ಚಿತ್ರೀಕರಣದಲ್ಲಿ ಬಿಝಿಯಾಗಿದೆ ಪೃಥ್ವಿ, ಮಿಲನಾ ನಾಗರಾಜ್ ರ ‘ಫಾರ್ ರಿಜಿಸ್ಟ್ರೇಷನ್’
Team Udayavani, Feb 26, 2021, 10:21 AM IST
“ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಮತ್ತು ಮಿಲನಾ ನಾಗರಾಜ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ “ಫಾರ್ ರಿಜಿಸ್ಟ್ರೇಷನ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಯಿತು.
ಮೊದಲ ಹಂತದ ಚಿತ್ರೀಕರಣದಲ್ಲಿ “ಫಾರ್ ರಿಜಿಸ್ಟ್ರೇಷನ್’ ಚಿತ್ರದ ಹಾಡಿನ ಚಿತ್ರೀಕರಣವನ್ನು ನಡೆಸಲಾಗಿದ್ದು, ಮಂಗಳೂರು, ಉಡುಪಿ ಸುತ್ತಮುತ್ತಲಿನ ಕಡಲ ಕಿನಾರೆಯಲ್ಲಿ ಹಾಡಿನ ದೃಶ್ಯಗಳನ್ನು ಸೆರೆಹಿಡಿಯಲಾಯಿತು.
ಸದ್ಯ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ “ಫಾರ್ ರಿಜಿಸ್ಟ್ರೇಷನ್’ ಚಿತ್ರತಂಡ, ಮಾರ್ಚ್ ಅಂತ್ಯದ ವೇಳೆಗೆ ಎರಡನೇ ಹಂತದ ಚಿತ್ರೀಕರಣ ಆರಂಭಿಸಲು ಯೋಜನೆ ಹಾಕಿಕೊಂಡಿದೆ.
ಇದನ್ನೂ ಓದಿ:ಪ್ರೇಕ್ಷಕರಿಗೆ ಅಪಥ್ಯವಾಗಿದ್ದು ಸೆನ್ಸಾರ್ಗೆ ಪಥ್ಯ ಹೇಗೆ? ವಿವಾದಿತ ದೃಶ್ಯಗಳಿಗೆ ಯಾರು ಹೊಣೆ?
“ನಿಶ್ಚಲ್ ಫಿಲಂಸ್’ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ “ಫಾರ್ ರಿಜಿಸ್ಟ್ರೇಷನ್’ ಚಿತ್ರಕ್ಕೆ ನವೀನ್ ರಾವ್ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ನವೀನ್ ದ್ವಾರಕನಾಥ ನಿದೇಶನವಿದೆ.
ಚಿತ್ರದಲ್ಲಿ ಪೃಥ್ವಿ, ವಿಲನಾ ನಾಗರಾಜ್ ಅವರೊಂದಿಗೆ ಸುಧಾರಾಣಿ, ಸುಂದರ ರಾಜ್, ಸಿಹಿಕಹಿ ಚಂದ್ರು, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ತಬಲ ನಾಣಿ, ತ್ರಿವೇಣಿ ರಾವ್, ಅರವಿಂದ್ ಬೋಳಾರ್ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ವಿವೇಕ್ ಎಸ್.ಕೆ ಛಾಯಾಗ್ರಹಣ ವಿದ್ದು, ಹರೀಶ್ ಆರ್.ಕೆ ಹಾಡುಗಳಿಗೆ ಸಂಗೀತ ನೀಡಿದ್ದಾರೆ.
ಈಗಾಗಲೇ “ಫಾರ್ ರಿಜಿಸ್ಟ್ರೇಷನ್’ ಚಿತ್ರೀಕರಣದ ಕೆಲವು ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಒಂದಷ್ಟು ಸದ್ದು ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ