ಶೇಕಡವಾರು ಪದ್ಧತಿಗೆ ನಿರ್ಮಾಪಕರ ಸಂಘದ ಆಗ್ರಹ

ಸಮನ್ವಯ ಸೂತ್ರಕ್ಕಾಗಿ ಸಮಿತಿ ರಚನೆಗೆ ನಿರ್ಧಾರ

Team Udayavani, Feb 4, 2020, 7:01 AM IST

shekada

ಸದ್ಯ ಇತರೆ ರಾಜ್ಯಗಳಲ್ಲಿ ಸದ್ಯ ಜಾರಿಯಲ್ಲಿ ಇರುವಂತೆ ಸಿಂಗಲ್‌ ಸ್ಕ್ರೀನ್‌ ಮತ್ತು ಮಲ್ಟಿಫ್ಲೆಕ್ಸ್‌ ಚಿತ್ರಮಂದಿರಗಳಲ್ಲಿನ ಶೇಕಡವಾರು ಪದ್ದತಿಯನ್ನು ಕರ್ನಾಟಕದ ಸಿಂಗಲ್‌ ಸ್ಕ್ರೀನ್‌ ಮತ್ತು ಮಲ್ಟಿಫ್ಲೆಕ್ಸ್‌ ಚಿತ್ರಮಂದಿರಗಳಲ್ಲೂ ಜಾರಿಗೆ ತರುವಂತೆ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ ಒತ್ತಾಯಿಸಿದೆ. ಸೋಮವಾರ ನಿರ್ಮಾಪಕರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ನಿರ್ಮಾಪಕರ ಸಂಘದ ಅಧ್ಯಕ್ಷ ಡಿ.ಕೆ ರಾಮಕೃಷ್ಣ (ಪ್ರವೀಣ್‌ ಕುಮಾರ್‌), “ಕರ್ನಾಟಕವನ್ನು ಹೊರತುಪಡಿಸಿ ಬಹುತೇಕ ಬೇರೆ ಎಲ್ಲಾ ರಾಜ್ಯಗಳಲ್ಲೂ ಈಗಾಗಲೇ ಚಿತ್ರಗಳು ಏಕಪರದೆ ಮತ್ತು ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಶೇಕಡವಾರು ಪದ್ಧತಿಯಲ್ಲಿ ಪ್ರದರ್ಶನಗೊಳ್ಳುತ್ತಿವೆ.

ಆದರೆ ನಮ್ಮಲ್ಲಿ ಮಾತ್ರ ಕೆಲವು ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ ಗಳನ್ನು ಹೊರತುಪಡಿಸಿದರೆ, ಬಹುತೇಕ ಉಳಿದ ಬಹುತೇಕ ಏಕಪರದೆ ಮತ್ತು ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಬಾಡಿಗೆಯ ಆಧಾರದ ಮೇಲೆ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. ಮುಂಚಿತವಾಗಿಯೇ ನಿರ್ಮಾಪಕರು ಮತ್ತು ವಿತರಕರಿಂದ ಪ್ರದರ್ಶಕರು ಬಾಡಿಗೆಯನ್ನು ಪಡೆದುಕೊಳ್ಳುತ್ತಾರೆ. ಇದರಿಂದ ಸಾಮಾನ್ಯ ನಿರ್ಮಾಪಕರಿಗೆ ದೊಡ್ಡ ದೊಡ್ಡ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ತಮ್ಮ ಚಿತ್ರವನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಆದಷ್ಟು ಬೇಗ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ ಸಿಂಗಲ್‌ ಸ್ಕ್ರೀನ್‌ ಮತ್ತು ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲೂ ಶೇಕಡವಾರು ಪದ್ದತಿ ಜಾರಿಯಾಗಬೇಕು’ ಎಂದರು.

“ಸಿಂಗಲ್‌ ಸ್ಕ್ರೀನ್‌ ಮತ್ತು ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಶೇಕಡವಾರು ಪದ್ದತಿ ಜಾರಿಯಾಗುವುದರಿಂದ ನಿರ್ಮಾಪಕರು, ವಿತರಕರು, ಪ್ರದರ್ಶಕರು ಎಲ್ಲರಿಗೂ ಅನುಕೂಲವಿದೆ. ಆದ್ದರಿಂದ ಎಲ್ಲರ ಸಮ್ಮತಿಯಿಂದ ಶೇಕಡವಾರು ಪದ್ದತಿ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಶೇಕಡವಾರು ಪದ್ದತಿಯ ಜಾರಿಯಿಂದಾಗುವ ಅನುಕೂಲ- ಅನಾನುಕೂಲತೆ ಗಳನ್ನು ಬಗ್ಗೆ ಅಧ್ಯಯನ ಮಾಡಲು ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರ ವಲಯವನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.

ಶೀಘ್ರದಲ್ಲಿಯೇ ಈ ಸಮಿತಿ ವರದಿ ನೀಡಲಿದ್ದು, ಆ ನಂತರ ಚಿತ್ರರಂಗದ ಎಲ್ಲರೊಂದಿಗೆ ಚರ್ಚಿಸಿ ಶೇಕಡವಾರು ಪದ್ದತಿ ಜಾರಿಗೆ ತರಲಾಗುವುದು. ನಿರ್ಮಾಪಕರ ಸಂಘದ ನೇತೃತ್ವದ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿ ಮಾರ್ಗದರ್ಶನದಂತೆ ಏಪ್ರಿಲ್‌ ಮೊದಲವಾರದಿಂದ ಶೇಕಡ ವಾರು ಪದ್ದತಿಯಲ್ಲಿ ಚಿತ್ರಗಳನ್ನು ಪ್ರದರ್ಶನಗೊಳ್ಳುವಂತೆ ಮಾಡುವ ಯೋಚನೆಯಿದೆ’ ಎಂದರು. “ಶೇಕಡವಾರು ಪದ್ದತಿಯ ಜೊತೆಗೆ ಎಲ್ಲ ಥಿಯೇಟರ್‌ಗಳು ಗಣಕೀಕೃತವಾಗಬೇಕು, ಮತ್ತು ಪ್ರೇಕ್ಷಕರಿಗೆ ಥಿಯೇಟರ್‌ಗಳಲ್ಲಿ ಅಗತ್ಯ ಮೂಲ ಸೌರ್ಯಗಳು ಸಿಗುವಂತಾಗಬೇಕು, ಪ್ರದರ್ಶಕರು, ವಿತರಕರು ಮತ್ತು ನಿರ್ಮಾಪಕರ ನಡುವೆ ಪಾರದರ್ಶಕ ವ್ಯವಹಾರ ನಡೆಯುವಂತಾಗಬೇಕು.

ಚಿತ್ರರಂಗದ ಬೆಳವಣಿಗೆಯ ದೃಷ್ಟಿಯಿಂದ, ಒಳಿತಿಗಾಗಿ ಎಲ್ಲರ ಇಂಥ ದ್ದೊಂದು ಬದಲಾವಣೆ ಆಗಬೇಕಾಗಿದೆ. ಬಹುತೇಕ ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರು ಈ ಸೂತ್ರವನ್ನು ಒಪ್ಪಿಕೊಂಡಿದ್ದಾರೆ’ ಎಂಬುದು ಅವರ ಮಾತು. ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕರ ಸಂಘದ ಉಪಾಧ್ಯಕ್ಷ ಎಂ.ಜಿ ರಾಮಮೂರ್ತಿ, ಗೌರವ ಕಾರ್ಯದರ್ಶಿ ಕೆ. ಮಂಜು, ಜಂಟಿ ಕಾರ್ಯದರ್ಶಿ ರಮೇಶ್‌ ಯಾದವ್‌, ಖಜಾಂಚಿ ಆರ್‌.ಎಸ್‌ ಗೌಡ, ನಿರ್ಮಾಪಕ ಕರಿಸುಬ್ಬು, ಪ್ರದರ್ಶಕರಾದ ನರಸಿಂಹಲು ಸೇರಿದಂತೆ ಅನೇಕ ನಿರ್ಮಾಪಕರು, ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.