“ಅದ್ಧೂರಿ-2’ಗೆ ತೆರೆಮರೆಯಲ್ಲಿ ಸಿದ್ಧತೆ!

ಸೀಕ್ವೆಲ್‌ ಚಿತ್ರದ ಬಗ್ಗೆ ನಟ ನಿರಂಜನ್‌ ಹೇಳ್ಳೋದೇನು?

Team Udayavani, May 13, 2019, 3:00 AM IST

niranjan

2012ರಲ್ಲಿ ತೆರೆಗೆ ಬಂದಿದ್ದ “ಅದ್ಧೂರಿ’ ಬಗ್ಗೆ ನಿಮಗೆಲ್ಲ ಗೊತ್ತೇ ಇದೆ. ಧ್ರುವ ಸರ್ಜಾ ಎನ್ನುವ ಸರ್ಜಾ ಕುಟುಂಬದ ಹುಡುಗನನ್ನ ಆ್ಯಕ್ಷನ್‌ ಪ್ರಿನ್ಸ್‌ ಆಗಿ ಚಿತ್ರರಂಗಕ್ಕೆ ಪರಿಚಯಿಸಿದ ಚಿತ್ರ ಅದು. ಈಗ ಅದೇ “ಅದ್ಧೂರಿ’ ಚಿತ್ರದ ಸೀಕ್ವೆಲ್‌ “ಅದ್ಧೂರಿ-2′ ತೆರೆಗೆ ಬರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಕೆಲ ದಿನಗಳಿಂದ ಜೋರಾಗಿ ಹರಿದಾಡುತ್ತಿದೆ.

ಅಂದಹಾಗೆ, ಈ ಹಿಂದೆ “ಅದ್ಧೂರಿ’ ಚಿತ್ರವನ್ನು ನಿರ್ಮಿಸಿದ್ದ “ಸಿಎಂಆರ್‌ ಪ್ರೊಡಕ್ಷನ್ಸ್‌” ಬ್ಯಾನರ್‌ನಲ್ಲೇ ಶಂಕರ್‌ ರೆಡ್ಡಿ, ಮೋಹನ್‌ ಈ ಚಿತ್ರವನ್ನು ನಿರ್ಮಿಸಲಾಗುತ್ತಿದ್ದು, ಈ ಬಾರಿಯ “ಅದ್ಧೂರಿ’ ಚಿತ್ರದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಚಿತ್ರವನ್ನು ರಮೇಶ್‌ ವೆಂಕಟೇಶ್‌ ಎಂಬ ನವ ಪ್ರತಿಭೆ ನಿರ್ದೇಶಿಸಲಿದ್ದಾರೆ ಅನ್ನೋದು ಸದ್ಯ ಹರಿದಾಡುತ್ತಿರುವ ಸುದ್ದಿ. ಹಾಗಾದರೆ, ನಿಜಕ್ಕೂ “ಅದ್ಧೂರಿ-2′ ಚಿತ್ರ ತೆರೆಗೆ ಬರಲಿದೆಯಾ? ಚಿತ್ರದಲ್ಲಿ ಯಾರ್ಯಾರು ಇರಲಿದ್ದಾರೆ? ಚಿತ್ರದ ಕಥೆ ಏನು? ಹೀಗೆ “ಅದ್ಧೂರಿ-2′ ಬಗ್ಗೆ ಹರಿದಾಡುತ್ತಿರುವ ಹತ್ತಾರು ಪ್ರಶ್ನೆಗಳಿಗೆ ನಟ ನಿರಂಜನ್‌ ಸುಧೀಂದ್ರ ಅವರೇ ಉತ್ತರಿಸಿದ್ದಾರೆ.

ಈ ಬಗ್ಗೆ ಮಾತನಾಡುವ ನಿರಂಜನ್‌, “ಅದ್ಧೂರಿ-2′ ಟೈಟಲ್‌ನಲ್ಲಿ ಅದೇ ಸೀಕ್ವೆಲ್‌ನಲ್ಲಿ ಸಿನಿಮಾ ಮಾಡಲು ತಯಾರಿ ನಡೆಯುತ್ತಿರುವುದೇನೋ ನಿಜ. ಈಗಾಗಲೇ ಅದರ ನಿರ್ಮಾಪಕರು ಮತ್ತು ನಿರ್ದೇಶಕರ ಜೊತೆ ಒಂದೆರಡು ಸುತ್ತಿನ ಮಾತುಕತೆಯೂ ನಡೆದಿದೆ. ಕಥೆಯ ಎಳೆ ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ. ಕಥೆಯನ್ನು ಕೇಳಿದಾಗ ನನಗೂ ಇಷ್ಟವಾಗಿದೆ.

ಆದರೆ ಸ್ಕ್ರಿಪ್ಟ್ ಮೇಲೆ ಇನ್ನೂ ಒಂದಷ್ಟು ಕೆಲಸ ನಡೆಯುತ್ತಿರುವುದರಿಂದ, ಚಿತ್ರದ ಕಲಾವಿದರು, ತಂತ್ರಜ್ಞರು, ಶೂಟಿಂಗ್‌ ಮತ್ತಿತರ ಯಾವುದೇ ಸಂಗತಿಗಳು ಅಂತಿಮವಾಗಿಲ್ಲ. ಸ್ಕ್ರಿಪ್ಟ್ ಅಂತಿಮವಾದ ಬಳಿಕವಷ್ಟೇ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಮಾಡಬಹುದು. ಇತರೆ ವಿಷಯಗಳನ್ನು ಹಂಚಿಕೊಳ್ಳಬಹುದು’ ಎನ್ನುತ್ತಾರೆ.

“ಸದ್ಯ “ಅದ್ಧೂರಿ-2′ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ತಿಂಗಳ ಅಂತ್ಯದೊಳಗೆ ಈ ಚಿತ್ರದ ಬಗ್ಗೆ ಸ್ಪಷ್ಟತೆ ಸಿಗಲಿದೆ. ಆಮೇಲೆ ಆ ಚಿತ್ರದ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಬಹುದು’ ಎನ್ನುವುದು ನಿರಂಜನ್‌ ಮಾತು.

ಇನ್ನು ಪ್ರಿಯಾಂಕ ಉಪೇಂದ್ರ ಅಭಿನಯದ “ಸೆಕೆಂಡ್‌ ಹಾಫ್’ ಚಿತ್ರದ ಮೂಲಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾದ ನಿರಂಜನ್‌ ಈಗ “ನಮ್‌ ಹುಡುಗ್ರು ಕಥೆ’ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಇದೇ ಸೆಪ್ಟೆಂಬರ್‌ ವೇಳೆಗೆ ಈ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ. ಒಟ್ಟಾರೆ “ಅದ್ಧೂರಿ-2′ ಬಗ್ಗೆ ಹರಿದಾಡುತ್ತಿರುವ ಎಲ್ಲಾ ಅಂತೆ-ಕಂತೆಗಳಿಗೆ ಸ್ಪಷ್ಟತೆ ಸಿಗಬೇಕಾದರೆ ಇನ್ನೂ ಕೆಲವು ದಿನಗಳು ಕಾಯಬೇಕಾಗುತ್ತದೆ ಅನ್ನೋದು ಚಿತ್ರತಂಡದ ಮೂಲಗಳ ಮಾಹಿತಿ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.