
‘ಸೈರನ್’ ಚಿತ್ರದಿಂದ ‘ಎಣ್ಣೆ ಹೊಡೆಯೋ ಟೈಮಲ್ಲಿ’ ಹಾಡು ಬಂತು
Team Udayavani, Jan 27, 2023, 2:43 PM IST

“ಸೈರನ್’ ಎಂಬ ಸಿನಿಮಾ ಆರಂಭವಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈ ಚಿತ್ರದ ಮೂಲಕ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಹೀರೋ ಆಗಿ ಎಂಟ್ರಿಕೊಡುತ್ತಿದ್ದಾರೆ.
ಇತ್ತೀಚೆಗೆ ಚಿತ್ರದ “ಎಣ್ಣೆ ಹೊಡೆಯೋ ಟೈಮಲ್ಲಿ…’ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗೆ ಈ ಹಾಡಿನ ಬಿಡುಗಡೆಯಲ್ಲಿ ಲಹರಿ ವೇಲು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಹಾಜರಿದ್ದು, ಶುಭಕೋರಿದರು. ಈ ಹಾಡನ್ನು ಮಂಗ್ಲಿ ಹಾಡಿದ್ದಾರೆ.
ಈ ಚಿತ್ರವನ್ನು ಮೂಲತಃ ತಮಿಳುನಾಡಿನವರಾದ ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ. “”ಸೈರನ್’ ಚಿತ್ರದ ಕೆಲಸಗಳು ಈಗಾಗಲೇ ಮುಗಿದಿದ್ದು, ಫೆಬ್ರವರಿ ಮೂರನೇ ವಾರದಲ್ಲಿ ರಿಲೀಸ್ ಮಾಡುವ ಪ್ಲ್ರಾನ್ ಇದೆ. ಈ ಸಿನಿಮಾವನ್ನು ನಾವು ಕನ್ನಡ ಮತ್ತು ತಮಿಳುನಲ್ಲಿ ಶೂಟ್ ಮಾಡಿದ್ದು, ತೆಲಗು ಮತ್ತು ಮಲಯಾಳಂಗೆ ಡಬ್ ಮಾಡಿ ರಿಲೀಸ್ ಮಾಡುತ್ತಿದ್ದೇವೆ. ನನ್ನ ಮೊದಲ ಚಿತ್ರವನ್ನು “ಡೆಕ್ಕನ್ ಕಿಂಗ್’ ಬ್ಯಾನರ್‌ಲ್ಲಿ ಬಿಜು ಶಿವಾನಂದ್ ಅವರು ನಿರ್ಮಿಸಿದ್ದಾರೆ. ಇದೊಂದು ಇನ್ವೆಸ್ಟಿಕೇಶನ್ ಮರ್ಡರ್ ಮಿಸ್ಟರಿ ಕಥೆ ಹೊಂದಿದ್ದು, ಇಲ್ಲಿ ನಾಯಕ ಪ್ರವೀರ್ ಯಂಗ್ ಆ್ಯಂಡ್ ಎನರ್ಜಿ ಇರುವ ಇನ್ವೆಸ್ಟಿಕೇಶನ್ ಆಫೀಸರ್ ಪಾತ್ರ ಮಾಡಿದ್ದಾರೆ’ ಎಂದು ಹೇಳಿದರು.
ನಂತರ ಮಾತನಾಡಿದ ಚಿತ್ರದ ನಾಯಕ ಪ್ರವೀರ್ ಶೆಟ್ಟಿ, ನಾನು ಇದರಲ್ಲಿ ಪೊಲೀಸ್ ಪಾತ್ರ ಮಾಡಿದ್ದೇನೆ. ಇದು ನನ್ನ ಮೊದಲ ಸಿನಿಮಾ. ಬಾಂಬೆಯ ಅನುಪಮ್ ಖೇರ್ ಟ್ರೈನಿಂಗ್ ಸ್ಕೂಲ್‌ನಲ್ಲಿ ತರಬೇತಿ ಪಡೆದಿದ್ದೇನೆ. ಈ ಚಿತ್ರದಲ್ಲಿ ಯಂಗ್ ಇನ್ವಸ್ಟಿಕೇಷನ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎಂದರು.
ಮಲಯಾಳಂ ಮೂಲದ ಲಾಸ್ಯ ಈ ಚಿತ್ರದ ನಾಯಕಿ. ಹೋಟೆಲ್ ಉದ್ಯಮ ನಡೆಸುತ್ತಿರುವ ಚಿತ್ರದ ನಿರ್ಮಾಪಕ ಬಿಜು ಶಿವಾನಂದ್ ಮಾತನಾಡಿ, “ಈ ಚ ತ್ರವನ್ನು ನಾವು ಗೆಳೆಯರು ಸೇರಿ ಕಷ್ಟಪಟ್ಟು ಮಾಡಿದ್ದೇವೆ. ಈ ಸಿನಿಮಾಗಾಗಿ ಎರಡು ವರ್ಷ ಶ್ರಮ ಹಾಕಲಾಗಿದೆ’ ಎಂದರು. ಇದೇ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮಗನ ಚಿತ್ರಕ್ಕೆ ಶುಭ ಹಾರೈಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್