ಕೆಜಿಎಫ್ ಪ್ರಶಾಂತ್ ಹಾಗೂ ಪ್ರಭಾಸ್ ಕಾಂಬಿನೇಷನ್ ನಲ್ಲಿ ಹೊರಬರಲಿದೆ “ಸಲಾರ್” ಚಿತ್ರ
ಚಿತ್ರದ ಪೋಸ್ಟರ್ ನಲ್ಲಿ ಪ್ರಭಾಸ್ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
Team Udayavani, Dec 2, 2020, 7:45 PM IST
ನವದೆಹಲಿ: ಬಾಹುಬಲಿ ಖ್ಯಾತಿಯ ಪ್ರಭಾಸ್ , ಕೆ ಜಿ ಎಫ್ ಖ್ಯಾತಿಯ ಪ್ರಶಾಂತ್ ನೀಲ್ ಒಟ್ಟಾಗಿ ಸೇರಿ ಮಾಡಲು ಹೊರಟಿರುವ ಚಿತ್ರಕ್ಕೆ ಸಲಾರ್ ಎಂದು ಹೆಸರಿಟ್ಟಿದ್ದು, ಇತ್ತೀಚೆಗಷ್ಟೇ ಟೈಟಲ್ ಜೊತೆ ಜೊತೆಗೆ ಪಸ್ಟ್ ಲುಕ್ ಅನ್ನು ಚಿತ್ರ ತಂಡ ಬಿಡುಗಡೆಗೊಳಿಸಿದೆ.
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸೆಟ್ಟೆರಲಿರುವ ಚಿತ್ರ ಇದಾಗಿದ್ದು, ಚಿತ್ರದ ಪೋಸ್ಟರ್ ನಲ್ಲಿ ಪ್ರಭಾಸ್ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದಲ್ಲದೆ ಇದೊಂದು ಸಾಹಸಮಯ ಚಿತ್ರ ಎನ್ನಲಾಗುತ್ತಿದ್ದು, ಸಿನಿ ರಸಿಕರ ಕುತೂಹಲಕ್ಕೆ ಕಾರಣವಾಗಿದೆ.
ಇವರಿಬ್ಬರ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ಸಲಾರ್ ಒಂದು ಪ್ಯಾನ್ ಇಂಡಿಯಾ ಸಿನಿಮಾ ಆಗಲಿದ್ದು 5 ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಗೊಳಿಸಲಿಸಲಿದ್ದೇವೆ ಎಂದು ವರದಿಯಾಗಿದೆ.
ಇದನ್ನೂ ಓದಿ:ರೈತರ ಬಲವರ್ಧನೆಗೆ ಮೊದಲ ಆದ್ಯತೆ
ಬಾಹುಬಲಿ ಚಿತ್ರದ ಮೂಲಕ ಖ್ಯಾತರಾಗಿರುವ ಪ್ರಭಾಸ್ ಆದಿಪುರುಷ ಸಿನಿಮಾ ಒಳಗೊಂಡಂತೆ ಹಲವಾರು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯೂಸಿ ಆಗಿದ್ದಾರೆ. ಹಾಗೆಯೇ ನಿರ್ದೇಶಕ ಪ್ರಶಾಂತ್ ನೀಲ್ ಕೂಡಾ ಕನ್ನಡದ ಬಹು ನಿರೀಕ್ಷಿತ ಸಿನಿಮಾ ಕೆ ಜಿ ಎಫ್ ಚಿತ್ರದ ನಿರ್ದೇಶನದಲ್ಲಿ ತೊಡಗಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ