ಪೂಜಾ ಲೋಕೇಶ್ ಅವರು “ಟೈಗರ್ ಗಲ್ಲಿ’ ಚಿತ್ರದ ಮೂಲಕ ಎಂಟ್ರಿಯಾಗಿದ್ದು ಎಲ್ಲರಿಗೂ ಗೊತ್ತಿದೆ. ಆ ಚಿತ್ರದಲ್ಲಿ ಅವರು ಜಡ್ಜ್ ಆಗಿ ನಟಿಸಿದ್ದರು. ಮುಂದೆ ಚಿತ್ರರಂಗದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವುದಾಗಿ ಹೇಳಿದ್ದ ಪೂಜಾ ಈಗ ಸದ್ದಿಲ್ಲದೇ “ಚತುರ’ ಎಂಬ ಸಿನಿಮಾ ಒಪ್ಪಿಕೊಂಡಿದ್ದಾರೆ.
ಹೌದು, ಪೂಜಾ ಲೋಕೇಶ್ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ವಿಶೇಷವೆಂದರೆ, ಅವರು ಈ ಚಿತ್ರದಲ್ಲಿ ಸಣ್ಣಪುಟ್ಟ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಪೂಜಾಗೆ ಜೋಡಿಯಾಗಿ ಮುನಿ ನಟಿಸುತ್ತಿದ್ದಾರೆ. ಹೆಚ್ಚಾಗಿ ಖಳನಟನಾಗಿ ಕಾಣಿಸಿಕೊಳ್ಳುತ್ತಿದ್ದ ಮುನಿ ಈ ಚಿತ್ರದಲ್ಲಿ ನಾಯಕ. ಬಹುತೇಕ ಸಿನಿಮಾ ಪೂಜಾ ಹಾಗೂ ಮುನಿ ಸುತ್ತ ಸಾಗಲಿದೆಯಂತೆ.
ಈ ಚಿತ್ರವನ್ನು ಸಾಮ್ರಾಟ್ ಎನ್ನುವವರು ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಗಾಯತ್ರಿ’ ಎಂಬ ಹಾರರ್ ಸಿನಿಮಾ ಮಾಡಿದ್ದ ಸಾಮ್ರಾಟ್ ಈಗ “ಚತುರ’ ಮಾಡುತ್ತಿದ್ದಾರೆ. ಹಳ್ಳಿಯಿಂದ ಪಟ್ಟಣಕ್ಕೆ ಬಂದ ಹುಡುಗಿಯನ್ನು ಜನ ಹೇಗೆಲ್ಲ ಕಾಣುತ್ತಾರೆ ಎಂಬ ಅಂಶದ ಮೇಲೆ ಈ ಕಥೆ ಸಾಗಲಿದೆ. ಫೆಬ್ರವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.
ಮಂಜು.ಎಸ್. ಪಟೇಲ್ ಸುಮತಿ ಶ್ರೀನಿವಾಸ್ ನಿರ್ಮಿಸುತ್ತಿರುವ ಚಿತ್ರಕ್ಕೆ ವಿನೋದ್ ಭಾರತಿ ಛಾಯಾಗ್ರಹಣ, ಅಭಿಷೇಕ್ ರಾಯ್ ಸಂಗೀತ, ಎಸ್. ಸಾಮ್ರಾಟ್ ಸಾಹಿತ್ಯ, ದುರ್ಗ ಪಿ.ಎಸ್. ಸಂಕಲನವಿದೆ. ಚಿತ್ರದಲ್ಲಿ ಶೋಭರಾಜ್, ಹರೀಶ್ ರಾಯ್ ಕೋಟೆ ಪ್ರಭಾಕರ್, ಪೆಟ್ರೋಲ್ ಪ್ರಸನ್ನ, ಕರುಣಾಕರ್, ಲಕ್ಷಿ ಸಿದ್ದಯ್ಯ, ವಾಸು, ಮೈಕೋ ನಾಗರಾಜ್, ಅನಂತ್ ವೇಲು, ಅಪೂರ್ವ, ರಾಣಿ ಮುಂತಾದವರು ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ