ಜನವರಿಯಲ್ಲಿ ಪುನೀತ್ ಹೊಸ ಚಿತ್ರ ಶುರು
ಸದ್ದಿಲ್ಲದೆ ನಡೆಯುತ್ತಿದೆ "ಜೇಮ್ಸ್'ಗೆ ತಯಾರಿ
Team Udayavani, Nov 7, 2019, 5:04 AM IST
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸದ್ಯ “ಯುವರತ್ನ’ ಚಿತ್ರದಲ್ಲಿ ಬಿಝಿಯಾಗಿದ್ದಾರೆ. ಸದ್ಯ ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿರುವಾಗಲೇ, ಪುನೀತ್ ಅಭಿನಯಿಸುತ್ತಿರುವ ಮುಂಬರುವ ಚಿತ್ರಗಳ ಕೆಲಸಗಳಿಗೂ ತೆರೆಮರೆಯಲ್ಲಿ ಚಾಲನೆ ಸಿಕ್ಕಿದೆ.
ಮೂಲಗಳ ಪ್ರಕಾರ, “ಯುವರತ್ನ’ ಚಿತ್ರದ ಬಳಿಕ ಪುನೀತ್ ರಾಜಕುಮಾರ್, ಬಹದ್ದೂರ್ ಚೇತನ್ ಕುಮಾರ್ ನಿರ್ದೇಶನದ “ಜೇಮ್ಸ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಈಗಾಗಲೇ “ಜೇಮ್ಸ್’ ಪ್ರೀ-ಪ್ರೊಡಕ್ಷನ್ ಕೆಲಸಗಳಿಗೆ ಚಾಲನೆ ಸಿಕ್ಕಿದೆ. ಸದ್ಯ “ಜೇಮ್ಸ್’ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಇದೇ ತಿಂಗಳಾಂತ್ಯಕ್ಕೆ “ಜೇಮ್ಸ್’ ಸೆಟ್ಟೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನು ಇಲ್ಲಿಯವರೆಗೂ ಕಾಣಿಸಿಕೊಂಡಿರದ ವಿಭಿನ್ನ ಪಾತ್ರದಲ್ಲಿ ಪುನೀತ್ ರಾಜಕುಮಾರ್ ಅವರನ್ನು “ಜೇಮ್ಸ್’ ಲುಕ್ನಲ್ಲಿ ಪ್ರೇಕ್ಷಕರ ಮುಂದೆ ತರಲು ತಯಾರಿ ನಡೆಸುತ್ತಿರುವ ನಿರ್ದೇಶಕ ಚೇತನ್ ಕುಮಾರ್, ಅದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಜನವರಿ ವೇಳೆಗೆ “ಜೇಮ್ಸ್’ ಚಿತ್ರೀಕರಣ ಶುರುವಾಗುವ ಸಾಧ್ಯತೆಯಿದ್ದು, ಮುಂದಿನ ವರ್ಷದ ಮಧ್ಯ ಭಾಗದಲ್ಲಿ “ಜೇಮ್ಸ್’ ಗೆಟಪ್ನಲ್ಲಿ ಪುನೀತ್ ಅವರನ್ನು ಅಭಿಮಾನಿಗಳು ತೆರೆಮೇಲೆ ನೋಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ