ತಮಿಳು ಸಿನಿಮಾದಲ್ಲಿ ಶಿವಣ್ಣ ನಟನೆ ಸಾಧ್ಯತೆ
Team Udayavani, Jan 4, 2021, 12:19 PM IST
ತಮಿಳು ಸಿನಿಮಾದಲ್ಲಿ ಶಿವಣ್ಣ ನಟಿಸಲಿದ್ದಾರಾ? -ಹೀಗೊಂದು ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಎದ್ದಿದೆ. ಅದಕ್ಕೆ ಕಾರಣ ಕಾರ್ತಿಕ್ ಸುಬ್ಬರಾಜು.
ತಮಿಳು ನಿರ್ದೇಶಕ ಕಾರ್ತಿಕ್ ಸುಬ್ಬರಾಜು ನಟ ವಿಕ್ರಂ ಅವರಿಗೆ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಪ್ರಮುಖ ಪಾತ್ರ ಮಾಡಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇತ್ತೀಚೆಗಷ್ಟೇ ನಿರ್ದೇಶಕ ಕಾರ್ತಿಕ್ ಸುಬ್ಬರಾಜು, ಶಿವರಾಜ್ಕುಮಾರ್ ಅವರನ್ನು ಭೇಟಿಯಾಗಿ ಸಿನಿಮಾದ ಕಥೆ ನಿರೂಪಿಸಿದ್ದಾರೆ. ಕಥೆ ಹಾಗೂ ತಮ್ಮ ಪಾತ್ರದ ಬಗ್ಗೆ ಕೇಳಿದ ಶಿವರಾಜ್ ಕುಮಾರ್ ಕೂಡಾ ಖುಷಿಯಾಗಿದ್ದಾರೆನ್ನ ಲಾಗಿದೆ. ಆದರೆ, ಅಧಿಕೃತ ವಾಗಿ ಸಿನಿಮಾ ಒಪ್ಪಿಕೊಂಡಿರುವ ಬಗ್ಗೆ ಇನ್ನಷ್ಟೇ ಅಂತಿಮವಾಗಬೇಕಿದೆ.
ಅಂದಹಾಗೆ, ಕಾರ್ತಿಕ್ ಸುಬ್ಬರಾಜು, “ಪಿಜ್ಜಾ’, “ಜಿಗರ್ಥಂಡಾ’, “ಪೆಟ್ಟಾ’ ಸೇರಿದಂತೆ ಕೆಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಈಗ ವಿಕ್ರಮ್ ಅವರಿಗೆ ಸಿನಿಮಾ ಮಾಡಲು ಹೊರಟಿದ್ದು, ಈ ಚಿತ್ರದಲ್ಲಿ ಶಿವರಾಜ್ಕುಮಾರ್ ಕೂಡಾ ನಟಿಸಲಿದ್ದಾರೆಂಬ ಸುದ್ದಿಯಂತೂ ಜೋರಾಗಿ ಕೇಳಿಬರುತ್ತಿದೆ.
ಇದನ್ನೂ ಓದಿ :ಹುಟ್ಟೂರಿನಲ್ಲಿ ಸಂಗೀತ ಲೋಕ ಸೃಷ್ಟಿಸಿದ ರವಿ ಬಸ್ರೂರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್