ಟ್ವಿಟ್ಟರ್ ಟ್ರೆಂಡ್ ಆದ ಕೆಜಿಎಫ್ 2: ಫಸ್ಟ್ ಲುಕ್ ಬಿಡುಗಡೆ ದಿನಾಂಕ ಪ್ರಕಟಿಸಿದ ತಂಡ

Team Udayavani, Dec 14, 2019, 12:52 PM IST

ಬೆಂಗಳೂರು: ಸ್ಯಾಂಡಲ್ ವುಡ್ ನ ಬ್ಲಾಕ್ ಬಾಸ್ಟರ್ ಚಿತ್ರ ಕೆಜಿಎಫ್ ನ ಎರಡನೇ ಭಾಗಕ್ಕೆ ದೇಶದ ಜನ ಕಾತರಿಸುತ್ತಿದ್ದಾರೆ. ಕೆಜಿಎಫ್ ನ ಮೊದಲ ಭಾಗ ಬಿಡುಗಡೆಯಾಗಿ ಒಂದು ವರ್ಷವಾಗುವ ಸಮಯದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಸಿಹಿ ಸುದ್ದಿ ನೀಡಿದ್ದಾರೆ.

ಯಶ್ ಅಭಿನಯದ ಕೆಜಿಎಫ್ ಚಿತ್ರ ದೇಶದಾದ್ಯಂತ ಸೂಪರ್ ಹಿಟ್ ಆಗಿತ್ತು. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ಅದ್ದೂರಿ ಪ್ರದರ್ಶನ ಕಂಡಿತ್ತು.

ಇದೀಗ ಕೆಜೆಎಫ್ ಮೊದಲ ಭಾಗ ಬಿಡುಗಡೆಯಾದ ದಿನ ಅಂದರೆ ಡಿಸೆಂಬರ್ 21ರಂದು ಕೆಜಿಎಫ್ ಎರಡನೇ ಭಾಗದ ಫಸ್ಟ್ ಲುಕ್ ಬಿಡುಗಡೆಯಾಗಲಿದೆ. ಸ್ವತ: ನಿರ್ದೇಶಕ ಪ್ರಶಾಂತ್ ನೀಲ್ ಟ್ವಿಟ್ಟರ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿದ್ದು, ಸಂಜೆ 5.45ಕ್ಕೆ ಮೊದಲ ನೋಟವನ್ನು ಬಿಡುಗಡೆ ಮಾಡುವ ಬಗ್ಗೆ ಪ್ರಕಟಿಸದ್ದಾರೆ.

ಟ್ವಿಟ್ಟರ್ ನಲ್ಲಿ ಇದೀಗ ಕೆಜಿಎಫ್2 ಟ್ರೆಂಡಿಂಗ್ ಆಗಿದ್ದು, ಸಾವಿರಾರು ಜನ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ