Duet ಹಾಡಿಗೆ ‘ದೇಸಾಯಿ’ ಹೆಜ್ಜೆ: ಫ್ಯಾಮಿಲಿ ಕಥಾಹಂದರದಲ್ಲಿ ಪ್ರವೀಣ್‌-ರಾಧ್ಯಾ ಜೋಡಿ


Team Udayavani, Jan 18, 2024, 3:13 PM IST

praveen – Radhya in desai movie

“ಲವ್‌ 360′ ಖ್ಯಾತಿಯ ಪ್ರವೀಣ್‌ ಕುಮಾರ್‌ ಹಾಗೂ ರಾಧ್ಯಾ ಜೋಡಿಯಾಗಿ ಅಭಿನಯಿಸುತ್ತಿರುವ “ದೇಸಾಯಿ’ ಸಿನಿಮಾದ ಡ್ನೂಯೆಟ್‌ ಹಾಡೊಂದರ ಚಿತ್ರೀಕರಣ ಬೆಂಗಳೂರಿನ ಹೊರವಲಯದ ಖಾಸಗಿ ರೆಸಾರ್ಟ್‌ವೊಂದರಲ್ಲಿ ನಡೆಯಿತು. ಶಿವು ಬೇರ್ಗಿ ಸಾಹಿತ್ಯವಿರುವ, ಸಾಯಿಕಾರ್ತಿಕ್‌ ಸಂಗೀತ ಸಂಯೋಜಿಸಿರುವ ಈ ಹಾಡು ಮೋಹನ್‌ ಮಾಸ್ಟರ್‌ ನೃತ್ಯ ಸಂಜೋಜನೆಯಲ್ಲಿ ಮೂಡಿಬಂದಿದೆ.

“ಶ್ರೀವೀರಭದ್ರೇಶ್ವರ ಕ್ರಿಯೇಟಿವ್‌ ಫಿಲಂಸ್‌’ ಲಾಂಛನದಲ್ಲಿ ಮಹಾಂತೇಶ ವಿ. ಚೋಳಚಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ, “ದೇಸಾಯಿ’ ಸಿನಿಮಾಕ್ಕೆ ನಾಗಿರೆಡ್ಡಿ ಭಡ ನಿರ್ದೇಶನ ಮಾಡುತ್ತಿದ್ದಾರೆ. “ದೇಸಾಯಿ’ ಹಾಡಿನ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಮಾಧ್ಯಮಗಳನ್ನು ಆಹ್ವಾನಿಸಿದ್ದ ಚಿತ್ರತಂಡ, ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿ ನೀಡಿತು.

“ದೇಸಾಯಿ’ ಬಗ್ಗೆ ಮಾತನಾಡಿದ ನಿರ್ದೇಶಕ ನಾಗಿರೆಡ್ಡಿ ಭಡ, “ಇದೊಂದು ಕೌಟುಂಬಿಕ ಕಥಾಹಂದರದ ಸಿನಿಮಾ. ತಾತಾ, ತಂದೆ ಹಾಗೂ ಮಗ ಮೂರು ತಲೆಮಾರಿನ ಕಥೆ ಇದರಲ್ಲಿದೆ. ಸೆಂಟಿಮೆಂಟ್‌ ಸನ್ನಿವೇಶಗಳು ಚೆನ್ನಾಗಿ ಮೂಡಿಬಂದಿದೆ. ಜನರು ಬಯಸುವ ಎಲ್ಲಾ ಮನರಂಜನಾತ್ಮಕ ಅಂಶಗಳು ನಮ್ಮ ಸಿನಿಮಾದಲ್ಲಿದೆ. ಇನ್ನೊಂದು ಹಾಡು ಮುಗಿದರೆ ಚಿತ್ರೀಕರಣ ಮುಕ್ತಾಯವಾಗುತ್ತದೆ’ ಎಂದು ತಿಳಿಸಿದರು.

“ಈ ಸಿನಿಮಾದಲ್ಲಿ ಅಥ್ಲೆಟ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನನ್ನ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ’ ಎಂದರು ನಾಯಕ ಪ್ರವೀಣ್‌ ಕುಮಾರ್‌. “”ದೇಸಾಯಿ’ ಸಿನಿಮಾದಲ್ಲಿ ನನ್ನದು ಬೋಲ್ಡ್ ಹುಡುಗಿಯ ಪಾತ್ರ’ ಎಂಬುದು ನಾಯಕಿ ರಾಧ್ಯಾ ಮಾತು.

ನಿರ್ಮಾಪಕ ಮಹಂತೇಶ್‌ ವಿ ಚೋಳಚಗುಡ್ಡ, ಛಾಯಾಗ್ರಹಕ ಪಿಕೆಹೆಚ್‌ ದಾಸ್‌ ಸೇರಿದಂತೆ ಚಿತ್ರೀಕರಣದ ವೇಳೆ ಹಾಜರಿದ್ದ ಹಲವು ಕಲಾವಿದರು ಮತ್ತು ತಂತ್ರಜ್ಞರು “ದೇಸಾಯಿ’ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.