ಪೈಲ್ವಾನ್‌ಗೆ ಪುನೀತ್‌ ಗೆಸ್ಟ್‌

ಆ.9 ಕೋಟೆ ನಾಡು ಚಿತ್ರದುರ್ಗದಲ್ಲಿ ಹಾಡು ಹಬ್ಬ

Team Udayavani, Aug 7, 2019, 3:02 AM IST

ಸುದೀಪ್‌ ಅಭಿನಯದ ಬಹುನಿರೀಕ್ಷಿತ ಚಿತ್ರ “ಪೈಲ್ವಾನ್‌’ ಬಿಡುಗಡೆಗೆ ಸಜ್ಜಾಗಿದೆ. ಈ ಹಿಂದೆ ಚಿತ್ರದುರ್ಗದಲ್ಲಿ “ಪೈಲ್ವಾನ್‌’ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿತ್ತು. ಆದರೆ, ಕೆಲ ಕಾರಣಗಳಿಂದ ಕಾರ್ಯಕ್ರಮ ಮುಂದಕ್ಕೆ ಹೋಗಿತ್ತು. ಈಗ ಆ.9 ಮಹಾ ಲಕ್ಷ್ಮೀ ಹಬ್ಬದ ದಿನದಂದು ಚಿತ್ರದುರ್ಗದಲ್ಲಿ “ಪೈಲ್ವಾನ್‌’ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ.

ಈ ಕಾರ್ಯಕ್ರಮದ ವಿಶೇಷವೆಂದರೆ, ಪುನೀತ್‌ ರಾಜಕುಮಾರ್‌ ಅವರು ಕಾರ್ಯಕ್ರಮದ ಅತಿಥಿಯಾಗಿ ಆಗಮಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಟೀಸರ್‌ ಮತ್ತು ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಎಲ್ಲರಲ್ಲೂ ಹೊಸದೊಂದು ಕುತೂಹಲ ಹುಟ್ಟುಹಾಕಿದ್ದ ಚಿತ್ರತಂಡ, ಈಗ ಆಡಿಯೋ ಬಿಡುಗಡೆ ಸಮಾರಂಭವನ್ನು ಚಿತ್ರದುರ್ಗದಲ್ಲಿ ನೆರವೇರಿಸುವ ಮೂಲಕ ಮತ್ತೂಂದು ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಆ.9 ರಂದು ಚಿತ್ರದುರ್ಗದಲ್ಲಿ “ಪೈಲ್ವಾನ್‌’ ಕಾಣಿಸಿಕೊಳ್ಳುತ್ತಿದ್ದು, ಅಲ್ಲಿ ನಡೆಯಲಿರುವ ವರ್ಣರಂಜಿತ ಕಾರ್ಯಕ್ರಮದಲ್ಲಿ ಹಾಡುಗಳು ಬಿಡುಗಡೆಯಾಗಲಿವೆ. ಇಷ್ಟು ದಿನ “ಪೈಲ್ವಾನ್‌’ ಚಿತ್ರದ ಹಾಡುಗಳು ಹೇಗಿರಲಿವೆ ಎಂಬ ಪ್ರಶ್ನೆಗೆ ಆ.9 ರಂದು ಉತ್ತರ ಸಿಗಲಿದೆ. ಅಂದಹಾಗೆ, ಅಂದು ನಡೆಯಲಿರುವ ಕಲರ್‌ಫ‌ುಲ್‌ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಬಾಲಿವುಡ್‌ ನಟ ಸುನೀಲ್‌ಶೆಟ್ಟಿ ಕೂಡ ಆಗಮಿಸುತ್ತಿರುವುದು ವಿಶೇಷ. ಇದೇ ಮೊದಲ ಬಾರಿಗೆ ಸುನೀಲ್‌ ಶೆಟ್ಟಿ ಅವರು, “ಪೈಲ್ವಾನ್‌’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಅಷ್ಟೇ ಅಲ್ಲ, ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿರುವ ಕಲ್ಲಿನಕೋಟೆ ಚಿತ್ರದುರ್ಗಕ್ಕೂ ಮೊದಲ ಸಲ ಭೇಟಿ ನೀಡುತ್ತಿರುವುದು ವಿಶೇಷ. ಇನ್ನು, ಸುದೀಪ್‌ ಅಭಿಮಾನಿಗಳಂತೂ, “ಪೈಲ್ವಾನ್‌’ ಹಾಡುಗಳನ್ನು ಬರಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕಕೊಳ್ಳುತ್ತಿದ್ದಾರೆ. ಅಂದಹಾಗೆ, ಈ ಹಿಂದೆ ದಾವಣಗೆರೆಯಲ್ಲಿ ಸುದೀಪ್‌ ಅಭಿನಯದ “ಹೆಬ್ಬುಲಿ’ ಚಿತ್ರದ ಆಡಿಯೋ ಬಿಡುಗಡೆ ಮಾಡಲಾಗಿತ್ತು. ಈಗ “ಪೈಲ್ವಾನ್‌’ ಚಿತ್ರದ ಹಾಡುಗಳನ್ನು ಚಿತ್ರದುರ್ಗದಲ್ಲಿ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ