ಪ್ರಭುದೇವ ಹೊಸ ಚಿತ್ರಕ್ಕೆ ಸಂದೇಶ್ ನಾಗರಾಜ್ ನಿರ್ಮಾಣ
Team Udayavani, Feb 6, 2022, 3:41 PM IST
ಖ್ಯಾತ ಬಹುಭಾಷಾ ನಟ ಪ್ರಭುದೇವ ಅಭಿನಯದ ಹೊಸಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಆರಂಭವಾಗಿದ್ದು, “ಸಂದೇಶ್ ಪ್ರೊಡಕ್ಷನ್ಸ್’ ಬ್ಯಾನರ್ನಲ್ಲಿ ಸಂದೇಶ್ ನಾಗರಾಜ್ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.
ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲಿ ಏಕಕಾಲಕ್ಕೆ ಈ ಚಿತ್ರ ನಿರ್ಮಾಣವಾಗಲಿದ್ದು, ಚಿತ್ರದ ಟೈಟಲ್, ಇತರ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಈಗಾಗಲೇ ಈ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣದ ಕುರಿತು ಮಾತುಕಥೆ ಅಂತಿಮವಾಗಿದ್ದು, ಆದಷ್ಟು ಬೇಗ ಈ ಸಿನಿಮಾದ ಬಗ್ಗೆ ಮಾಹಿತಿ ನೀಡುವುದಾಗಿ ನಿರ್ಮಾಪಕ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.
ಇದನ್ನೂ ಓದಿ:ಮೌಲಾನರಿಂದ ಉರ್ದು ಕಲಿತಿದ್ದ ಭಾರತ ರತ್ನ ಲತಾ ಮಂಗೇಶ್ಕರ್!
ಈಗಾಗಲೇ ಸಂದೇಶ್, ಶಿವರಾಜ್ ಕುಮಾರ್ ನಟನೆಯಲ್ಲಿ ಸಿನಿಮಾವೊಂದನ್ನು ನಿರ್ಮಿಸಲಿದ್ದು, ಗುರುದತ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸದ್ಯ ಈ ಸಿನಿಮಾದ ತಯಾರಿಯಲ್ಲಿ ಚಿತ್ರತಂಡ ತೊಡಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…