“ಪುರ್‌ಸೋತ್‌ ರಾಮ’ ಬಿಝಿಯಾಗ್ಬಿಟ್ಟ

Team Udayavani, Jan 15, 2020, 7:00 AM IST

ಕನ್ನಡದಲ್ಲಿ ಬರುತ್ತಿರುವ ಹಾಸ್ಯ ಚಿತ್ರಗಳ ಸಾಲಿಗೆ ಈಗ “ಪುರ್‌ಸೋತ್‌ ರಾಮ’ ಚಿತ್ರವೂ ಸೇರಿದೆ. ಅಂದಹಾಗೆ, ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಮಾನಸದೇವಿ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಮಾನಸ ನಿರ್ಮಿಸುತ್ತಿರುವ “ಪುರ್‌ಸೋತ್‌ರಾಮ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರವಿಶಂಕರ್‌ ಗೌಡ ಹಾಗು ಶಿವರಾಜ್‌ಕೆ.ಆರ್‌.ಪೇಟೆ ಚಿತ್ರದ ಪ್ರಮುಖ ಆಕರ್ಷಣೆ.

ಇವರಿಬ್ಬರೂ ಹಾಸ್ಯ ಕಲಾವಿದರು ಎಂಬುದು ಗೊತ್ತು. ಇಬ್ಬರು ಜೊತೆಯಲ್ಲಿದ್ದಾರೆ ಅಂದರೆ, ಅದೊಂದು ಪಕ್ಕಾ ಹಾಸ್ಯಮಯ ಸಿನಿಮಾ ಅನ್ನುವುದು ಗ್ಯಾರಂಟಿ. ಬೆಂಗಳೂರು ಸುತ್ತಮುತ್ತ 30ದಿನಗಳ ಚಿತ್ರೀಕರಣ ನಡೆದಿದೆ. ಪ್ರಭುದೇವ್‌ ಅವರು ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಸರು ನಿರ್ದೇಶಿಸಿದ್ದಾರೆ. ನಾಲ್ಕು ಹಾಡುಗಳಿರುವ ಚಿತ್ರಕ್ಕೆ ಶುಧ್ದೋರಾಯ್‌ ಸಂಗೀತ ನೀಡಿದ್ದಾರೆ.

ಕಿರಣ್‌ ಕುಮಾರ್‌ ಛಾಯಾಗ್ರಹಣವಿದೆ. ಚಂದನ್‌ ಸಂಕಲನ, ಈಶ್ವರಿ ಕುಮಾರ್‌ ಕಲಾ ನಿರ್ದೇಶನ ಹಾಗೂ ರಾಜ್‌ಕಿಶೋರ್‌, ಮದನ್‌ – ಹರಿಣಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ರಭುದೇವ್‌ ಹಾಗೂ ಧ್ರುವ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಚಿತ್ರದಲ್ಲಿ ರಿತಿಕ್‌ ಸರು, ಸಹನ, ಮಾನಸ, ಅನುಷಾ ಪಕಾಲಿ, ಕುರಿ ಪ್ರತಾಪ್‌, ಬ್ಯಾಂಕ್‌ ಜನಾರ್ದನ್‌, ಆರ್‌.ಟಿ.ರಮಾ ಇತರರು ನಟಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ಇದುವರೆಗೆ ಕಪ್ಪು ಬಿಳುಪಿನಲ್ಲಿದ್ದು, ಮುಖ ಗುರುತು ಸಿಗುವುದು ಕಷ್ಟ ಎಂಬಂತಿದ್ದ ಮತದಾರರ ಗುರುತಿನ ಚೀಟಿ ಈಗ ಬಾರ್‌ಕೋಡ್‌, ಕಲರ್‌ ಫೋಟೋ ಸಹಿತ ಬಹು ವರ್ಣಗಳಲ್ಲಿ...

  • ಅಂಡಮಾನಿನ ಎಲ್ಲ ಗೂಬೆಗಳೂ ಕ್ಯಾಮೆರಾಗಳಲ್ಲಿ ಬಂಧಿಯಾದವು; ಒಂದನ್ನು ಬಿಟ್ಟು. ಒಳಬಾರದೆ ಹೊರವುಳಿದ ಗೂಬೆಯೆಂದರೆ, ಅಂಡಮಾನ್‌ ಬಾರ್ನ್ ಔಲ್‌. ಅಂದರೆ, ಅಂಡಮಾನ್‌...

  • ಲಂಕೆಯಲ್ಲಿ ಯುದ್ಧವೆಲ್ಲ ಮುಗಿದು, ಮರಳುವಾಗ ವಿಮಾನದ ಮೇಲಿಂದ ರಾಮನು ತನ್ನೊಲವಿನ ಮಡದಿ ಸೀತೆಗೆ ರಾಮೇಶ್ವರಂನ ದ್ವೀಪವನ್ನು ತೋರಿಸಿ- "ನೋಡಿಲ್ಲಿ, ಈ ದ್ವೀಪದಲ್ಲೇ...

  • ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಈಗಾಗಲೇ ಶುರುವಾಗಿದ್ದು, 26ಕ್ಕೆ ಕೊನೆಗೊಳ್ಳಲಿದೆ. ಜಗತ್ತಿಗೆ ಶಾಂತಿ ಬೋಧಿಸಿದ ಈ ಮಠದಲ್ಲಿ ಭೋಜನವೂ...

  • ರಂಗದ ಮೇಲೆ ಮಿಂಚಿನ ಬಳ್ಳಿಯೊಂದು ಝಳಪಿಸಿದಂತೆ ಅದಮ್ಯ ಚೈತನ್ಯದಿಂದ ಲೀಲಾಜಾಲವಾಗಿ ನರ್ತಿಸಿದವಳು ಭರತನಾಟ್ಯ ಕಲಾವಿದೆ ಹರ್ಷಿತಾ ಜಗದೀಶ್‌. ಅದು ಅವಳ ಮೊದಲ ರಂಗಾರ್ಪಣೆ...